ಆಪರೇಷನ್ ಸಿಂಧೂರ್: ಫೈಟರ್‌ಗಳ ಹೋರಾಟಕ್ಕೆ ರಜನಿಕಾಂತ್ ಸಲಾಂ,”ಮಿಷನ್ ಪೂರ್ತಿಯಾಗುವವರೆಗೂ ನಿಲ್ಲದು”

Befunky collage (82)

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸಶಸ್ತ್ರ ಪಡೆಗಳು ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆಯ ಮೂಲಕ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ (ಪಿಒಕೆ) ಒಂಬತ್ತು ಭಯೋತ್ಪಾದಕ ನೆಲೆಗಳನ್ನು ಧ್ವಂಸಗೊಳಿಸಿವೆ.

ಈ ಕಾರ್ಯಾಚರಣೆಗೆ ಸೂಪರ್‌ಸ್ಟಾರ್ ರಜನಿಕಾಂತ್ ತಮ್ಮ ವಿಶಿಷ್ಟ ಶೈಲಿಯಲ್ಲಿ ಮೆಚ್ಚುಗೆ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, “ಫೈಟರ್‌ಗಳ ಹೋರಾಟ ಶುರುವಾಗಿದೆ. ಮಿಷನ್ ಪೂರ್ತಿಯಾಗುವವರೆಗೂ ಇದು ನಿಲ್ಲದು. ಪ್ರಧಾನಮಂತ್ರಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರೇ, ಇಡೀ ದೇಶ ನಿಮ್ಮೊಂದಿಗೆ ಇದೆ. ಆಪರೇಷನ್ ಸಿಂಧೂರ್… ಜೈ ಹಿಂದ್!” ಎಂದು ಬರೆದುಕೊಂಡಿದ್ದಾರೆ.

ರಜನಿಕಾಂತ್ ಸಾಮಾನ್ಯವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವುದಿಲ್ಲ ಮತ್ತು ಅಗತ್ಯವಿದ್ದಾಗ ಮಾತ್ರ ಪೋಸ್ಟ್‌ಗಳನ್ನು ಹಂಚಿಕೊಳ್ಳುತ್ತಾರೆ. ಆದರೆ, ಆಪರೇಷನ್ ಸಿಂಧೂರ್‌ನ ಯಶಸ್ಸಿನ ಬಗ್ಗೆ ತಮ್ಮದೇ ಆದ ರೀತಿಯಲ್ಲಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. “ಈ ಯುದ್ಧ ಇದೀಗ ಆರಂಭವಾಗಿದೆ.

ಮಿಷನ್ ಪೂರ್ಣಗೊಳ್ಳುವವರೆಗೂ ಇದು ನಿಲ್ಲದು. ಇಡೀ ದೇಶವು ಪ್ರಧಾನಮಂತ್ರಿ ಮೋದಿ ಮತ್ತು ಅಮಿತ್ ಶಾ ಅವರೊಂದಿಗೆ ಒಗ್ಗಟ್ಟಿನಿಂದ ಇದೆ,” ಎಂದು ರಜನಿಕಾಂತ್ ತಮ್ಮ ವಿಶಿಷ್ಟ ಶೈಲಿಯಲ್ಲಿ ಸಂದೇಶ ರವಾನಿಸಿದ್ದಾರೆ. ಈ ಪೋಸ್ಟ್‌ನ ಮೂಲಕ ಭಾರತೀಯ ಸೇನೆಯ ಧೈರ್ಯಕ್ಕೆ ಅವರು ಸಲಾಂ ಸಲ್ಲಿಸಿದ್ದಾರೆ.

Exit mobile version