• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, November 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಬಿಡುಗಡೆಯಾಯ್ತು ಮ್ಯಾರೇಜ್ ಪಾರ್ಟಿಯ ಗಲಾಟೆ ವೀಡಿಯೋ ಸಾಂಗ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 4, 2026 - 6:14 pm
in ಸಿನಿಮಾ
0 0
0
ಘೋಷಣೆ (6)

ಚಯನ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿ ಬಂದಿರುವ ಮ್ಯಾರೇಜ್ ಪಾರ್ಟಿ ಚಿತ್ರದ ಗಲಾಟೆ ವೀಡಿಯೋ ಸಾಂಗ್ ಬಿಡುಗಡೆಗೊಂಡಿದೆ. ಇದೇ ಡಿಸೆಂಬರ್ 4ರಂದು ಅದ್ದೂರಿಯಾಗಿ ತೆರೆಗಾಣಲಿರುವ ಈ ಚಿತ್ರದ ಗೌಜು, ಗಮ್ಮತ್ತನ್ನು ತೆರೆದಿಡುವ ಶೈಲಿಯಲ್ಲಿ ಮೂಡಿ ಬಂದಿರುವ ಗಲಾಟೆ ಸಾಂಗ್ ಬಿಡುಗಡೆ ನೆಪದಲ್ಲಿ ನಡೆದ ಮೊದಲ ಪತ್ರಿಕಾಗೋಷ್ಠಿಯಲ್ಲಿ ನಿರ್ದೇಶಕ ಚಯನ್ ಶೆಟ್ಟಿ, ನವೀನ್ ಡಿ ಪಡೀಲ್, ಪ್ರಕಾಶ್ ತುಮಿನಾಡು, ಪುಷ್ಪರಾಜ್ ಬೋಳಾರ್, ನಿರ್ಮಾಪಕ ಸಂತೋಷ್.ವಿ, ಕೋರಿಯೋಗ್ರಾಫರ್ ಮುರುಗ, ಮೈಮ್ ರಾಮದಾಸ್, ಭೀಮ್ ರಾವ್ ವಾಸ್ಟರ್, ಜ್ಯೋತಿ ಶೆಟ್ಟಿ, ನಮಿತಾ ಕಿರಣ್, ಅನನ್ಯಾ, ರಕ್ಷಿತಾ ಸೇರಿದಂತೆ ಚಿತ್ರತಂಡ ಭಾಗಿಯಾಗಿ, ಒಂದಷ್ಟು ಲವಲವಿಕೆಯ ಸಂಗತಿಗಳನ್ನು ಹಂಚಿಕೊಂಡಿದೆ.

ಈ ಹಾಡಿನ ಕುರಿತಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಿರ್ದೇಶಕ ಚಯನ್ ಶೆಟ್ಟಿ `ಇದು ಹೆಸರೇ ಸೂಚಿಸುವಂತೆ ಮದುವೆಯೊಂದರ ಸುತ್ತ ಘಟಿಸುವ ಕಥೆಯ ಚಿತ್ರ. ಇದರಲ್ಲಿ ಹಾರರ್ ಅಂಶಗಳೂ ಇವೆ. ಈ ಹಾಡು ಇಷ್ಟೊಂದು ಚೆನ್ನಾಗಿ ಮೂಡಿ ಬರಲು ಕಾರಣ ನಿರ್ಮಾಪಕ ಸಂತೋಷ್.ವಿ. ಮ್ಯಾರೇಜ್ ಪಾರ್ಟಿ ಅಂದಾಕ್ಷಣ ಇದು ಸಂಪೂರ್ಣವಾಗಿ ಮದುವೆ ಸುತ್ತಲೇ ಸುತ್ತುವ ಕಥೆ ಅಂದುಕೊಳ್ಳಬೇಕಿಲ್ಲ. ಅದರಲ್ಲಿ ಬೇರೆ ಕಥನಗಳೂ ಇದ್ದಾವೆ’ ಎಂಬ ಸುಳಿವು ಬಿಟ್ಟುಕೊಟ್ಟರು.

RelatedPosts

ಗತವೈಭವದ ಘಮ ಹೊಂದಿರೋ ‘ಮೈಸೂರು ಸ್ಟುಡಿಯೋ’ ಪೋಸ್ಟರ್ ಬಿಡುಗಡೆ!

ರಜನಿಕಾಂತ್–ಕಮಲ್ ಹಾಸನ್ ಕಾಂಬಿನೇಷನ್‌ನ ‘ಧರ್ಮನ್’ ಚಿತ್ರಕ್ಕೆ ನಟಿ ಶ್ರೀಲೀಲಾ ಎಂಟ್ರಿ

ರೇಣುಕಾಸ್ವಾಮಿ ಕೇಸ್: ಪ್ರದೋಷ್‌ಗೆ ತಾತ್ಕಾಲಿಕ ರಿಲೀಫ್

15 ವರ್ಷದ ಕನಸಿಗೆ ಟ್ರೈಲರ್ ಟಚ್..ಶಂಕರಾಭರಣ ತೆರೆಗೆ ಸಜ್ಜು

ADVERTISEMENT
ADVERTISEMENT

ಈ ಚಿತ್ರದ ಮೂಲಕ ನಿರ್ಮಾಪಕರಾಗಿ ಮೊದಲ ಹೆಜ್ಜೆಯಿಟ್ಟಿರುವ ಸಂತೋಷ್ ವಿ `ಇದು ನಿರ್ಮಾಪಕನಾಗಿ ನನ್ನ ಮೊದಲ ಚಿತ್ರ. ಮೊದಲ ಹೆಜ್ಜೆಯಲ್ಲಿಯೇ ಅತ್ಯಂತ ಅಚ್ಚುಕಟ್ಟಾಗಿ ತನ್ನ ಕೆಲಸವನ್ನು ನಿರ್ವಹಿಸುವ ಚಯನ್ ಶೆಟ್ಟಿ ನಿರ್ದೇಶಕರಾಗಿ ಸಿಕ್ಕಿರೋದು ಹೆಮ್ಮೆಯ ವಿಚಾರ. ಎಲ್ಲ ತಂತ್ರಜ್ಞರು, ಕಲಾವಿದ ಸಾಥ್‌ನೊಂದಿಗೆ ಇದೊಂದು ಅದ್ಭುತ ಚಿತ್ರವಾಗಿ ಮೂಡಿ ಬಂದಿದೆ’ ಎನ್ನುತ್ತಲೇ, ಈ ಚಿತ್ರವನ್ನು ನೋಡಿ ಪ್ರೋತ್ಸಾಹಿಸುವಂತೆ ಪ್ರೇಕ್ಷಕರಲ್ಲಿ ಮನವಿ ಮಾಡಿಕೊಂಡರು.

ಇನ್ನುಳಿದಂತೆ ಈ ಸಿನಿಮಾದ ಪ್ರಧಾನ ಪಾತ್ರಗಳಲ್ಲಿ ನಟಿಸಿರುವ, ಸದರಿ ಗಲಾಟೆ ಸಾಂಗ್‌ನಲ್ಲಿ ಹೆಜ್ಜೆ ಹಾಕಿರುವ ನವೀನ್ ಡಿ ಪಡೀಲ್, ಪ್ರಕಾಶ್ ತುಮಿನಾಡು ಮತ್ತು ಮೈಮ್ ರಾಮ್‌ದಾಸ್ ತಮ್ಮ ಅನುಭವಗಳನ್ನು ಹಂಚಿಕೊಂಡರು. ಚಿತ್ರೀಕರಣದ ರಸವತ್ತಾದ ಕ್ಷಣಗಳನ್ನು ಮೆಲುಕು ಹಾಕುತ್ತಲೇ, ಇದು ದೊಡ್ಡ ಮಟ್ಟದಲ್ಲಿ ಗೆಲುವು ಕಾಣಲಿದೆ ಎಂಬ ಭರವಸೆಯ ಮಾತುಗಳನ್ನಾಡಿದರು. ಅಂದಹಾಗೆ, ಮದುವೆ ಮನೆಯಲ್ಲಿ ಗಮ್ಮತ್ತಿಗೆ ನಡೆಯೋ ಎಣ್ಣೆ ಪಾರ್ಟಿಯ ಅಮೋಘ ನಶೆ ಹೊದ್ದುಕೊಂಡಂತಿರೋ ಈ ಹಾಡನ್ನು ಪ್ರಣವಮ್ ಸಸಿ ಹಾಡಿದ್ದಾರೆ. ತ್ರಿಲೋಕ್ ತ್ರಿವಿಕ್ರಮ ಸಾಹಿತ್ಯಕ್ಕೆ ರಿತ್ವಿಕ್ ಮುರಳೀಧರ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಹಲವಾರು ರಿಯಾಲಿಟಿ ಶೋಗಳ ಮೂಲಕ ಹೆಸರಾಗಿರುವ ಮುರುಗ ಮಾಸ್ಟರ್ ನೃತ್ಯ ನಿರ್ದೇಶನದಲ್ಲಿ ಈ ಹಾಡು ಮೂಡಿ ಬಂದಿದೆ.

ಈಗಾಗಲೇ ರಾಜ್ ಸೌಂಡ್ಸ್ ಆಂಡ್ ಲೈಟ್ಸ್ ಮುಂತಾದ ಸಿನಿಮಾಗಳಲ್ಲಿ ನಟಿಸಿರುವ ವಿನೀತ್ ಈ ಚಿತ್ರದ ನಾಯಕನಾಗಿ ನಟಿಸಿದ್ದಾರೆ. ಈ ಚಿತ್ರವೀಗ ಸಂಪೂರ್ಣವಾಗಿ ಕೆಲಸ ಕಾರ್ಯಗಳನ್ನು ಮುಗಿಸಿಕೊಂಡು ತೆರೆಗಾಣಲು ಸನ್ನದ್ಧವಾಗಿದೆ. ಶ್ರೀ ವಾರಾಹಿ ಫಿಲಂಸ್ ಬ್ಯಾನರಿನಡಿಯಲ್ಲಿ ಸಂತೋಷ್ ವಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಶ್ರೀಕಾಂತ್ ಛಾಯಾಗ್ರಹಣ, ರಿತ್ವಿಕ್ ಮುರಳೀಧರ್ ಸಂಗೀತ, ಸು ಫ್ರಂ ಸೋ ಖ್ಯಾತಿಯ ನಿತಿನ್ ಶೆಟ್ಟಿ ಸಂಕಲನ, ಪ್ರಮೋದ್ ಮರವಂತೆ ಮತ್ತು ತ್ರಿಲೋಕ್ ತ್ರಿವಿಕ್ರಮ ಸಾಹಿತ್ಯ, ಪ್ರಕಾಶ್ ತುಮಿನಾಡು, ದೀಪಕ್ ರೈ, ನವೀನ್ ಡಿ ಪಡೀಲ್, ರಕ್ಷಿತಾ, ನಮಿತಾ ಕಿರಣ್, ರಾಮ್‌ದಾಸ್, ರಘು ಪಾಂಡೇಶ್ವರ, ಪುಷ್ಪರಾಜ್ ಬೋಳಾರ್, ಜ್ಯೋತಿ ಶೆಟ್ಟಿ, ರಾಧಾಕೃಷ್ಣ, ಪಿಡಿ ಸತೀಶ್, ಭೀಮ್ ರಾವ್ ವಾಸ್ಟರ್ ಮುಂತಾದವರ ತಾರಾಗಣವಿರುವ ಈ ಚಿತ್ರ ಕನ್ನಡ ಮತ್ತು ಮಲೆಯಾಳಂ ಭಾಷೆಗಳಲ್ಲಿ ತೆರೆಗಾಣಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 11 04T185253.641

ದೀಪಾವಳಿಗೆ ಊರಿಗೆ ಹೋಗುವವರಿಗೆ ಡಬಲ್ ಶಾಕ್: ಖಾಸಗಿ ಬಸ್ ಟಿಕೆಟ್ ದರ ಏರಿಕೆ

by ಶಾಲಿನಿ ಕೆ. ಡಿ
November 4, 2026 - 6:54 pm
0

Untitled Design 2026 11 04T183227.992

ಬಸ್ ದರ ಹೆಚ್ಚಳ ಬೆನ್ನಲ್ಲೇ ಜನರಿಗೆ ಮತ್ತೊಂದು ಶಾಕ್: ದೀಪಾವಳಿಗೆ ತರಕಾರಿ, ಹಣ್ಣುಗಳ ಬೆಲೆ ಏರಿಕೆ

by ಶಾಲಿನಿ ಕೆ. ಡಿ
November 4, 2026 - 6:33 pm
0

Untitled Design 2026 11 04T181925.952

ಗತವೈಭವದ ಘಮ ಹೊಂದಿರೋ ‘ಮೈಸೂರು ಸ್ಟುಡಿಯೋ’ ಪೋಸ್ಟರ್ ಬಿಡುಗಡೆ!

by ಶಾಲಿನಿ ಕೆ. ಡಿ
November 4, 2026 - 6:21 pm
0

ಘೋಷಣೆ (6)

ಬಿಡುಗಡೆಯಾಯ್ತು ಮ್ಯಾರೇಜ್ ಪಾರ್ಟಿಯ ಗಲಾಟೆ ವೀಡಿಯೋ ಸಾಂಗ್!

by ಶಾಲಿನಿ ಕೆ. ಡಿ
November 4, 2026 - 6:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 11 04T181925.952
    ಗತವೈಭವದ ಘಮ ಹೊಂದಿರೋ ‘ಮೈಸೂರು ಸ್ಟುಡಿಯೋ’ ಪೋಸ್ಟರ್ ಬಿಡುಗಡೆ!
    November 4, 2026 | 0
  • ಘೋಷಣೆ (5)
    ರಜನಿಕಾಂತ್–ಕಮಲ್ ಹಾಸನ್ ಕಾಂಬಿನೇಷನ್‌ನ ‘ಧರ್ಮನ್’ ಚಿತ್ರಕ್ಕೆ ನಟಿ ಶ್ರೀಲೀಲಾ ಎಂಟ್ರಿ
    November 4, 2026 | 0
  • ಘೋಷಣೆ (4)
    ರೇಣುಕಾಸ್ವಾಮಿ ಕೇಸ್: ಪ್ರದೋಷ್‌ಗೆ ತಾತ್ಕಾಲಿಕ ರಿಲೀಫ್
    November 4, 2026 | 0
  • ಘೋಷಣೆ (3)
    15 ವರ್ಷದ ಕನಸಿಗೆ ಟ್ರೈಲರ್ ಟಚ್..ಶಂಕರಾಭರಣ ತೆರೆಗೆ ಸಜ್ಜು
    November 4, 2026 | 0
  • ಘೋಷಣೆ (1)
    ರಾಮಾಯಣ ಪಾರ್ಟ್-3 ಹಿಂಟ್ ಕೊಟ್ಟೇಬಿಟ್ರು ರಣ್ಬೀರ್
    November 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version