ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಾಲಿವುಡ್ ನಟಿ ಕತ್ರಿನಾ ಕೈಫ್ ಭೇಟಿ

Untitled design (22)

ಬಾಲಿವುಡ್‌ನ ನಟಿ ಕತ್ರಿನಾ ಕೈಫ್ ಮಂಗಳವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ವಿಶೇಷ ಪೂಜೆ ಮತ್ತು ಸರ್ಪ ಸಂಸ್ಕಾರ ಸೇವೆ ನೆರವೇರಿಸಿದ್ದಾರೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ನಟಿ ಕತ್ರಿನಾ ಕೈಫ್ ಅವರು ಸ್ನೇಹಿತರೊಂದಿಗೆ  ಆಗಮಿಸಿ, ದೇವರ ದರ್ಶನ ಪಡೆದು, ಆದಿ ಸುಬ್ರಹ್ಮಣ್ಯದ ಸರ್ಪ ಸಂಸ್ಕಾರ ಯಾಗಶಾಲೆಯಲ್ಲಿ ಸೇವೆ ಮಾಡಿದರು. ಇಂದು ಮತ್ತು ನಾಳೆ (ಮಾ.12) ಅವರು ಕುಕ್ಕೆಯಲ್ಲಿ ಇದ್ದುಕೊಂಡು, ಭಕ್ತರೊಂದಿಗೆ ಸೇವೆಯಲ್ಲಿ ಭಾಗಿಯಾಗಲಿದ್ದಾರೆ.

ಇತ್ತೀಚೆಗೆ ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭಮೇಳಕ್ಕೂ ಕತ್ರಿನಾ ಕೈಫ್ ಭೇಟಿ ನೀಡಿದ್ದರು. ಮಹಾ ಕುಂಭಮೇಳದಲ್ಲಿ ಭಾಗಿಯಾದ ಕತ್ರಿನಾ ಕೈಫ್ ಅವರು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ್ದರು.

Exit mobile version