‘ಪೀಟರ್’ ಚಿತ್ರದ ಫಸ್ಟ್ ಲುಕ್ ರಿಲೀಸ್: ಚತುರ್ಭಾಷೆಗಳಲ್ಲಿ ರಿಲೀಸ್‌ಗೆ ಸಜ್ಜು!

ಚೆಂಡೆ ಮೇಳದೊಂದಿಗೆ ಸಸ್ಪೆನ್ಸ್ ಡ್ರಾಮಾ!

1 (52)

ಬೆಂಗಳೂರು: ‘ದೂರದರ್ಶನ’ ಚಿತ್ರದಿಂದ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡ ನಿರ್ದೇಶಕ ಸುಕೇಶ್ ಶೆಟ್ಟಿ ತಮ್ಮ ಹೊಸ ಸಿನಿಮಾ ‘ಪೀಟರ್’ನೊಂದಿಗೆ ಸಸ್ಪೆನ್ಸ್ ಡ್ರಾಮಾ ಕಥಾಹಂದರವನ್ನು ತೆರೆಗೆ ತರಲು ಸಿದ್ಧರಾಗಿದ್ದಾರೆ. ಶುಕ್ರವಾರ (ಆಗಸ್ಟ್ 15) ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದ್ದು, ಚಿತ್ರದ ಪಾತ್ರಗಳು ಮತ್ತು ಕೇರಳದ 300 ವರ್ಷಗಳ ಚೆಂಡೆ ಮೇಳದ ಸಂಗತಿಯನ್ನು ಎತ್ತಿ ತೋರಿಸಲಾಗಿದೆ. ಕನ್ನಡ, ತೆಲುಗು, ತಮಿಳು, ಮತ್ತು ಮಲಯಾಳಂ ಭಾಷೆಗಳಲ್ಲಿ ಪೋಸ್ಟರ್ ಅನಾವರಣಗೊಂಡಿದೆ.

ನಾಯಕ ರಾಜೇಶ್ ಧ್ರುವ ರಗಡ್ ಲುಕ್‌ನಲ್ಲಿ ಗಮನ ಸೆಳೆದಿದ್ದಾರೆ. ರವೀಕ್ಷಾ ಶೆಟ್ಟಿ, ಜಾಹ್ನವಿ ರಾಯಲ, ಪ್ರತಿಮಾ ನಾಯಕ್, ರಘು ಪಾಂಡೇಶ್ವರ್, ಮತ್ತು ರಾಮ ನಾಡಗೌಡ ತಾರಾಬಳಗದಲ್ಲಿದ್ದಾರೆ. ವೃದ್ಧಿ ಸ್ಟುಡಿಯೋ ಬ್ಯಾನರ್ ಅಡಿಯಲ್ಲಿ ರವಿ ಹಿರೇಮಠ್ ಮತ್ತು ರಾಕೇಶ್ ಹೆಗ್ಗಡೆ ಚಿತ್ರವನ್ನು ನಿರ್ಮಿಸಿದ್ದಾರೆ. ‘ಥಿಂಕ್ ಮ್ಯೂಸಿಕ್’ ಸಂಸ್ಥೆಯು ಚಿತ್ರದ ಆಡಿಯೋ ಹಕ್ಕುಗಳನ್ನು ಪಡೆದಿರುವುದು ಚಿತ್ರಕ್ಕೆ ಮತ್ತಷ್ಟು ಜನಮನ್ನಣೆ ತಂದಿದೆ.

ಚಿತ್ರೀಕರಣ ಮುಗಿದಿದ್ದು, ಕೇರಳದ ಚೆಂಡೆ ಮೇಳವನ್ನು ಕಥಾಹಂದರದಲ್ಲಿ ಒಳಗೊಂಡಿರುವುದು ಚಿತ್ರದ ವಿಶಿಷ್ಟತೆ. ಗುರುಪ್ರಸಾದ್ ನರ್ನಾಡ್ ಛಾಯಾಗ್ರಹಣ, ನವೀನ್ ಶೆಟ್ಟಿ ಸಂಕಲನ, ಮತ್ತು ದೇವರಾಜ್ ಕಲಾ ನಿರ್ದೇಶನ ಚಿತ್ರಕ್ಕಿದೆ. ಕನ್ನಡ, ತಮಿಳು, ತೆಲುಗು, ಮತ್ತು ಮಲಯಾಳಂ ಭಾಷೆಗಳಲ್ಲಿ ತೆರೆಗೆ ಬರಲಿರುವ ಈ ಚಿತ್ರವು ದಕ್ಷಿಣ ಭಾರತದ ಚಿತ್ರರಸಿಕರಿಗೆ ಹೊಸ ಅನುಭವ ನೀಡಲಿದೆ.

Exit mobile version