• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಶೂಟಿಂಗ್‌ ಶುರು

ಹಳ್ಳಿ ಹುಡುಗಿಯ ಗೆಟಪ್‌ನಲ್ಲಿ 'ತುಪ್ಪದ ಬೆಡಗಿ'

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 6, 2025 - 4:53 pm
in ಸಿನಿಮಾ
0 0
0
1111 (1)

ಇಲ್ಲಿಯವರೆಗೆ ಕನ್ನಡ ಚಿತ್ರರಂಗದಲ್ಲಿ ಗ್ಲಾಮರಸ್‌ ಪಾತ್ರಗಳ ಮೂಲಕ ಸಿನಿಪ್ರಿಯರ ಮನ-ಗಮನ ಸೆಳೆದಿದ್ದ ನಟಿ ರಾಗಿಣಿ ದ್ವಿವೇದಿ, ಈಗ ನಿಧಾನವಾಗಿ ಕಂಟೆಂಟ್‌ ಆಧರಿತ ಸಿನಿಮಾಗಳತ್ತ ಒಲವು ತೋರುತ್ತಿದ್ದಾರೆ. ಹೌದು, ಇತ್ತೀಚಿನ ದಿನಗಳಲ್ಲಿ ಒಂದು ಚಿತ್ರದಿಂದ ಮತ್ತೊಂದು ಚಿತ್ರಕ್ಕೆ ವಿಭಿನ್ನ ಪಾತ್ರಗಳನ್ನು ಬಯಸುತ್ತಿರುವ ರಾಗಿಣಿ ದ್ವಿವೇದಿ, ಈಗ ಅಂಥದ್ದೇ ಒಂದು ಸಿನಿಮಾದ ಮೂಲಕ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ.

RelatedPosts

‘ಅದು ನಮ್ಮ ದೌರ್ಭಾಗ್ಯ’: ನಟಿಯರನ್ನ ಅಸಭ್ಯವಾಗಿ ತೋರಿಸಿದ ಬಗ್ಗೆ ನಟ ಶಿವರಾಜ್‌ಕುಮಾರ್‌ ಬೇಸರ

ರಶ್ಮಿಕಾ-ವಿಜಯ್ ಅದ್ಧೂರಿ ರಿಸೆಪ್ಷನ್: ಕರ್ನಾಟಕದ ಡಿಸಿಎಂ ಡಿಕೆಶಿ ಸೇರಿ ಸ್ಟಾರ್‌‌ ನಟ, ನಟಿಯರು ಭಾಗಿ

ಹೈದರಾಬಾದ್‌‌ನಲ್ಲಿ ವಿರೋಷ್ ರಿಸೆಪ್ಶನ್: ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ರಶ್ಮಿಕಾ-ವಿಜಯ್

‘ತೆಲುಗು ರಾಜ್ಯಕ್ಕೆ ಹೊಸ ಸೊಸೆ ಬಂದಿದ್ದಾಳೆ, ಚೆನ್ನಾಗಿ ನೋಡಿಕೊಳ್ಳಿ’: ವಿಜಯ್ ದೇವರಕೊಂಡ

ADVERTISEMENT
ADVERTISEMENT

ಅಂದಹಾಗೆ, ರಾಗಿಣಿ ದ್ವಿವೇದಿ ನಾಯಕಿಯಾಗಿ ಅಭಿನಯಿಸುತ್ತಿರುವ ಹೊಸ ಸಿನಿಮಾದ ಹೆಸರು ‘ಸರ್ಕಾರಿ ನ್ಯಾಯಬೆಲೆ ಅಂಗಡಿ’. ಕೆಲ ದಿನಗಳ ಹಿಂದಷ್ಟೇ ಈ ಸಿನಿಮಾದ ಧ್ವನಿಮುದ್ರಣ ಕಾರ್ಯವನ್ನು ಆರಂಭಿಸಿದ್ದ ಚಿತ್ರತಂಡ, ಇದೀಗ ಹಾಡುಗಳ ಕೆಲಸವನ್ನು ಪೂರ್ಣಗೊಳಿಸಿ, ಚಿತ್ರದ ಚಿತ್ರೀಕರಣ ಕಾರ್ಯಕ್ಕೆ ಚಾಲನೆ ನೀಡಿದೆ.

ನಟಿ ರಾಗಿಣಿ ದ್ವಿವೇದಿ ಅವರೊಂದಿಗೆ, ನಟ ಕುಮಾರ್‌ ಬಂಗಾರಪ್ಪ, ಹಿರಿಯ ನಟ ದೊಡ್ಡಣ್ಣ ಮೊದಲಾದ ಕಲಾವಿದರು ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾದ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸುತ್ತಿದ್ದಾರೆ. ಇನ್ನು ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾದ ಮುಹೂರ್ತ ಸಮಾರಂಭ ಇತ್ತೀಚೆಗೆ ನೆರವೇರಿತು.

ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಆವರಣದಲ್ಲಿರುವ ಶ್ರೀಗಂಗಾಧರೇಶ್ವರ ದೇವಸ್ಥಾನದಲ್ಲಿ ನಡೆದ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾದ ಮುಹೂರ್ತ ಸಮಾರಂಭದಲ್ಲಿ, ಹಿರಿಯ ನಟ ಶ್ರೀನಾಥ್‌ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾದ ಮೊದಲ ದೃಶ್ಯಕ್ಕೆ ಕ್ಲಾಪ್‌ ಮಾಡಿದರು.

ಆಹಾರ ಮತ್ತು ನಾಗರೀಕ ಸರಬರಾಜು ಖಾತೆ ಸಚಿವ ಕೆ. ಹೆಚ್‌. ಮುನಿಯಪ್ಪ, ಶಾಸಕ ಎಲ್‌. ಶಿವರಾಮೇ ಗೌಡ, ‘ಕರ್ನಾಟಕ ರಾಜ್ಯ ಸರ್ಕಾರತಿ ಪಡಿತರ ವಿತರಕರ ಒಕ್ಕೂಟ’ದ ಅಧ್ಯಕ್ಷ ಟಿ. ಕೃಷ್ಣಪ್ಪ, ನಿರ್ಮಾಪಕ ಭಾ. ಮ. ಹರೀಶ್‌, ಭಾ. ಮ. ಗಿರೀಶ್‌ ಸೇರಿದಂತೆ ಅನೇಕರು ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ, ಚಿತ್ರತಂಡಕ್ಕೆ ಶುಭ ಹಾರೈಸಿದರು.

‘ಜಯಶಂಕರ ಟಾಕೀಸ್‌’ ಬ್ಯಾನರಿನಲ್ಲಿ ತೇಜು ಮೂರ್ತಿ ಮತ್ತು ಎಸ್‌. ಪದ್ಮಾವತಿ ಚಂದ್ರಶೇಖರ್‌ ಜಂಟಿಯಾಗಿ ನಿರ್ಮಿಸುತ್ತಿರುವ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾಕ್ಕೆ ಹಿರಿಯ ನಿರ್ದೇಶಕ ಬಿ. ರಾಮಮೂರ್ತಿ ಕಥೆ, ಚಿತ್ರಕಥೆ ಬರೆದಿದ್ದಾರೆ. ಈ ಹಿಂದೆ ‘ತಾಯವ್ವ’ ಎಂಬ ಸಿನಿಮಾವನ್ನು ನಿರ್ದೇಶಿಸಿದ್ದ ಸಾತ್ವಿಕ್‌ ಪವನ್‌ ಕುಮಾರ್‌ ಈ ಸಿನಿಮಾಕ್ಕೆ ಛಾಯಾಗ್ರಹಣ ಮತ್ತು ನಿರ್ದೇಶನ ಮಾಡುತ್ತಿದ್ದಾರೆ. ಅನಂತ ಆರ್ಯನ್‌ ಈ ಸಿನಿಮಾದ ಹಾಡುಗಳಿಗೆ ಸಂಗೀತ ಸಂಯೋಜಿಸುತ್ತಿದ್ದಾರೆ.

ನಟಿ ರಾಗಿಣಿ ದ್ವಿವೇದಿ ಮಾತನಾಡಿ ‘ನನಗೆ ಇದೊಂದು ಹೊಸಥರದ ಪಾತ್ರ ಇಲ್ಲಿಯವರೆಗೆ ನಾನೆಂದೂ, ಈ ಥರದ ಪಾತ್ರಗಳನ್ನು ಮಾಡಿರಲಿಲ್ಲ. ಪಕ್ಕಾ ಹಳ್ಳಿಯ ಹೆಣ್ಣು ಮಗಳೊಬ್ಬಳು ತನ್ನ ಊರಿನ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ವ್ಯವಸ್ಥೆಯಲ್ಲಿ ಜನರಿಗೆ ಆಗುತ್ತಿರುವ ಅನ್ಯಾಯವನ್ನು ಹೇಗೆ ಎದುರಿಸಿ, ಬಡ ಮತ್ತು ಜನಸಾಮಾನ್ಯರಿಗೆ ನ್ಯಾಯ ಒದಗಿಸುತ್ತಾಳೆ ಎಂಬುದು ನನ್ನ ಪಾತ್ರ. ನಾನು ಈ ಸಿನಿಮಾದಲ್ಲಿ ಪಾರ್ವತಿ ಎಂಬ ಹಳ್ಳಿಯ ಹುಡುಗಿಯಾಗಿ ಕಾಣಿಸಿಕೊಳ್ಳುತ್ತಿದ್ದೇನೆ. ಮೊದಲ ಬಾರಿಗೆ ಕರ್ನಾಟಕದ ಅಪ್ಪಟ ಗ್ರಾಮೀಣ ಸೊಗಡಿನ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದಕ್ಕೆ ತುಂಬ ಎಕ್ಸೈಟ್‌ ಆಗಿದ್ದೇನೆ. ಈ ಸಿನಿಮಾದ ಕಥೆ ಮತ್ತು ಪಾತ್ರ ನನಗೆ ತುಂಬ ಇಷ್ಟವಾಗಿದ್ದು, ತೆರೆಮೇಲೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾ ಹೇಗೆ ಬರಬಹುದು ಎಂಬ ಕುತೂಹಲ ನನಗೂ ಇದೆ. ಒಂದೇ ಮಾತಿನಲ್ಲಿ ಹೇಳುವುದಾದರೆ, ಇದೊಂದು ಕಂಟೆಂಟ್‌ ಆಧಾರಿತ ಸಿನಿಮಾ. ಈ ಸಿನಿಮಾದಲ್ಲಿ ಹತ್ತಾರು ವಿಷಯಗಳಿವೆ. ಆ ವಿಷಯಗಳು ಸಿನಿಮಾ ನೋಡುವ ಪ್ರತಿಯೊಬ್ಬರಿಗೂ ಕನೆಕ್ಟ್‌ ಆಗುವಂತಿದೆ.’ ಎಂದರು.

ನಂತರ ಮಾತನಾಡಿದ ನಟ ಕುಮಾರ್‌‌ ಬಂಗಾರಪ್ಪ ಅವರು, ‘ಸಿನಿಮಾದ ಹೆಸರೇ ಹೇಳುವಂತೆ ಇದು ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಯ ಸುತ್ತ ನಡೆಯುವ ಕಥೆಯನ್ನು ಹೊಂದಿದ ಸಿನಿಮಾ. ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಯಾರಿಗಾಗಿ ಇದೆ? ಯಾವ ಉದ್ದೇಶಕ್ಕಾಗಿ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಯನ್ನು ತೆರೆಯಲಾಗಿದೆ? ಈ ವ್ಯವಸ್ಥೆ ಹೇಗಿರಬೇಕು? ಅದರಲ್ಲಿರುವ ಲೋಪಗಳೇನು? ಎಂಬುದನ್ನು ತಿಳಿಸುವುದೇ ಈ ಸಿನಿಮಾದ ಉದ್ದೇಶ. ಇದು ಕೇವಲ ಸಿನಿಮಾ ಮಾತ್ರವಲ್ಲ. ಜನರಿಗೆ ಈ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಒಳ-ಹೊರ ವ್ಯವಸ್ಥೆಯನ್ನು ಪರಿಚಯಿಸುವ ಒಂದು ಕಾರ್ಯಕ್ರಮ. ಬಹಳ ವರ್ಷಗಳ ನಂತರ ಇಂಥದ್ದೊಂದು ಸದಭಿರುಚಿ ಸಿನಿಮಾದಲ್ಲಿ ಒಂದು ಪಾತ್ರವಾಗಿ ಅಭಿನಯಿಸುತ್ತಿರುವುದಕ್ಕೆ ಖುಷಿಯಾಗುತ್ತಿದೆ. ಈ ಸಿನಿಮಾದಲ್ಲಿ ಜನಸಾಮಾನ್ಯನರ ಹೋರಾಟವಿದೆ. ಹೋರಾಟದ ಮೂಲಕ ಗೆಲ್ಲಬಹುದು ಎಂದು ಹೇಳುವಂಥ ಯಶಸ್ಸಿನ ಕಥೆಯಿದೆ. ಖಂಡಿತವಾಗಿಯೂ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಕನ್ನಡ ಚಿತ್ರರಂಗದಲ್ಲಿ ಒಂದು ವಿಭಿನ್ನ ಸಿನಿಮಾಗಳ ಸಾಲಿನಲ್ಲಿ ನಿಲ್ಲುವಂಥ ಸಿನಿಮಾವಾಗಲಿದೆ ಎಂಬ ವಿಶ್ವಾಸವಿದೆ.’ ಎಂದು ಹೇಳಿದ್ದಾರೆ.

ನಿರ್ದೇಶಕ ಸಾತ್ವಿಕ್‌ ಪವನ್‌ ಕುಮಾರ್‌ ಮಾತನಾಡಿದ ಅವರು,  ‘ಇದೊಂದು ಗ್ರಾಮೀಣ ಹಿನ್ನೆಲೆಯಲ್ಲಿ ಮಹಿಳಾ ಪ್ರಧಾನ ಕಥಾಹಂದರದ ಫ್ಯಾಮಿಲಿ ಡ್ರಾಮಾ. ನಮ್ಮ ನಡುವೆಯೇ ನಡೆಯುವಂಥ ಅನೇಕ ವಿಷಯಗಳನ್ನು ಈ ಸಿನಿಮಾದಲ್ಲಿ ಚರ್ಚಿಸಿದ್ದೇವೆ. ಈ ಸಿನಿಮಾ ಪ್ರತಿಯೊಬ್ಬ ನೋಡುಗರನ್ನೂ ಯೋಚಿಸುವಂತೆ ಮಾಡುತ್ತದೆ. ಅದರಲ್ಲೂ ಗ್ರಾಮೀಣ ಮಹಿಳೆಯರಿಗೆ ಈ ಸಿನಿಮಾ ಬಹುಬೇಗ ಮನಮುಟ್ಟುತ್ತದೆ. ಇನ್ನೊಂದು ವಿಶೇಷವೆಂದರೆ, ಇಬ್ಬರು ಮಹಿಳೆಯರೇ ಸೇರಿ ಇಂಥದ್ದೊಂದು ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಮಹಿಳಾ ಕೇಂದ್ರಿತ ಕಥೆ ಮತ್ತು ಪಾತ್ರಗಳೇ ಈ ಸಿನಿಮಾದಲ್ಲಿ ಹೈಲೈಟ್‌ ಆಗಿರಲಿದೆ. ನಟ ಅಂಬರೀಶ್‌ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯ ದೊಡ್ಡ ಅರಸಿನಕೆರೆ ಸುತ್ತಮುತ್ತ ಸುಮಾರು 35 ದಿನಗಳ ಕಾಲ ಈ ಸಿನಿಮಾದ ಬಹುತೇಕ ಚಿತ್ರೀಕರಣ ನಡೆಸಲು ಯೋಜನೆ ಹಾಕಿಕೊಂಡಿದ್ದೇವೆ. ಮುಹೂರ್ತದ ಬಳಿಕ ಒಂದೇ ಹಂತದಲ್ಲಿ ಈ ಸಿನಿಮಾದ ಇಡೀ ಚಿತ್ರೀಕರಣ ನಡೆಯಲಿದೆ. ಇದೇ ವರ್ಷದ ಕೊನೆಯೊಳಗೆ ಈ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾವನ್ನು ಪ್ರೇಕ್ಷಕರ ಮುಂದೆ ತರುವ ಯೋಜನೆಯಿದೆ’ ಎಂದು ಹೇಳಿದರು.

ನಿರ್ಮಾಪಕಿಯಾರಾದ ತೇಜು ಮೂರ್ತಿ ಮತ್ತು ಎಸ್‌. ಪದ್ಮಾವತಿ ಚಂದ್ರಶೇಖರ್‌ ಮಾತನಾಡಿದ್ದು,  ”ಸರ್ಕಾರಿ ನ್ಯಾಯಬೆಲೆ ಅಂಗಡಿ’ಯ ಕಥೆ ತುಂಬ ಇಷ್ಟವಾಯಿತು. ಇದು ನಮ್ಮ ಸಮಾಜದ ನಡುವಿನ ಕಥೆಯನ್ನು ಹೇಳುವಂಥ ಸಿನಿಮಾ. ಈ ಸಿನಿಮಾ ಮನರಂಜನೆಯ ಜೊತೆಗೆ ಮಾಹಿತಿಯನ್ನೂ, ಜೊತೆಗೊಂದು ಸಂದೇಶವನ್ನೂ ಕೊಡುತ್ತದೆ. ಹಾಗಾಗಿ ಇಂಥ ಅಪರೂಪದ ಕಥೆಯನ್ನು ಸಿನಿಮಾ ಮಾಡಲು ಮುಂದಾದೆವು. ನಮ್ಮ ನಿರೀಕ್ಷೆಯಂತೆ ಈ ಸಿನಿಮಾ ನೋಡುಗರಿಗೂ ಇಷ್ಟವಾಗುತ್ತದೆ. ಜನ ಇಂಥ ಸಿನಿಮಾಗಳನ್ನು ಬೆಂಬಲಿಸುತ್ತಾರೆ ಎಂಬ ವಿಶ್ವಾಸವಿದೆ. ಆದಷ್ಟು ಬೇಗ ಸಿನಿಮಾದ ಎಲ್ಲಾ ಕೆಲಸಗಳನ್ನು ಮುಗಿಸಿ, ಈ ವರ್ಷದ ಕೊನೆಯೊಳಗೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾವನ್ನು ಪ್ರೇಕ್ಷಕರ ಮುಂದೆ ತರುವ ಪ್ರಯತ್ನ ಮಾಡುತ್ತೇವೆ’ ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 05T134442.827

ಹೋಳಿ ಆಚರಣೆ ವೇಳೆ ಬುರ್ಖಾ ಧರಿಸಿ ‘ಅಣಕು ಶವಯಾತ್ರೆ’ ನಡೆಸಿದ ಯುವಕರು: ಐವರ ಮೇಲೆ FIR

by ಶಾಲಿನಿ ಕೆ. ಡಿ
March 5, 2026 - 1:45 pm
0

Untitled design 2026 03 05T132323.990

ಇರಾನ್-ಇಸ್ರೇಲ್ ವಾರ್‌ ಎಫೆಕ್ಟ್‌: ಯುಗಾದಿ, ರಂಜಾನ್ ಮುನ್ನ ಅಡುಗೆ ಎಣ್ಣೆ ಬೆಲೆ ಏರಿಕೆ

by ಶಾಲಿನಿ ಕೆ. ಡಿ
March 5, 2026 - 1:24 pm
0

Untitled design 2026 03 05T125542.002

ಹೊಸ ಸರ್ಕಾರಕ್ಕೆ ನನ್ನ ಬೆಂಬಲ: ರಾಜ್ಯಸಭೆ ಸ್ಪರ್ಧೆಗೂ ಮುನ್ನ ನಿತೀಶ್ ಕುಮಾರ್ ಭಾವುಕ ಸಂದೇಶ

by ಶಾಲಿನಿ ಕೆ. ಡಿ
March 5, 2026 - 12:56 pm
0

Untitled design 2026 03 05T123333.033

ಇರಾನ್‌ನಿಂದ ಟ್ರಂಪ್, ಬೈಡನ್, ನಿಕ್ಕಿ ಹ್ಯಾಲಿ ಹ*ತ್ಯೆಗೆ ಸಂಚು: ಪಾಕ್‌ ಪ್ರಜೆಯ ಸ್ಫೋಟಕ ಹೇಳಿಕೆ

by ಶಾಲಿನಿ ಕೆ. ಡಿ
March 5, 2026 - 12:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 05T113942.935
    ‘ಅದು ನಮ್ಮ ದೌರ್ಭಾಗ್ಯ’: ನಟಿಯರನ್ನ ಅಸಭ್ಯವಾಗಿ ತೋರಿಸಿದ ಬಗ್ಗೆ ನಟ ಶಿವರಾಜ್‌ಕುಮಾರ್‌ ಬೇಸರ
    March 5, 2026 | 0
  • Untitled design 2026 03 04T225638.418
    ರಶ್ಮಿಕಾ-ವಿಜಯ್ ಅದ್ಧೂರಿ ರಿಸೆಪ್ಷನ್: ಕರ್ನಾಟಕದ ಡಿಸಿಎಂ ಡಿಕೆಶಿ ಸೇರಿ ಸ್ಟಾರ್‌‌ ನಟ, ನಟಿಯರು ಭಾಗಿ
    March 4, 2026 | 0
  • Untitled design 2026 03 04T212411.415
    ಹೈದರಾಬಾದ್‌‌ನಲ್ಲಿ ವಿರೋಷ್ ರಿಸೆಪ್ಶನ್: ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ರಶ್ಮಿಕಾ-ವಿಜಯ್
    March 4, 2026 | 0
  • Untitled design 2026 03 04T211035.839
    ‘ತೆಲುಗು ರಾಜ್ಯಕ್ಕೆ ಹೊಸ ಸೊಸೆ ಬಂದಿದ್ದಾಳೆ, ಚೆನ್ನಾಗಿ ನೋಡಿಕೊಳ್ಳಿ’: ವಿಜಯ್ ದೇವರಕೊಂಡ
    March 4, 2026 | 0
  • Untitled design 2026 03 04T200454.514
    ಡಾರ್ಲಿಂಗ್ ಕೃಷ್ಣ ನಿರ್ದೇಶನ ಲವ್ ಮಾಕ್ಟೇಲ್ 3 ಮಾರ್ಚ್ 19ಕ್ಕೆ ಬಿಡುಗಡೆ
    March 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version