ಮೇ‌ 30 ರಂದು ಟೈಗರ್ ವಿನೋದ್ ಪ್ರಭಾಕರ್ ಅಭಿನಯದ “ಮಾದೇವ” ಚಿತ್ರ ತೆರೆಗೆ 

111 (32)

ರಾಧಾಕೃಷ್ಣ ಪಿಕ್ಚರ್ಸ್ ಲಾಂಛನದಲ್ಲಿ ಆರ್ ಕೇಶವ(ದೇವಸಂದ್ರ) ನಿರ್ಮಿಸಿರುವ, ನವೀನ್ ರೆಡ್ಡಿ ಬಿ ನಿರ್ದೇಶನದ ಹಾಗೂ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ “ಮಾದೇವ” ಚಿತ್ರ ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಹಾಗೂ ಹಾಡಿನ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿದೆ. ಬಹು ನಿರೀಕ್ಷಿತ ಈ ಚಿತ್ರ ಮೇ 30 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

‌‌ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ವಿನೋದ್ ಪ್ರಭಾಕರ್ ಈ ಚಿತ್ರದಲ್ಲಿ ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ ಜೊತೆಗೆ ಈವರೆಗೂ ಮಾಡಿರದ ಪಾತ್ರ ಕೂಡ ಮಾಡಿದ್ದಾರೆ. ವಿನೋದ್ ಪ್ರಭಾಕರ್ ಅವರ ಈ ಲುಕ್ ಗೆ ಫಿದಾ ಆಗಿರುವ ಅಭಿಮಾನಿಗಳು ಚಿತ್ರ ಬಿಡುಗಡೆಗೆ ಕಾತುರದಿಂದ ಕಾಯುತ್ತಿದ್ದಾರೆ.

“ಮಾದೇವ” ಚಿತ್ರದಲ್ಲಿ ಅಪಾರ ತಾರಾಬಳಗವಿದೆ. ವಿನೋದ್ ಪ್ರಭಾಕರ್ ಅವರಿಗೆ ನಾಯಕಿಯಾಗಿ ಸೋನಾಲ್ ಮೊಂತೆರೊ ಅಭಿನಯಿಸಿದ್ದಾರೆ. ವಿಶೇಷ ಪಾತ್ರದಲ್ಲಿ ಶ್ರೀನಗರ ಕಿಟ್ಟಿ ನಟಿಸಿದ್ದಾರೆ. ಮಾಲಾಶ್ರೀ, ಶೃತಿ, ಅಚ್ಯುತ ಕುಮಾರ್, ಕಾಕ್ರೋಜ್ ಸುಧೀ, ಮೈಕೋ ನಾಗರಾಜ್, ಬಲ ರಾಜ್ವಾಡಿ, ಮುನಿರಾಜು, ಚೈತ್ರಾ ಮುಂತಾದ ಅನುಭವಿ ಕಲಾವಿದರ ತಾರಾಬಳಗ “ಮಾದೇವ” ಚಿತ್ರದಲ್ಲಿದೆ.

“ಖಾಕಿ” ಚಿತ್ರದ ನಂತರ ನವೀನ್ ರೆಡ್ಡಿ ಅವರು ಈ ಚಿತ್ರ ನಿರ್ದೇಶಿಸಿದ್ದು, ಅವರೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಪ್ರದ್ಯೋತನ್ ಸಂಗೀತ ನಿರ್ದೇಶನ, ಬಾಲಕೃಷ್ಣ ತೋಟ ಛಾಯಾಗ್ರಹಣ, ವಿಜಯ್ ಎಂ ಕುಮಾರ್ ಸಂಕಲನ, ಗುಣ ಕಲಾ ನಿರ್ದೇಶನ ಹಾಗೂ ಥ್ರಿಲ್ಲರ್ ಮಂಜು, ಡಿಫರೆಂಟ್ ಡ್ಯಾನಿ, ರಿಯಲ್ ಸತೀಶ್,‌ ವಿಕ್ರಮ್ ಮೋರ್ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

Exit mobile version