• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಟ್ಟಿಂಗ್‌‌ನಲ್ಲಿ 25 ಲಕ್ಷ ಕಳೆದುಕೊಂಡಿದ್ದ ಸಮೃದ್ಧಿ ರಾಮ್‌: ತಂಗಿ ವಿರುದ್ಧವೇ ನಟಿ ಕಾರುಣ್ಯ ದೂರು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 15, 2026 - 11:31 am
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 01 15T112506.543

ಬೆಂಗಳೂರು, ಜ.15: ಕನ್ನಡ ಚಿತ್ರರಂಗದ ನಟಿ ಹಾಗೂ ಮಾಜಿ ಬಿಗ್ ಬಾಸ್ ಸ್ಪರ್ಧಿ ಕಾರುಣ್ಯ ರಾಮ್ (Karunya Ram) ಅವರು ಸ್ವಂತ ತಂಗಿಯ ವಿರುದ್ಧವೇ ವಂಚನೆ ಆರೋಪ ಹೊರಿಸಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಮೇಕಪ್ ಆರ್ಟಿಸ್ಟ್ ಆಗಿರುವ ಸಹೋದರಿ ಸಮೃದ್ಧಿ ರಾಮ್ (Samrudhi Ram) ಅವರು ಆನ್‌ಲೈನ್ ಬೆಟ್ಟಿಂಗ್ ವ್ಯಸನಕ್ಕೆ ಬಿದ್ದು, ಸುಮಾರು 25 ಲಕ್ಷ ರೂಪಾಯಿ ಸಾಲ ಮಾಡಿಕೊಂಡು, ಅದನ್ನು ತೀರಿಸಲು ಮನೆಯಲ್ಲಿದ್ದ ಹಣ ಹಾಗೂ ಚಿನ್ನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಕಾರುಣ್ಯ ರಾಮ್ ಗಂಭೀರ ಆರೋಪ ಮಾಡಿದ್ದಾರೆ.

ಈ ಸಂಬಂಧ ಕಾರುಣ್ಯ ರಾಮ್ ಅವರು ಬೆಂಗಳೂರಿನ ಆರ್.ಆರ್ ನಗರ ವ್ಯಾಪ್ತಿಯ ಸಿಸಿಬಿ ಪೊಲೀಸ್ ಠಾಣೆಯಲ್ಲಿ ಸಮೃದ್ಧಿ ರಾಮ್ ಸೇರಿದಂತೆ ಪ್ರತಿಭಾ, ಕಪಿಲ್, ಪ್ರಜ್ವಲ್, ರಕ್ಷಿತ್ ಮತ್ತು ಸಾಗರ್ ಎಂಬವರ ವಿರುದ್ಧ ದೂರು ದಾಖಲಿಸಿದ್ದಾರೆ.

RelatedPosts

ನ್ಯೂ ಟೈಟಲ್..ಭಾರತಕ್ಕಿಂತ ಮೊದಲೇ ಚೀನಾದಲ್ಲಿ ರಾಮಾಯಣ ದರ್ಶನ

ಸ್ವಾತಂತ್ರ್ಯೋತ್ಸವದಂದು ‘ವಂದೇ ಮಾತರಂ’ ಹಾಡಿಗೆ ಸೋನಿಯಾ ಗಾಂಧಿ ಆಕ್ಷೇಪ? ವಿಡಿಯೋ ವೈರಲ್

ಸ್ವಾತಂತ್ರ್ಯ ದಿನದಂದು ನೋಡಲೇಬೇಕಾದ 8 ಕನ್ನಡ ದೇಶಭಕ್ತಿ ಸಿನಿಮಾಗಳು

ಆಪ್ ಕಿ ಅದಾಲತ್‌ನಲ್ಲಿ ಯಶ್ ಗೆದ್ದ ‘ಜನರ ಅದಾಲತ್’

ADVERTISEMENT
ADVERTISEMENT

ನಟಿ ಕಾರುಣ್ಯ ರಾಮ್ ನೀಡಿರುವ ದೂರಿನ ಪ್ರಕಾರ, ಸಮೃದ್ಧಿ ರಾಮ್ ಅವರು ಆನ್‌ಲೈನ್ ಬೆಟ್ಟಿಂಗ್ ಹಾಗೂ ಖಾಸಗಿ ವ್ಯವಹಾರಗಳಲ್ಲಿ ನಿರಂತರ ನಷ್ಟ ಅನುಭವಿಸಿದ್ದರು. ಇದರಿಂದಾಗಿ ಖಾಸಗಿ ವ್ಯಕ್ತಿಗಳಿಂದ ಹೆಚ್ಚಿನ ಬಡ್ಡಿದರದಲ್ಲಿ ಸಾಲ ಪಡೆದು, ಆ ಸಾಲದ ಒತ್ತಡ ತಾಳಲಾರದೆ ಮನೆಯಲ್ಲಿದ್ದ ಚಿನ್ನಾಭರಣಗಳು ಹಾಗೂ ನಗದು ಹಣವನ್ನು ಬಳಸಿ ಸಾಲ ತೀರಿಸಿದ್ದಾರೆ ಎನ್ನಲಾಗಿದೆ. ಈ ವಿಚಾರವನ್ನು ಪ್ರಶ್ನಿಸಿದಾಗ ಸಮೃದ್ಧಿ ರಾಮ್ ತಮ್ಮನ್ನೇ ಮನೆಯಿಂದ ಹೊರಗೆ ಹಾಕಿದ್ದಾರೆ ಎಂದು ಕಾರುಣ್ಯ ಆರೋಪಿಸಿದ್ದಾರೆ.

ಇಷ್ಟೇ ಅಲ್ಲದೆ, ಸಾಲದ ಹಣ ವಾಪಸು ಪಡೆಯಲು ಸಾಲಗಾರರು ಮನೆಗೆ ಬಂದು ನಿರಂತರವಾಗಿ ಕಿರುಕುಳ ನೀಡುತ್ತಿದ್ದಾರೆ. ಇದರಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿರುವುದಾಗಿ ಕಾರುಣ್ಯ ರಾಮ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ತನ್ನ ಹಣವನ್ನು ಅನುಮತಿ ಇಲ್ಲದೇ ಬಳಸಿಕೊಂಡಿರುವ ಕುರಿತು ಪ್ರಶ್ನೆ ಮಾಡಿದ ಬಳಿಕ, ಸಮೃದ್ಧಿ ರಾಮ್ ವಾಟ್ಸಪ್ ಮೂಲಕ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹಾಕುವ ತಮ್ಮ ಫೋಟೋಗಳಿಗೆ ಕೆಟ್ಟದಾಗಿ ಕಾಮೆಂಟ್ ಮಾಡಿ ಸಾರ್ವಜನಿಕವಾಗಿ ನಿಂದಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಮೊದಲು ಕೂಡ ಈ ಸಹೋದರಿಯರ ನಡುವಿನ ವಿವಾದ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಸಮೃದ್ಧಿ ರಾಮ್ ವಿರುದ್ಧ ಕಾರುಣ್ಯ ರಾಮ್ ಅವರು ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ ವೇಳೆ, ಎನ್‌ಸಿಆರ್ (NCR) ದಾಖಲಾಗಿತ್ತು. ಆದರೆ ಪ್ರಕರಣ ತೀವ್ರತೆ ಹೆಚ್ಚಾದ ಹಿನ್ನೆಲೆಯಲ್ಲಿ ಇದೀಗ ಸಿಸಿಬಿಯಲ್ಲಿ ಮತ್ತೊಮ್ಮೆ ದೂರು ದಾಖಲಿಸಲಾಗಿದೆ.

ಕಾರುಣ್ಯ ರಾಮ್ ಅವರು ಕನ್ನಡ ಚಿತ್ರರಂಗದಲ್ಲಿ ‘ಪೆಟ್ರೊಮ್ಯಾಕ್ಸ್’, ‘ವಜ್ರಕಾಯ’, ‘ಗುಬ್ಬಿ ಮೇಲೆ ಬ್ರಹ್ಮಾಸ್ತ್ರ’, ‘ಎರಡನೇ ಮದುವೆ’ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿ ಗುರುತಿಸಿಕೊಂಡಿದ್ದಾರೆ. ಜೊತೆಗೆ ಅವರು ಬಿಗ್ ಬಾಸ್ ಕನ್ನಡ ಕಾರ್ಯಕ್ರಮದಲ್ಲೂ ಭಾಗವಹಿಸಿ ಜನಪ್ರಿಯರಾಗಿದ್ದರು. ಇನ್ನು ಅವರ ಸಹೋದರಿ ಸಮೃದ್ಧಿ ರಾಮ್ ಅವರು ‘ರಾಜಾ ರಾಣಿ’ ಹಾಗೂ ‘ಮನೆ ದೇವ್ರು’ ಸೇರಿದಂತೆ ಕೆಲವು ಜನಪ್ರಿಯ ಕನ್ನಡ ಧಾರಾವಾಹಿಗಳಲ್ಲಿ ಅಭಿನಯಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಖರ್ಗೆ (6)

ನ್ಯೂ ಟೈಟಲ್..ಭಾರತಕ್ಕಿಂತ ಮೊದಲೇ ಚೀನಾದಲ್ಲಿ ರಾಮಾಯಣ ದರ್ಶನ

by ಶಾಲಿನಿ ಕೆ. ಡಿ
August 15, 2026 - 5:55 pm
0

ಖರ್ಗೆ (5)

ಸ್ವಾತಂತ್ರ್ಯೋತ್ಸವದಂದು ‘ವಂದೇ ಮಾತರಂ’ ಹಾಡಿಗೆ ಸೋನಿಯಾ ಗಾಂಧಿ ಆಕ್ಷೇಪ? ವಿಡಿಯೋ ವೈರಲ್

by ಶಾಲಿನಿ ಕೆ. ಡಿ
August 15, 2026 - 5:09 pm
0

ChatGPT Image Aug 15, 2026, 04 42 07 PM

ಸ್ವಾತಂತ್ರ್ಯ ದಿನದಂದು ನೋಡಲೇಬೇಕಾದ 8 ಕನ್ನಡ ದೇಶಭಕ್ತಿ ಸಿನಿಮಾಗಳು

by ಶಾಲಿನಿ ಕೆ. ಡಿ
August 15, 2026 - 4:58 pm
0

ಖರ್ಗೆ (4)

ಆಪ್ ಕಿ ಅದಾಲತ್‌ನಲ್ಲಿ ಯಶ್ ಗೆದ್ದ ‘ಜನರ ಅದಾಲತ್’

by ಶಾಲಿನಿ ಕೆ. ಡಿ
August 15, 2026 - 4:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಖರ್ಗೆ (5)
    ಸ್ವಾತಂತ್ರ್ಯೋತ್ಸವದಂದು ‘ವಂದೇ ಮಾತರಂ’ ಹಾಡಿಗೆ ಸೋನಿಯಾ ಗಾಂಧಿ ಆಕ್ಷೇಪ? ವಿಡಿಯೋ ವೈರಲ್
    August 15, 2026 | 0
  • ಖರ್ಗೆ (2)
    ದೇಶದ ಭವಿಷ್ಯ ಯುವಜನರ ಕೈಯಲ್ಲಿದೆ: ಜೆನ್‌ ಝೀ ಗಳಿಗೆ ಬೆಂಬಲ ಸೂಚಿಸಿದ ವಿಜಯ್‌
    August 15, 2026 | 0
  • ಖರ್ಗೆ (1)
    ವಿಧಾನಸೌಧದ ಮುಂದೆ ಇಂದು ‘ಫ್ರೀಡಂ ಹಬ್ಬ’: ಖ್ಯಾತ ಗಾಯಕರ ಸಂಗೀತ ರಸದೌತಣ!
    August 15, 2026 | 0
  • ಖರ್ಗೆ
    ಕೆಂಪುಕೋಟೆ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ರಾಹುಲ್, ಮಲ್ಲಿಕಾರ್ಜುನ ಖರ್ಗೆ ಗೈರು
    August 15, 2026 | 0
  • Untitled design 2026 08 15T131007.326
    ನವೀನ ಪಾರ್ಕ್ ರಾಜ್ಯದ ಮಾದರಿ ಬಡಾವಣೆಯನ್ನಾಗಿಸಲು ಸಂಕಲ್ಪ: ಡಾ. ವಿ.ಎಸ್.ವಿ. ಪ್ರಸಾದ್
    August 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version