ಅನಿಲ್ ಕುಮಾರ್ ಕೆ.ಆರ್ ನಿರ್ಮಾಣ ಮಾಡುವುದರೊಂದಿಗೆ ನಾಯಕನಾಗೂ ನಟಿಸಿರುವ, ವಿಜಯ್ ಚಲಪತಿ ನಿರ್ದೇಶನದ ಹಾಗೂ ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ “ನೋಡಿದ್ದು ಸುಳ್ಳಾಗಬಹುದು” ಚಿತ್ರದ “ಕನಸುಗಳ ಮೆರವಣಿಗೆ” ಎಂಬ ಹಾಡಿನ ಲಿರಿಕಲ್ ವಿಡಿಯೋ ಇತ್ತೀಚೆಗೆ ಬಿಡುಗಡೆಯಾಯಿತು.
ಅನಿರುದ್ಧ್ ಶಾಸ್ತ್ರಿ ಬರೆದಿರುವ, ಗುಮ್ಮಿನೆನಿ ವಿಜಯ್ ಸಂಗೀತ ಸಂಯೋಜಿಸಿರುವ ಹಾಗೂ ಅನಿರುದ್ಧ್ ಶಾಸ್ತ್ರಿ ಮತ್ತು ಪೃಥ್ವಿ ಭಟ್ ಹಾಡಿರುವ ಈ ಹಾಡನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು, ಉಪಾಧ್ಯಕ್ಷ ಶಿಲ್ಪ ಶ್ರೀನಿವಾಸ್ ಹಾಗೂ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ತಮ್ಮ ಪ್ರೋತ್ಸಾಹಭರಿತ ಮಾತುಗಳ ಮೂಲಕ ಹಾರೈಸಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.
ಇದೊಂದು ನೈಜ ಘಟನೆ ಆಧಾರಿತ ಚಿತ್ರ. ಈಗಾಗಲೇ ಚಿತ್ರೀಕರಣ ಪೂರ್ಣವಾಗಿ, ಪೋಸ್ಟ್ ಪ್ರೊಡಕ್ಷನ್ ನಲ್ಲಿ ಚಿತ್ರ ಬ್ಯುಸಿಯಾಗಿದೆ. ಸದ್ಯದಲ್ಲೇ ಪ್ರಥಮಪ್ರತಿ ಸಿದ್ದವಾಗಲಿದೆ. ಕನ್ನಡ ಹಾಗೂ ತೆಲುಗಿನಲ್ಲಿ ಚಿತ್ರ ಮೂಡಿಬಂದಿದೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಗುಮ್ಮಿನೆನಿ ವಿಜಯ್ ಎರಡು ಹಾಡುಗಳಿಗೆ ಹಾಗೂ ಮಿಹಿರಾಮ್ಸ್ ಎರಡು ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ.
ಮೂಲತಃ ಚಿಕ್ಕಬಳ್ಳಾಪುರದವನಾದ ನನಗೆ ಮೊದಲಿನಿಂದಲೂ ನಟನೆಯಲ್ಲಿ ಆಸಕ್ತಿ. ಉಷಾ ಭಂಡಾರಿ ಅವರ ನಟನಾ ಶಾಲೆಯಲ್ಲಿ ಕಲಿತು ಬಂದಿದ್ದೇನೆ. ಈಗ ನಟನಾಗುವ ಕಾಲ ಕೂಡಿ ಬಂದಿದೆ. ಗೆಳೆಯ ಅಕ್ಷಯ್ ಮೂಲಕ ನಿರ್ದೇಶಕ ವಿಜಯ್ ಚಲಪತಿ ಪರಿಚಯವಾದರು.
ಚಿತ್ರದಲ್ಲಿ ನಟಿಸಿರುವ ಶ್ರೀಕಾಂತ್, ಪ್ರಿಯ ತರುಣ್, ಗಣೇಶ್ ರಾವ್ ಕೇಸರ್ಕರ್, ಛಾಯಾಗ್ರಾಹಕ ಕೆ.ವಿ.ಕಿರಣ್ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.
