ಕಿಚ್ಚ ಸುದೀಪ್ ನಟನೆಯ ಮಾರ್ಕ್ ಮ್ಯಾಜಿಕ್ ಥಿಯೇಟರ್ ನಲ್ಲಿ ಮುಂದುವರೆದಿದೆ. ಸಿನಿಮಾಗೆ ಸಿಕ್ತಿರುವ ಸಕ್ಸಸ್ ಬೆನ್ನಲ್ಲೇ ಸುದೀಪ್ ಥಿಯೇಟರ್ ವಿಸಿಟ್ ಆರಂಭಿಸಿದ್ದಾರೆ. ಮೊನ್ನೆ ಬೆಂಗಳೂರಿನ ಸಂತೋಷ್ ಚಿತ್ರಮಂದಿರದಲ್ಲಿ ಅಭಿಮಾನಿಗಳ ಜೊತೆ ಕುಳಿತು ಚಿತ್ರ ವೀಕ್ಷಣೆ ಮಾಡಿದರು.
ನಿನ್ನೆ ಮೈಸೂರಿಗೆ ಭೇಟಿ ಕೊಟ್ಟು ಚಾಮುಂಡಿ ಬೆಟ್ಟದಲ್ಲಿ ತಾಯಿಯ ದರ್ಶನ ಪಡೆದರು. ನಂತರ ಮೈಸೂರಿನ ಸಂಗಮ ಚಲನಚಿತ್ರ ಮಂದಿರಕ್ಕೆ ಅಭಿಮಾನಿಗಳ ಜೊತೆ ಕಿಚ್ಚ ಮಾರ್ಕ್ ವೀಕ್ಷಣೆ ಮಾಡಬೇಕಿತ್ತು.ಆದ್ರೆ ಕಿಚ್ಚನ ಆಗಮನದ ವಿಶೇಷ ತಿಳಿದು ಬರೋಬ್ಬರಿ 15 ಸಾವಿರಕ್ಕೂ ಹೆಚ್ಚು ಅಭಿಮಾನಿಗಳಿಗೆ ಥಿಯೇಟರ್ ಮುಂದೆ ಜಮಾಯಿಸಿದ್ದರು. ಹೀಗಾಗಿ ಸುದೀಪ್ ಚಿತ್ರ ನೋಡದೇ ವಾಪಸ್ಸು ತೆರಳಿದರು.
ಡಿಸೆಂಬರ್ 25ರಂದು ರಿಲೀಸ್ ಆದ ‘ಮಾರ್ಕ್’ ಸಿನಿಮಾ ನಾಲ್ಕು ದಿನಗಳಲ್ಲಿ 35 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಪ್ರೇಕ್ಷಕರ ಪ್ರೀತಿ ಜೊತೆಗೆ ಬಾಕ್ಸಾಫೀಸ್‌ನಲ್ಲಿ ಭರ್ಜರಿ ಸೌಂಡ್ ಮಾಡುತ್ತಿದೆ. ಮ್ಯಾಕ್ಸ್ ಬಳಿಕ ಕಿಚ್ಚ ಹಾಗೂ ವಿಜಯ್ ಕಾರ್ತಿಕೇಯ ಜೋಡಿ ಮತ್ತೊಮ್ಮೆ ಮೋಡಿ ಮಾಡಿದೆ.
ಕ್ರಿಸ್ಮಸ್ ರೇಸ್‌ನಲ್ಲಿ ಗೆದ್ದ ‘ಮಾರ್ಕ್’..ಕಿಚ್ಚನ ಚಿತ್ರದ ಮೊದಲ ವಾರದ ಕಲೆಕ್ಷನ್ ಎಷ್ಟು ಗೊತ್ತಾ?
ಕಿಚ್ಚ ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ಕ್ರಿಸ್‌ಮಸ್ ಬ್ಲಾಕ್‌ಬಸ್ಟರ್‌ಗಳಲ್ಲಿ ಒಂದಾಗಿ ಹೊರಹೊಮ್ಮಿದೆ. ಕ್ರಿಸ್ಮಸ್ ಗೆ ಬಿಡುಗಡೆಯಾದ ಚಿತ್ರ ಪ್ರೇಕ್ಷಕರ ಮೆಚ್ಚುಗೆ ಪಡೆಯುವಲ್ಲಿ ಯಶಸ್ವಿಯಾಗಿದೆ. ಮಾರ್ಕ್ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಒಳ್ಳೆ ಕಮಾಯಿ ಮಾಡಿದೆ.
ಮಾರ್ಕ್ ಸಿನಿಮಾ ಮೊದಲ ವಾರಾಂತ್ಯದಲ್ಲಿಯೇ 35ಕೋಟಿ ಗಳಿಕೆ ಮಾಡಿದೆ. ವೀಕೆಂಡ್ ನಲ್ಲಿ ಮಾತ್ರವಲ್ಲದೆ ಸೋಮವಾರವೂ ಕಿಚ್ಚನ ಚಿತ್ರ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ.
ಸಿನಿಮಾ ವಿಮರ್ಶಕರು ಹಾಗೂ ವಿತರಕರು ಮಾರ್ಕ್ ಸಿನಿಮಾವನ್ನು ಕಮರ್ಷಿಯಲ್ ಹಿಟ್ ಎಂದು ಶ್ಲಾಘಿಸಿದ್ದಾರೆ. ಹಿಂದಿ ಹಾಗೂ ಹಾಲಿವುಡ್ ಸಿನಿಮಾಗಳಿಗೆ ಟಕ್ಕರ್ ಕೊಟ್ಟು ದೊಡ್ಡ ಮಟ್ಟದ ಗೆಲುವನ್ನು ಕಿಚ್ಚನ ಸಿನಿಮಾ ಪಡೆದುಕೊಂಡಿದೆ.
ಮೈಸೂರು, ಶಿವಮೊಗ್ಗ, ತುಮಕೂರು, ಬೆಂಗಳೂರು, ದಾವಣಗೆರೆ ಮತ್ತು ಚಾಮರಾಜನಗರದಾದ್ಯಂತದ ಹಲವಾರು ಸಿಂಗಲ್-ಸ್ಕ್ರೀನ್ ಚಿತ್ರಮಂದಿರಗಳು ನಾಲ್ಕನೇ ದಿನವೂ ಹೌಸ್‌ಫುಲ್ ಪ್ರದರ್ಶನಗಳನ್ನು ಕಂಡಿದೆ.
ಕಿಚ್ಚನ ಸ್ವಾಗ್, ಸ್ಟೈಲು, ಆಟಿಟ್ಯೂಡ್ ಕಂಡು ಚಿತ್ರರಸಿಕರು ಫಿದಾ ಆಗಿದ್ದಾರೆ. ಮ್ಯಾಕ್ಸ್ ಬಳಿಕ ಮತ್ತೊಮ್ಮೆ ಸುದೀಪ್ ಹಾಗೂ ವಿಜಯ್ ಕಾರ್ತಿಕೇಯ ಜೋಡಿ ಬೆಳ್ಳಿಪರದೆ ಮೇಲೆ ಮೋಡಿ ಮಾಡಿದೆ.
