ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಬಿಲ್ಲ ರಂಗ ಭಾಷಾ ಸಿನಿಮಾದಲ್ಲಿ ಬ್ಯುಸಿಯಾಗಿರುವ ಅಭಿನಯ ಚಕ್ರವರ್ತಿ ಇದೀಗ ಮತ್ತೊಮ್ಮೆ ಮ್ಯಾಕ್ಸ್ ಚಿತ್ರ ಮಾಂತ್ರಿಕ ವಿಜಯ್ ಕಾರ್ತಿಕೇಯ ಜೊತೆ ಕೈ ಜೋಡಿಸಿದ್ದಾರೆ. ಮ್ಯಾಕ್ಸ್ ಸೂಪರ್ ಹಿಟ್ ಬಳಿಕ ಮತ್ತೊಮ್ಮೆ ಈ ಜೋಡಿ ಮ್ಯಾಕ್ಸ್ 2ಗಾಗಿ ಒಂದಾಗಲಿದ್ದಾರೆ ಎಂಬ ಸುದ್ದಿ ಇತ್ತು. ಆದ್ರೆ ಸುದೀಪ್ ಹಾಗೂ ವಿಜಯ್ ಮ್ಯಾಕ್ಸ್ 2 ಪಕ್ಕಕ್ಕಿಟ್ಟು ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ.
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ 47ನೇ ಸಿನಿಮಾ ಇಂದು ಅನೌನ್ಸ್ ಆಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ಟೀಸರ್ ರಿಲೀಸ್ ಮಾಡುವ ಮೂಲಕ ಕಿಚ್ಚನ 47 ನೇ ಸಿನಿಮಾ ರಿವೀಲ್ ಮಾಡಲಾಗಿದೆ.
ಬಿಲ್ಲರಂಗ ಬಾಷ ಸಿನಿಮಾ ಈ ವರ್ಷ ರಿಲೀಸ್ ಆಗಲ್ಲ. ಆದರೆ ಈ ಸಿನಿಮಾ ಇದೇ ವರ್ಷ ಡಿಸೆಂಬರ್ 25 ಕ್ಕೆ ರಿಲೀಸ್ ಮಾಡುತ್ತೇವೆ. ಸೆಪ್ಟೆಂಬರ್ ಕೊನೆಯಲ್ಲಿ ಬಿಗ್ ಬಾಸ್ ಶುರು ಆಗುತ್ತೆ ಎಂದು ಕಿಚ್ಚ ಸುದೀಪ್ ಹೇಳಿದ್ದಾರೆ.
