ಗೋಲ್ಡನ್ ಸ್ಟಾರ್ ಗಣೇಶ್‌ಗೆ ಹುಟ್ಟುಹಬ್ಬದ ಶುಭಾಶಯ ಕೋರಿದ “ಪಿನಾಕ” ಚಿತ್ರತಂಡ

Untitled design 2025 07 02t190731.705

ಹೆಸರಾಂತ ಪೀಪಲ್‍ ಮೀಡಿಯಾ ಫ್ಯಾಕ್ಟರಿ ಸಂಸ್ಥೆಯಡಿ ಟಿ.ಜಿ. ವಿಶ್ವಪ್ರಸಾದ್‍ ಅವರು ಅಪಾರವೆಚ್ಚದಲ್ಲಿ ಹಾಗೂ ಅದ್ದೂರಿಯಾಗಿ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ಧನಂಜಯ್‍ ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಪಿನಾಕ” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ‌‌. ಈ ಚಿತ್ರದ ಗಣೇಶ್ ಅವರ ಹೊಸ ಲುಕ್ ಗೆ ಈಗಾಗಲೇ ಅಭಿಮಾನಿಗಳು ಫಿದಾ ಆಗಿದ್ದಾರೆ‌.

ನೆಲಮಂಗಲದ ಬಳಿ ನಿರ್ಮಿಸಲಾಗಿರುವ ಅದ್ದೂರಿ ಸೆಟ್ ನಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ಗಣೇಶ್ ಅವರು ಸಹ ಈ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ‌‌‌‌.

ಜುಲೈ 2, ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ಜನ್ಮದಿನ. ಈ ಸಂದರ್ಭದಲ್ಲಿ ವಿಶೇಷವಾದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ತಮ್ಮ ಚಿತ್ರದ ನಾಯಕ ಗಣೇಶ್ ಅವರಿಗೆ “ಪಿನಾಕ” ಚಿತ್ರತಂಡ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.

Exit mobile version