ಮಾ‌.7ಕ್ಕೆ ಪ್ರಜ್ವಲ್ ದೇವರಾಜ್ ನಟನೆಯ ‘ರಾಕ್ಷಸ’ ಬಿಡುಗಡೆ!

Befunky Collage 2025 02 27t165125.708

ಶಾನ್ವಿ ಎಂಟರ್‌ಟೇನ್ಮೆಂಟ್ ಮೂಲಕ ದೀಪು ಬಿ.ಎಸ್ ನಿರ್ಮಿಸಿರುವ, ನವೀನ್ ಮತ್ತು ಮಾನಸಾ ಕೆ‌ ಸಹ ನಿರ್ಮಾಣದಲ್ಲಿ ಮೂಡಿ ಬಂದಿರುವ ಸಿನಿಮಾ ರಾಕ್ಷಸ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಇವತ್ತು ಶಿವರಾತ್ರಿ ಹಬ್ಬದ ವಿಶೇಷವಾಗಿ ಚಿತ್ರ ತೆರೆಗೆ ಬರಬೇಕಿತ್ತು. ಆದರೆ ರಾಕ್ಷಸ ಬಿಡುಗಡೆ ದಿನಾಂಕ ಮುಂದೂಡಲಾಗಿದೆ. ಮಾರ್ಚ್ 7ಕ್ಕೆ ರಾಕ್ಷಸನಾಗಿ ಪ್ರಜ್ವಲ್ ದೇವರಾಜ್ ದರ್ಶನ ಕೊಡಲಿದ್ದಾರೆ.

ಪ್ರತಿ ಸಿನಿಮಾಗಳಲ್ಲಿಯೂ ಭಿನ್ನ ವಿಭಿನ್ನ ಪಾತ್ರಗಳ ಮೂಲಕ ರಂಜಿಸುವ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ರಾಕ್ಷಸ ಚಿತ್ರದ ಮೂಲಕ ಪ್ರೇಕ್ಷಕರ ಎದುರು ಬರಲು ಸಜ್ಜಾಗಿದ್ದಾರೆ. ಬಹಳ ವಿಭಿನ್ನವಾದ ಪಾತ್ರದಲ್ಲಿ ಡೈನಾಮಿಕ್ ಪ್ರಿನ್ಸ್ ಕಾಣಿಸಿಕೊಂಡಿದ್ದಾರೆ. ಲೋಹಿತ್ ಎಚ್ ನಿರ್ದೇಶನದಲ್ಲಿ ಟೈಮ್ ಲೂಪ್ ಹಾರರ್ ಚಿತ್ರದಲ್ಲಿ ಸೋನಲ್ ಮೊಂಥೆರೋ ನಾಯಕಿಯಾಗಿ ಸಾಥ್ ಕೊಟ್ಟಿದ್ದಾರೆ. ಶೋಭಾರಾಜ್, ವತ್ಸಲಾಮೋಹನ್, ಸಿದ್ಲಿಂಗು ಶ್ರೀಧರ್, ಆರ್ನ ರಾಥೋಡ್ ಹೀಗೆ ಇನ್ನು ಹಲವು ಕಲಾವಿದರು ತಾರಾಬಳಗದಲ್ಲಿದ್ದಾರೆ.

ಚಿತ್ರಕ್ಕೆ ಜೇಬಿನ್ ಪಿ ಜೋಕಬ್ ಕ್ಯಾಮರಾವರ್ಕ್ ಮಾಡಿದ್ದಾರೆ. ವಿನೋದ್ ಸಾಹಸ ನಿರ್ದೇಶನ ಇದೆ. ಅಜನೀಶ್ ಲೋಕನಾಥ್ ಸಂಗೀತ ಚಿತ್ರಕ್ಕಿದೆ. ಕನ್ನಡದ ಈ ಚಿತ್ರವನ್ನ ಹೈದ್ರಾಬಾದ್ ಅಲ್ಲಿಯೇ ಚಿತ್ರೀಕರಣ ಮಾಡಲಾಗಿದೆ. ಶೇಕಡ 80 ರಷ್ಟು ಭಾಗವನ್ನಇಲ್ಲಿಯ ರಾಮೋಜಿ ರಾವ್ ಫಿಲ್ಮ್ ಸಿಟಿಯಲ್ಲಿಯೇ ತೆಗೆಯಲಾಗಿದೆ. ಇತರ ಶೇಕಡ 20 ರಷ್ಟು ಭಾಗವನ್ನ ಬೆಂಗಳೂರು, ರಾಮೇಶ್ವರಂ, ಹಾಗೂ ಗೋವಾದಲ್ಲಿ ಚಿತ್ರೀಕರಣ ಮಾಡಲಾಗಿದೆ.

Exit mobile version