ಕಳೆದವರ್ಷ ಆದಿತ್ಯ ಅಭಿನಯದ “ಕಾಂಗರೂ” ಚಿತ್ರ ತೆರೆಕಂಡಿತ್ತು. ಈಗ ಅದೇ ತಂಡದಿಂದ ನೂತನ ಚಿತ್ರವೊಂದು ಆರಂಭವಾಗಲಿದೆ. ಡಿಸೆಂಬರ್ 25 ರಂದು ಈ ಚಿತ್ರದ ಸ್ಕ್ರಿಪ್ಟ್ ಪೂಜೆ ನಡೆದಿದೆ.
ಚೆನ್ನಕೇಶವ ಬಿ.ಸಿ.ಕುಣಿಗಲ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ, ಅಪಾರ ವೆಚ್ಚದಲ್ಲಿ ಅದ್ದೂರಿಯಾಗಿ ಈ ಚಿತ್ರವನ್ನು ನಿರ್ಮಿಸಲು ಮುಂದಾಗಿದ್ದಾರೆ. ಕಿಶೋರ್ ಮೇಗಳಮನೆ ಕಥೆ ಮತ್ತು ಚಿತ್ರಕತೆ ಜೊತೆಗೆ ನಿರ್ದೇಶನ ಮಾಡುತ್ತಿದ್ದಾರೆ. “ಕೆ.ಜಿ.ಎಫ್” ನಂತಹ ವಿಶ್ವಪ್ರಸಿದ್ದ ಚಿತ್ರದ ಸಂಗೀತ ನಿರ್ದೇಶಕ ರವಿ ಬಸ್ರೂರ್ ಸಂಗೀತ ಸಂಯೋಜಿಸುತ್ತಿರುವ ಈ ನೂತನ ಚಿತ್ರಕ್ಕೆ ಜನಪ್ರಿಯ ಸಂಭಾಷಣೆಕಾರ ಮಾಸ್ತಿ ಸಂಭಾಷಣೆ ಬರೆಯುತ್ತಿದ್ದಾರೆ.
ನಮ್ಮ “ಕಾಂಗರೂ” ಚಿತ್ರಕ್ಕೆ ತಾವೆಲ್ಲಾ ನೀಡಿದ ಪ್ರೋತ್ಸಾಹಕ್ಕೆ ಆಬಾರಿ. ಇಂದು ಅದೇ ತಂಡದ ಎರಡನೇ ಪ್ರಯತ್ನಕ್ಕೆ ಚಾಲನೆ ದೊರಕಿದೆ. ಈ ನೂತನ ಚಿತ್ರಕ್ಕೆ ರವಿ ಬಸ್ರೂರ್ ಸಂಗೀತ ನೀಡುತ್ತಿರುವುದು ಹಾಗು ಮಾಸ್ತಿ ಅವರು ಸಂಭಾಷಣೆ ಬರೆಯುತ್ತಿರುವುದು ಖುಷಿಯಾಗಿದೆ. ಸದ್ಯದಲ್ಲೇ ಶೀರ್ಷಿಕೆ ಅನಾವರಣ ಮಾಡುತ್ತೇವೆ. ಅದೇ ಸಂದರ್ಭದಲ್ಲಿ ತಾರಾಬಳಗದ ಬಗ್ಗೆ ಮಾಹಿತಿ ನೀಡುತ್ತೇವೆ ಎಂದು ನಿರ್ದೇಶಕ ಕಿಶೋರ್ ಮೇಗಳಮನೆ ತಿಳಿಸಿದ್ದಾರೆ.
ಭಾರೀ ವೆಚ್ಚದಲ್ಲಿ ತಯಾರಾಗುತ್ತಿರುವ ನೂತನ ಚಿತ್ರಕ್ಕೆ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರ್ ಸಾಥ್
ಕಳೆದವರ್ಷ ತೆರೆಕಂಡ ಆದಿತ್ಯ ಅಭಿನಯದ “ಕಾಂಗರೂ” ಚಿತ್ರತಂಡದಿಂದ ಹೊಸ ಚಿತ್ರವೊಂದು ಘೋಷಣೆಯಾಗಿದೆ. “ಕೆ.ಜಿ.ಎಫ್” ನಂತಹ ವಿಶ್ವಮನ್ನಣೆ ಪಡೆದ ಚಿತ್ರಕ್ಕೆ ಸಂಗೀತ ನೀಡುವುದರ ಮೂಲಕ ಜನಪ್ರಿಯರಾಗಿರುವ ಹೆಸರಾಂತ ಸಂಗೀತ ನಿರ್ದೇಶಕ ರವಿ ಬಸ್ರೂರ್ ಈ ನೂತನ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ.
ಈ ಹಿಂದೆ “ಕಾಂಗರೂ” ಚಿತ್ರವನ್ನು ನಿರ್ಮಿಸಿದ್ದ ಆರೋಹ ಪ್ರೊಡಕ್ಷನ್ಸ್ ಲಾಂಛನದಲ್ಲಿ ಚನ್ನಕೇಶವ ಬಿ.ಸಿ, ಸ್ವಾಮಿ ಚಕ್ರಭಾವಿ, ನರಸಿಂಹಮೂರ್ತಿ ಚಕ್ರಭಾವಿ, ರಮೇಶ್ ಬಂಡೆ, ರವಿ ಕೀಲಾರ ಮಂಡ್ಯ ಹಾಗೂ ಕೆ.ಜಿ.ಆರ್.ಗೌಡ ಅವರು ಇದೇ ಬ್ಯಾನರ್ ಅಡಿಯಲ್ಲಿ ಅಪಾರ ವೆಚ್ಚದಲ್ಲಿ ಅದ್ದೂರಿಯಾಗಿ ಎರಡನೇ ಚಿತ್ರ ನಿರ್ಮಿಸಲು ಮುಂದಾಗಿದ್ದು, “ಕಾಂಗರೂ” ಚಿತ್ರದ ನಿರ್ದೇಶಕ ಕಿಶೋರ್ ಮೇಗಳಮನೆ ಅವರೆ ನಿರ್ದೇಶನ ಮಾಡುತ್ತಿದ್ದಾರೆ. ತಮ್ಮ ಜನಪ್ರಿಯ ಸಂಭಾಷಣೆ ಮೂಲಕ ಜನರ ಮನ ತಲುಪಿರುವ ಮಾಸ್ತಿ ಸಂಭಾಷಣೆ ಮತ್ತು ಚಿತ್ರಕಥೆ ಬರೆಯುತ್ತಿದ್ದಾರೆ.
“ಕಾಂಗರೂ” ತಂಡದ ಎರಡನೇ ಪ್ರಯತ್ನಕ್ಕೆ ಎಲ್ಲರ ಪ್ರೋತ್ಸಾಹವಿರಲಿ. ರವಿ ಬಸ್ರೂರ್ ಈ ಚಿತ್ರಕ್ಕೆ ಸಂಗೀತ ನೀಡಲು ಒಪ್ಪಿಕೊಂಡಿರುವುದು ಹಾಗೂ ಮಾಸ್ತಿ ಅವರು ಸಂಭಾಷಣೆಯ ಜೊತೆಗೆ ಚಿತ್ರಕಥೆಗೆ ಸಾಥ್ ನೀಡುತ್ತಿರುವುದು ತುಂಬಾ ಖುಷಿಯ ವಿಚಾರ. ಸದ್ಯದಲ್ಲೇ ಈ ನೂತನ ಚಿತ್ರದ ಶೀರ್ಷಿಕೆ ಅನಾವರಣ ಮಾಡಿ ಚಿತ್ರೀಕರಣ ಆರಂಭಿಸಲಾಗುವುದು. ಅದೇ ಸಮಯದಲ್ಲಿ ಚಿತ್ರದ ನಾಯಕ ಹಾಗೂ ನಾಯಕಿಯ ಯಾರೆಂದು ತಿಳಿಸಲಾಗುವುದು ಎಂದು ನಿರ್ದೇಶಕ ಕಿಶೋರ್ ಮೇಗಳಮನೆ ತಿಳಿಸಿದ್ದಾರೆ.
