ಕಾಮಿಡಿ ಕಿಲಾಡಿಗಳು ಸೀಸನ್ 2ರ ವಿಜೇತ ಮಡೆನೂರು ಮನು ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಜನಪ್ರಿಯ ಟಿವಿ ಕಾರ್ಯಕ್ರಮ ‘ಕಾಮಿಡಿ ಕಿಲಾಡಿಗಳು’ ಮೂಲಕ ಖ್ಯಾತಿಗಳಿಸಿದ್ದ ಹಾಸ್ಯ ನಟ ಮಡೆನೂರು ಮನು ವಿರುದ್ಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಪೊಲೀಸರು ತಕ್ಷಣ ಆರೋಪಿಯನ್ನು ಬಂಧಿಸಿದ್ದಾರೆ.
ಹಾಸನದ ಶಾಂತಿಗ್ರಾಮದ ಬಳಿ ಮಡೆನೂರು ಮನುವನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ದೂರು ದಾಖಲಾದ ಕೂಡಲೇ ಪೊಲೀಸರು ತನಿಖೆಯನ್ನು ಆರಂಭಿಸಿದ್ದು, ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಸಂತ್ರಸ್ತೆ ತನ್ನ ಎಫ್‌ಐಆರ್‌ನಲ್ಲಿ ತನಗಾದ ಅನ್ಯಾಯವನ್ನು ವಿವರವಾಗಿ ತಿಳಿಸಿದ್ದಾರೆ. ಅಲ್ಲದೇ ಸಂತ್ರಸ್ತೆ, ತಾನು ಎದುರಿಸಿದ ಗಂಭೀರ ಆರೋಪಗಳ ಬಗ್ಗೆ ಮಾತನಾಡಿದ್ದಾರೆ. “ಮಡೆನೂರು ಮನು ನನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ. ಅವರು ನನ್ನ ವಿರುದ್ಧ ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆ. ನನ್ನ ಬಳಿ ಎಲ್ಲಾ ಸಾಕ್ಷ್ಯಗಳಿವೆ, ದಾಖಲೆಗಳಿವೆ. ಎಲ್ಲವನ್ನೂ ಪೊಲೀಸರಿಗೆ ಒಪ್ಪಿಸುತ್ತೇನೆ. ಸಾಕ್ಷಿಗಳಿಲ್ಲದೆ ನಾನು ಮಾತನಾಡುತ್ತಿಲ್ಲ. ಈ ಬಗ್ಗೆ ದೂರು ನೀಡುವುದಾಗಿ ಮನುಗೆ ಈ ಹಿಂದೆಯೇ ತಿಳಿಸಿದ್ದೆ,” ಎಂದು ಸಂತ್ರಸ್ತೆ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
‘ಕಾಮಿಡಿ ಕಿಲಾಡಿಗಳು’ ಕಾರ್ಯಕ್ರಮದ ಮೂಲಕ ಮನೆಮಾತಾದ ಮಡೆನೂರು ಮನು, ತಮ್ಮ ಹಾಸ್ಯ ಪ್ರತಿಭೆಯಿಂದ ಜನರ ಮನಗೆದ್ದಿದ್ದರು.