ಗ್ಲೋಬಲ್ ಸ್ಟಾರ್ ರಾಮ್ ಚರಣ್ ತೇಜಾ ನಟಿಸುತ್ತಿರುವ ‘ಪೆದ್ದಿ’ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಿದೆ. ಬುಚ್ಚಿ ಬಾಬು ಸನಾ ಆಕ್ಷನ್ ಕಟ್ ಹೇಳಿರುವ ಈ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಮಾರ್ಚ್ 27ರಂದು ರಿಲೀಸ್ ಆಗಬೇಕಿದ್ದ ಪೆದ್ದಿ ಸಿನಿಮಾ ಏಪ್ರಿಲ್ 30ಕ್ಕೆ ವಿಶ್ವಾದ್ಯಂತ ಥಿಯೇಟರ್ ಗೆ ಲಗ್ಗೆ ಇಡಲಿದೆ.
ರಾಮ್ ಚರಣ್ ನಟಿಸುತ್ತಿರುವ ‘ಪೆದ್ದಿ’ ಸಿನಿಮಾದಲ್ಲಿ ದೊಡ್ಡ ತಾರಾಗಣವೇ ಇದೆ. ನಾಯಕಿಯಾಗಿ ಜಾಹ್ನವಿ ಕಪೂರ್ ಅಭಿನಯಿಸಿದ್ದಾರೆ.ಈ ಸಿನಿಮಾದಲ್ಲಿ ಮತ್ತೊಂದು ಇಂಟ್ರೆಸ್ಟಿಂಗ್ ಪಾತ್ರ ಅಂದರೆ, ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ಒಂದು ಖಡಕ್ ರೋಲ್ ಕಾಣಿಸಿಕೊಳ್ಳುತ್ತಿದ್ದಾರೆ. ಇವರೆಲ್ಲರ ಹೊರತಾಗಿ ಜಗಪತಿ ಬಾಬು, ದಿವೇಂದು ಶರ್ಮಾ ಇವರಿಬ್ಬರೂ ಸೇರಿದ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಪೆದ್ದಿ ಸ್ಫೋರ್ಟ್ ಆಕ್ಷನ್ ಡ್ರಾಮಾ ಆಗಿದೆ. ಈ ಸಿನಿಮಾ ಎಆರ್ ರೆಹಮಾನ್ ಸಂಗೀತ ನಿರ್ದೇಶನ ಮಾಡುತ್ತಿದ್ದು, ವೃದ್ಧಿ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ವೆಂಕಟ ಸತೀಶ್ ಕಿಲಾರು ನಿರ್ಮಾಣ ಮಾಡುತ್ತಿದ್ದಾರೆ. ಮೈತ್ರಿ ಮೂವೀ ಮೇಕರ್ಸ್ ಮತ್ತು ಸುಕುಮಾರ್ ರೈಟಿಂಗ್ಸ್ ಬ್ಯಾನರ್‌ಗಳು ಚಿತ್ರವನ್ನು ಪ್ರೆಸೆಂಟ್ ಮಾಡುತ್ತಿದ್ದಾರೆ. ಆರ್. ರತ್ನವೇಲು ಛಾಯಾಗ್ರಹಣ ಮಾಡುತ್ತಿದ್ದು,ನವೀನ್ ನೂಲಿ ಸಂಕಲನ ಚಿತ್ರಕ್ಕಿದೆ.
‘ಪೆದ್ದಿ’ ಅವತಾರ ತಾಳಿದ ರಾಮ್ ಚರಣ್
ಗ್ಲೋಬಲ್ ಸ್ಟಾರ್ ರಾಮ್ ಚರಣ್ ಹೊಸ ಅವತಾರ ತಾಳಿದ್ದಾರೆ. ಅವರ ಜನ್ಮದಿನದ ಅಂಗವಾಗಿ RC16 ಸಿನಿಮಾದ ಟೈಟಲ್ ಹಾಗೂ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿದೆ. ಬುಚಿ ಬಾಬು ನಿರ್ದೇಶನದ ಈ ಚಿತ್ರದಲ್ಲಿ ರಾಮ್‌ಚರಣ್ ಮಾಸ್ ಆಗಿ ಕಾಣಿಸಿಕೊಂಡಿದ್ದಾರೆ.
ರಾಮ್ ಚರಣ್ ಹೊಸ ಚಿತ್ರಕ್ಕೆ ಪೆದ್ದಿ ಎಂಬ ವಿಭಿನ್ನ ಶೀರ್ಷಿಕೆ ಇಡಲಾಗಿದೆ. ಪೆದ್ದಿ ಚಿತ್ರದ ಎರಡು ಪೋಸ್ಟರ್‌ಗಳು ಬಿಡುಗಡೆ ಆಗಿವೆ. ಒಂದರಲ್ಲಿ ಬೀಡಿ ಸೇದುತ್ತಿದ್ದರೆ, ಇನ್ನೊಂದರಲ್ಲಿ ಕೈಲ್ಲಿ ಬ್ಯಾಟ್ ಹಿಡಿದು ರಗಡ್ ಆಗಿ ಕಾಣಿಸಿಕೊಂಡಿದ್ದಾರೆ.
ಪೆದ್ದಿಯಲ್ಲಿ ರಾಮ್ ಚರಣ್ ಗೆ ಜೋಡಿಯಾಗಿ ಜಾನ್ವಿ ಕಪೂರ್ ಅಭಿನಯಿಸುತ್ತಿದ್ದು, ಕರುನಾಡ ಚಕ್ರವರ್ತಿ ಶಿವರಾಜ್ಕುಮಾರ್, ಜಗಪತಿ ಬಾಬು, ದಿವ್ಯೆಂದು ಶರ್ಮಾ ತಾರಾ ಬಳಗದಲ್ಲಿದ್ದಾರೆ. ಮೈತ್ರಿ ಮೂವೀ ಮೇಕರ್ಸ್, ಸುಕುಮಾರ್ ರೈಟಿಂಗ್ ಹಾಗೂ ವೃದ್ಧಿ ಸಿನಿಮಾಸ್ ಚಿತ್ರ ತಯಾರಾಗುತ್ತಿದ್ದು, ಎಆರ್ ರೆಹಮಾನ್ ಸಂಗೀತ, ನವೀನ್ ನೂಲಿ ಸಂಕಲನ, ಆರ್ ರತ್ನವೇಲು ಛಾಯಾಗ್ರಹಣ ಚಿತ್ರಕ್ಕಿದೆ.
