ಜುಲೈ 4 ರಂದು ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಬಿಡುಗಡೆ

ಪ್ರಮುಖಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ ಹಾಗೂ "ಬಿಗ್ ಬಾಸ್" ಖ್ಯಾತಿಯ ತನಿಷಾ ಕುಪ್ಪಂಡ-ಕಿಶನ್ ನಟನೆ

Web 2025 07 03t125623.732

ಎನ್ ಹನುಮಂತರಾಜು ಹಾಗೂ ಲಯನ್ ಎಸ್ ವೆಂಕಟೇಶ್ ನಿರ್ಮಾಣದ, ಖ್ಯಾತ ನಿರ್ದೇಶಕ ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ ಕನಸಿನ ರಾಣಿ ಮಾಲಾಶ್ರೀ, “ಬಿಗ್ ಬಾಸ್” ಖ್ಯಾತಿಯ ತನಿಷಾ ಕುಪ್ಪಂಡ ಮತ್ತು ಕಿಶನ್ ಪ್ರಮುಖಪಾತ್ರದಲ್ಲಿ ಅಭಿನಯಿಸಿರುವ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ.

ಈಗಾಗಲೇ ಬಿಡುಗಡೆಯಾಗಿರುವ “ಪೆನ್ ಡ್ರೈವ್” ಚಿತ್ರದ ಹಾಡುಗಳು, ಟೀಸರ್ ಹಾಗೂ ಹಾಡುಗಳು ಜನಮೆಚ್ಚುಗೆ ಪಡೆದಿದೆ. ಶೀರ್ಷಿಕೆಯಿಂದಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಈ ಚಿತ್ರ ನೋಡುವ ಕಾತುರ ಅಭಿಮಾನಿಗಳಲ್ಲಿದೆ.

ಚಿತ್ರರಂಗದೊಂದಿಗೆ ಸುಮಾರು ಮೂವತ್ತು ವರ್ಷಗಳ ನಂಟಿರುವ ಹಾಗೂ ರಾಷ್ಟ್ರೀಯ, ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡಿರುವ ಅನೇಕ ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ನಿರ್ದೇಶಕ ಸೆಬಾಸ್ಟಿನ್ ಡೇವಿಡ್ ಅವರೆ “ಪೆನ್ ಡ್ರೈವ್” ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ‌. ಮಾಲಾಶ್ರೀ ಅವರು ಖಡಕ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಅಭಿನಯಿಸಿದ್ದಾರೆ.

ತನಿಷಾ ಕುಪ್ಪಂಡ ಹಾಗು ಕಿಶನ್ ಅವರು ಬಹು ನಿರೀಕ್ಷಿತ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಾಧಿಕಾ ರಾಮ್, ಸಂಜನಾ ನಾಯ್ಡು, ಅರ್ಚನ, ರೇಣುಕಾ, ಗೀತಾ, ಭಾಗ್ಯ, ಗೀತಪ್ರಿಯ, ಕರಿಸುಬ್ಬು, ಎನ್ ಹನುಮಂತರಾಜು ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಡಾ||ವಿ.ನಾಗೇಂದ್ರಪ್ರಸಾದ್ ಸಂಗೀತ ನಿರ್ದೇಶನ ಹಾಗೂ ಪಿ.ವಿ.ಆರ್ ಸ್ವಾಮಿ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ನಾಗೇಶ್ ಅವರು ಸಂಕಲನ ಕಾರ್ಯ ನಿರ್ವಹಿಸುವುದರೊಂದಿಗೆ ಸಂಭಾಷಣೆಯನ್ನು ಬರೆದಿದ್ದಾರೆ‌.

Exit mobile version