ಮೋದಿಗೆ ಧನ್ಯವಾದ ತಿಳಿಸಿದ ನಟಿ ನುಶ್ರತ್ ಭರೂಚಾ

Shn (2)

ಬಾಲಿವುಡ್ ಬೆಡಗಿ ನುಶ್ರತ್ ಭರೂಚಾ ಕಾರ್ಯಕ್ರಮವೊಂದರಲ್ಲಿ ಪಿಎಂ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. 2023ರಲ್ಲಿ ಹಮಾಸ್ ಭಯೋತ್ಪಾದಕರ ದಾಳಿ ನಿಮಿತ್ತ ಇಸ್ರೇಲ್‌ನಲ್ಲಿ ನುಶ್ರತ್ ಸಿಕ್ಕಿಬಿದ್ದಿದ್ದರು. ಈ ಸಂದರ್ಭದಲ್ಲಿ ಇಸ್ರೇಲ್‌ನಿಂದ ರಕ್ಷಿಸಿದ್ದಕ್ಕೆ ಪ್ರಧಾನಿ ಮೋದಿ ಅವರಿಗೆ ನಟಿ ಧನ್ಯವಾದ ತಿಳಿಸಿದ್ದಾರೆ.

ಈ ಕುರಿತು ಪೋಸ್ಟ್ ಹಂಚಿಕೊಂಡಿರುವ ನುಶ್ರತ್, ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಅವಕಾಶ ಸಿಕ್ಕಿದ್ದಕ್ಕೆ  ಸಂತಸ ವ್ಯಕ್ತಪಡಿಸಿದ್ದಾರೆ. ಇಸ್ರೇಲ್‌ನಲ್ಲಿ ಸಿಲುಕಿಕೊಂಡಿದ್ದ ಸಂದರ್ಭದಲ್ಲಿ ನನ್ನನ್ನು ಸೇರಿ ಇನ್ನುಳಿದ ಭಾರತೀಯರನ್ನು ಕರೆತರಲು ನಿಮ್ಮ ತಂಡ ಮತ್ತು ಸರ್ಕಾರ ಕೈಗೊಂಡ ಕ್ರಮಕ್ಕಾಗಿ ಧನ್ಯವಾದಗಳು. ಮೋದಿಜೀ ಅವರೇ ನಿಮಗೆ ವೈಯಕ್ತಿಕವಾಗಿ ಧನ್ಯವಾದ ಹೇಳಲು ನನಗೆ ಅದ್ಭುತ ಸೌಭಾಗ್ಯ ಸಿಕ್ಕಿದೆ. ನಿಮ್ಮನ್ನು ಭೇಟಿಯಾಗಿ ಧನ್ಯಳಾಗಿದ್ದೇನೆ. ಇದನ ಜೀವನ ಪೂರ್ತಿ ಸ್ಮರಿಸುತ್ತೇನೆ ಎಂದು ನಟಿ ಬರೆದುಕೊಂಡಿದ್ದಾರೆ.

 

 

2023ರಲ್ಲಿ ಕಾರ್ಯಕ್ರಮವೊಂದಕ್ಕಾಗಿ ನಟಿ ನುಶ್ರತ್ ಇಸ್ರೇಲ್‌ಗೆ ತೆರಳಿದ್ದರು. ಈ ಸಂದರ್ಭದಲ್ಲಿ ಹಮಾಸ್ ಉಗ್ರರು ಇಸ್ರೇಲ್ ಅನ್ನು ಟಾರ್ಗೆಟ್ ಮಾಡಿದ್ದರು. ಇಸ್ರೇಲ್‌ ಮತ್ತು ಉಗ್ರರ ಯುದ್ಧದ ಕಾರಣದಿಂದ ಅಲ್ಲಿನ ಜನ ಜೀವನ ಅಸ್ತವ್ಯಸ್ತವಾಗಿತ್ತು. ಆಗ ನಟಿ ಕೂಡ ಇಸ್ರೇಲ್‌ನಲ್ಲಿ ಸಿಲುಕಿಕೊಂಡಿದ್ದರು. ಭಾರತದ ಶ್ರಮದ ಫಲವಾಗಿ ಸುರಕ್ಷಿತವಾಗಿ ಅವರು ತಾಯ್ನಾಡು ಭಾರತಕ್ಕೆ ಮರಳಿದ್ದರು.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

Exit mobile version