• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 13, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 27, 2025 - 5:12 pm
in ಸಿನಿಮಾ
0 0
0
Untitled design 2025 06 27t170906.758

2015ರ ಜುಲೈ 3 ರಂದು ತೆರೆಕಂಡು, ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಎಚ್.ಕೆ. ಪ್ರಕಾಶ್ ನಿರ್ಮಾಣದ, ಅನೂಪ್ ಭಂಡಾರಿ ನಿರ್ದೇಶನದ ಬ್ಲಾಕ್‌ಬಸ್ಟರ್ ಚಲನಚಿತ್ರ ‘ರಂಗಿತರಂಗ’, ಈಗ ಹತ್ತು ವರ್ಷಗಳ ನಂತರ ಮತ್ತೆ ತೆರೆಗೆ ಬರಲು ಸಜ್ಜಾಗಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ, ಚಿತ್ರತಂಡದ ಸದಸ್ಯರು ತಮ್ಮ ಅನುಭವಗಳನ್ನು ಹಂಚಿಕೊಂಡು ಹಳೆಯ ನೆನಪುಗಳನ್ನು ಮೆಲುಕು ಹಾಕಿದರು.

RelatedPosts

ಯಶ್ ‘ಟಾಕ್ಸಿಕ್’ ಮೇಕಿಂಗ್ ವೀಡಿಯೋ ಲೀಕ್: ರಾಕಿಭಾಯ್ ಸಿಕ್ಸ್ ಪ್ಯಾಕ್‌‌ಗೆ ಫ್ಯಾನ್ಸ್ ಕ್ಲೀನ್ ಬೋಲ್ಡ್!

ZEE5 ನಿಂದ “ಭಾರತ್ ಬಿಂಜ್ ಫೆಸ್ಟಿವಲ್”: ಹೊಸ ಕಥೆಗಳು, ವಿಶೇಷ ದೀಪಾವಳಿ ಆಫರ್‌ಗಳು

ಹಾಸ್ಯ ಕಲಾವಿದ ರಾಜು ತಾಳಿಕೋಟೆ ನಿಧನಕ್ಕೆ ಕೇಂದ್ರ ಸಚಿವ ಹೆಚ್‌‌.ಡಿ ಕುಮಾರಸ್ವಾಮಿ ಸಂತಾಪ

‘ಜೈ ಗದಾ ಕೇಸರಿ’ ಚಿತ್ರದ ಟೀಸರ್, ಹಾಡುಗಳ ಬಿಡುಗಡೆ

ADVERTISEMENT
ADVERTISEMENT

ನಿರ್ಮಾಪಕ ಎಚ್.ಕೆ. ಪ್ರಕಾಶ್: “ಹತ್ತು ವರ್ಷಗಳ ನಂತರವೂ ‘ರಂಗಿತರಂಗ’ ಪ್ರಕಾಶ್ ಎಂದೇ ಗುರುತಿಸುತ್ತಾರೆ!”

“ನಾನು ನಿರೂಪ್ ನಟಿಸಿದ್ದ ಒಂದು ಟೆಲಿಫಿಲಂ ನೋಡಿ ಮೆಚ್ಚಿಕೊಂಡಿದ್ದೆ. ಅವರೊಂದಿಗೆ ಸಿನಿಮಾ ಮಾಡಬೇಕೆಂದು ನಿರೂಪ್ ಅವರ ತಂದೆ ಸುಧಾಕರ್ ಭಂಡಾರಿ ಅವರನ್ನು ಸಂಪರ್ಕಿಸಿದಾಗ, ಅವರು ಅನೂಪ್ ಭಂಡಾರಿ ನಿರ್ದೇಶನದ ಸಿನಿಮಾದ ಪ್ರೀ-ಪ್ರೊಡಕ್ಷನ್‌ನಲ್ಲಿ ತೊಡಗಿಸಿಕೊಂಡಿದ್ದರು. ಆಗ ಅನೂಪ್ ಅವರ ಬಳಿ ಕಥೆ ಕೇಳಿದೆ. ಹಾಡುಗಳನ್ನು ಕೇಳಿದ ಕೂಡಲೇ ಈ ಸಿನಿಮಾ ನಾನೇ ಮಾಡಬೇಕು ಎಂದು ತೀರ್ಮಾನಿಸಿದೆ. ಆ ಚಿತ್ರವೇ ‘ರಂಗಿತರಂಗ’. ಯಶಸ್ಸಿನ ಉತ್ತುಂಗಕ್ಕೇರಿ ಈಗ 10ನೇ ವಾರ್ಷಿಕೋತ್ಸವ ಆಚರಿಸುತ್ತಿರುವ ಈ ಚಿತ್ರದಿಂದಾಗಿ, ಹತ್ತು ವರ್ಷಗಳ ನಂತರವೂ ನನ್ನನ್ನು ‘ರಂಗಿತರಂಗ’ ಪ್ರಕಾಶ್ ಎಂದೇ ಗುರುತಿಸುತ್ತಾರೆ. ನಿಮ್ಮೆಲ್ಲರ ಪ್ರೋತ್ಸಾಹದೊಂದಿಗೆ, 2025ರ ಜುಲೈ 4 ರಂದು ‘ರಂಗಿತರಂಗ’ ಚಿತ್ರವನ್ನು ಮರು-ಬಿಡುಗಡೆ ಮಾಡುತ್ತಿದ್ದೇವೆ,” ಎಂದು ನಿರ್ಮಾಪಕ ಎಚ್.ಕೆ. ಪ್ರಕಾಶ್ ಹೇಳಿದರು.

ನಿರ್ದೇಶಕ ಅನೂಪ್ ಭಂಡಾರಿ: “ಅಮೆರಿಕಾದಲ್ಲಿ ಕನ್ನಡಕ್ಕೆ ಹೊಸ ಮಾರುಕಟ್ಟೆ ಸೃಷ್ಟಿಸಿತು!”

“ವಿದೇಶದಲ್ಲಿ ಒಳ್ಳೆಯ ಉದ್ಯೋಗದಲ್ಲಿದ್ದ ನಾನು ಹಾಲಿವುಡ್ ಸ್ಟಾರ್ ರಸೆಲ್ ಹಾರ್ವರ್ಡ್ ಅವರೊಂದಿಗೆ ಅಂತರರಾಷ್ಟ್ರೀಯ ಕಿರುಚಿತ್ರಗಳನ್ನು ಮಾಡಿದ್ದೆ. ‘ರಂಗಿತರಂಗ’ದ ಪ್ರೀ-ಪ್ರೊಡಕ್ಷನ್ ಕಾರ್ಯದಲ್ಲಿರುವಾಗ, ಈ ಚಿತ್ರ ನಾನೇ ಮಾಡಬೇಕೆಂದು ಎಚ್.ಕೆ. ಪ್ರಕಾಶ್ ಅವರ ಆಸೆಯನ್ನು ನೋಡಿ ಅವರ ಉತ್ಸಾಹಕ್ಕೆ ಕೈಜೋಡಿಸಿದೆ. ಸಾಯಿಕುಮಾರ್ ಅವರನ್ನು ಹೊರತುಪಡಿಸಿ, ಬಹುತೇಕ ಎಲ್ಲ ಕಲಾವಿದರು ಹೊಸಬರಾಗಿದ್ದರು. ನಿರೂಪ್ ಭಂಡಾರಿ, ರಾಧಿಕಾ ಚೇತನ್, ಅವಂತಿಕಾ ಶೆಟ್ಟಿ, ಅರವಿಂದ್ – ಎಲ್ಲರ ಸಂಘಟಿತ ಶ್ರಮವೇ ಚಿತ್ರ ಉತ್ತಮವಾಗಿ ಮೂಡಿಬರಲು ಕಾರಣ. ಛಾಯಾಗ್ರಾಹಕ ವಿಲಿಯಂ ಡೇವಿಡ್ ನನ್ನ ಕಲ್ಪನೆಗೆ ಸೂಕ್ತ ದೃಶ್ಯಗಳನ್ನು ಸಂಯೋಜಿಸಿ ಯಶಸ್ಸಿಗೆ ಕಾರಣರಾದರು.
2015ರ ಜುಲೈ 3ರಂದು ನಮ್ಮ ಚಿತ್ರ ಬಿಡುಗಡೆಯಾದಾಗ, ಕಪಾಲಿ ಚಿತ್ರಮಂದಿರದಲ್ಲಿ ಚಿತ್ರ ನೋಡಿ ಬಂದ ಕೆಲವರು ನಮ್ಮ ನಿರ್ಮಾಪಕರಿಗೆ ‘ನಿಮಗೆ ಪೋಸ್ಟರ್ ಖರ್ಚು ಕೂಡ ಬರುವುದಿಲ್ಲ’ ಎಂದು ಹೆದರಿಸಿದ್ದರು. ಆದರೆ, ನಮ್ಮ ನಿರ್ಮಾಪಕರಿಗೆ ಚಿತ್ರ ಗೆಲ್ಲುತ್ತದೆ ಎಂಬ ಬಲವಾದ ನಂಬಿಕೆ ಇತ್ತು, ಅದು ಸುಳ್ಳಾಗಲಿಲ್ಲ. ಜನ ನಮ್ಮ ಕೈ ಹಿಡಿದರು. ‘ಬಾಹುಬಲಿ’, ‘ಬಜರಂಗಿ ಭಾಯಿಜಾನ್’, ‘ಶ್ರೀಮಂತುಡು’ ನಂತಹ ದೊಡ್ಡ ಚಿತ್ರಗಳ ಜೊತೆ ಬಿಡುಗಡೆಯಾದರೂ ನಮ್ಮ ಕನ್ನಡ ಚಿತ್ರ ಸೂಪರ್ ಹಿಟ್ ಆಯಿತು. ‘ರಂಗಿತರಂಗ’ದ ಮೂಲಕ ಅಮೆರಿಕದಲ್ಲಿ ಕನ್ನಡಕ್ಕೆ ಒಂದು ಹೊಸ ಮಾರುಕಟ್ಟೆ ಸೃಷ್ಟಿಯಾಯಿತು. ಆ ವರ್ಷದ ಬಹುಪಾಲು ಪ್ರಶಸ್ತಿಗಳನ್ನು ಬಾಚಿಕೊಂಡ ‘ರಂಗಿತರಂಗ’ ಈ ಜುಲೈ 4 ರಂದು ಮರು-ಬಿಡುಗಡೆಯಾಗುತ್ತಿದೆ. ಮತ್ತೆ ನಮ್ಮ ಚಿತ್ರವನ್ನು ಕನ್ನಡಿಗರು ಗೆಲ್ಲಿಸುತ್ತಾರೆ ಎಂಬ ಭರವಸೆ ಇದೆ,” ಎಂದು ನಿರ್ದೇಶಕ ಅನೂಪ್ ಭಂಡಾರಿ ವಿಶ್ವಾಸ ವ್ಯಕ್ತಪಡಿಸಿದರು.

ಹಿರಿಯ ನಟ ಸಾಯಿಕುಮಾರ್ : “ನನ್ನ ಎರಡು ಕಣ್ಣುಗಳು!”.. “ಪೊಲೀಸ್ ಸ್ಟೋರಿ ಮತ್ತು “ರಂಗಿತರಂಗ”
ಈ ಎರಡು ಚಿತ್ರಗಳು ನನ್ನ ಎರಡು ಕಣ್ಣುಗಳು. ಇಂತಹ ಕನ್ನಡ ಚಿತ್ರಗಳಲ್ಲಿ ನಟಿಸಿದ್ದು ಬಹಳ ಖುಷಿಯಾಗಿದೆ. ಈಗಲೂ ನಾನು ಹೋದ ಕಡೆ ‘ರಂಗಿತರಂಗ’ದ ನನ್ನ ಪಾತ್ರಕ್ಕೆ ಜನ ಮೆಚ್ಚುಗೆ ಸೂಚಿಸುತ್ತಾರೆ. ಚಿತ್ರ ಮರು-ಬಿಡುಗಡೆಯಲ್ಲೂ ದಾಖಲೆ ಬರೆಯಲಿ” ಎಂದು ಹಿರಿಯ ನಟ ಸಾಯಿಕುಮಾರ್ ಶುಭ ಹಾರೈಸಿದರು.

ನಾಯಕ ನಿರೂಪ್ ಭಂಡಾರಿ: “ಅಣ್ಣನ ಮೊದಲ ಚಿತ್ರಕ್ಕೆ ನಾನೇ ಹೀರೋ ಎಂದಾಗ ಖುಷಿ ಅಷ್ಟಿಷ್ಟಲ್ಲ!”

“ನಾನು ಐಟಿ ಉದ್ಯೋಗಿಯಾಗಿದ್ದರೂ ಸಿನಿಮಾ ಮೇಲೆ ಹೆಚ್ಚು ಆಸಕ್ತಿ ಹೊಂದಿದ್ದೆ. ರತನ್ ಠಾಕೂರ್ ಗ್ರಾಂಟ್ ಅವರ ನಟನಾ ಶಾಲೆಯಲ್ಲಿ ನಟನೆ ಅಭ್ಯಾಸ ಮಾಡಿದೆ. ಅಣ್ಣನ ನಿರ್ದೇಶನದ ಕಿರುಚಿತ್ರಗಳಿಗೆ ನಾನೇ ಹೀರೋ. ಬೆಳ್ಳಿತೆರೆಯ ಮೇಲೆ ಅನೂಪ್ ನಿರ್ದೇಶನದ ಮೊದಲ ಚಿತ್ರಕ್ಕೂ ನಾನೇ ನಾಯಕ ಎಂದು ತಿಳಿದಾಗ ಆದ ಖುಷಿ ಅಷ್ಟಿಷ್ಟಲ್ಲ. ಮೊದಲ ದೃಶ್ಯದಲ್ಲೇ ನಾನು ಸಾಯಿಕುಮಾರ್ ಅವರೊಂದಿಗೆ ಫೈಟ್ ಮಾಡಬೇಕಿತ್ತು. ಆಗ ನನಗಾದ ಭಯ ಈಗಲೂ ಕಣ್ಣ ಮುಂದೆ ಇದೆ. ಅಮೆರಿಕಾಗೆ ಹೋದಾಗ ಅಲ್ಲಿ ನಮ್ಮ ಚಿತ್ರವನ್ನು ನೋಡಲು ಬಂದಿದ್ದ ಜನಸಾಗರ ಕಂಡು ಬಹಳ ಖುಷಿಪಟ್ಟಿದ್ದೆ. ಇಂತಹ ಚಿತ್ರದಲ್ಲಿ ನಟಿಸಲು ಅವಕಾಶ ನೀಡಿದ ನಿರ್ಮಾಪಕರಿಗೆ ಹಾಗೂ ನಿರ್ದೇಶಕನಾದ ಅಣ್ಣನಿಗೆ ಧನ್ಯವಾದಗಳು,” ಎಂದು ನಾಯಕ ನಿರೂಪ್ ಭಂಡಾರಿ ತಮ್ಮ ಅನುಭವ ಹಂಚಿಕೊಂಡರು.

ನಾಯಕಿ ರಾಧಿಕಾ ನಾರಾಯಣ್ : “ಇನ್ನೂ ‘ರಂಗಿತರಂಗ’ ಮೂಲಕವೇ ಗುರುತಿಸುತ್ತಾರೆ !”

“ನಾನು ಐಟಿ ಉದ್ಯೋಗಿ. ಅನೂಪ್ ಅವರು ಈ ಚಿತ್ರದ ಕಥೆ ಹೇಳಿದಾಗ ನಟಿಸಲು ಬಹಳ ಇಷ್ಟವಾಯಿತು. ಚಿತ್ರ ಬಿಡುಗಡೆಯಾಗಿ ಹತ್ತು ವರ್ಷಗಳಾಗಿದೆ. ಆ ನಂತರ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದರೂ, ಈಗಲೂ ನನ್ನನ್ನು ‘ರಂಗಿತರಂಗ’ದ ಮೂಲಕವೇ ಗುರುತಿಸುತ್ತಾರೆ,” ಎಂದು ನಾಯಕಿ ರಾಧಿಕಾ ನಾರಾಯಣ್ ತಿಳಿಸಿದರು.

ಪೊಲೀಸ್ ಅಧಿಕಾರಿ ಪಾತ್ರ ನಿರ್ವಹಿಸಿದ್ದ ಅರವಿಂದ್ ತಮ್ಮ ಅನುಭವ ಹಂಚಿಕೊಂಡರು. ಛಾಯಾಗ್ರಾಹಕ ವಿಲಿಯಂ ಡೇವಿಡ್ ಛಾಯಾಗ್ರಹಣದ ಬಗ್ಗೆ ಮಾತನಾಡಿದರು. ಕಾರ್ಯಕಾರಿ ನಿರ್ಮಾಪಕ ಸುಧಾಕರ್ ಭಂಡಾರಿ ಅವರು ‘ರಂಗಿತರಂಗ’ ಆರಂಭವಾದಾಗಿನಿಂದ ಬಿಡುಗಡೆಯಾಗುವವರೆಗೂ ನಡೆದ ಸ್ವಾರಸ್ಯಕರ ಘಟನೆಗಳ ಕುರಿತು ಮಾಹಿತಿ ನೀಡಿದರು. ವಿತರಕ ಹೇಮಂತ್ ಕೂಡ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (55)

ಆರ್.ವಿ ದೇಶಪಾಂಡೆ ಸರ್ಕಾರದ ವಾಸ್ತವ ಅಂಶವನ್ನ ತೆರೆದಿಟ್ಟಿದ್ದಾರೆ: ನಿಖಿಲ್ ಕುಮಾರಸ್ವಾಮಿ 

by ಶಾಲಿನಿ ಕೆ. ಡಿ
October 13, 2025 - 10:49 pm
0

Untitled design (54)

ಯಶ್ ‘ಟಾಕ್ಸಿಕ್’ ಮೇಕಿಂಗ್ ವೀಡಿಯೋ ಲೀಕ್: ರಾಕಿಭಾಯ್ ಸಿಕ್ಸ್ ಪ್ಯಾಕ್‌‌ಗೆ ಫ್ಯಾನ್ಸ್ ಕ್ಲೀನ್ ಬೋಲ್ಡ್!

by ಶಾಲಿನಿ ಕೆ. ಡಿ
October 13, 2025 - 10:20 pm
0

Untitled design (85)

ZEE5 ನಿಂದ “ಭಾರತ್ ಬಿಂಜ್ ಫೆಸ್ಟಿವಲ್”: ಹೊಸ ಕಥೆಗಳು, ವಿಶೇಷ ದೀಪಾವಳಿ ಆಫರ್‌ಗಳು

by ಶಾಲಿನಿ ಕೆ. ಡಿ
October 13, 2025 - 10:06 pm
0

Untitled design (53)

ಹಾಸ್ಯ ಕಲಾವಿದ ರಾಜು ತಾಳಿಕೋಟೆ ನಿಧನಕ್ಕೆ ಕೇಂದ್ರ ಸಚಿವ ಹೆಚ್‌‌.ಡಿ ಕುಮಾರಸ್ವಾಮಿ ಸಂತಾಪ

by ಶಾಲಿನಿ ಕೆ. ಡಿ
October 13, 2025 - 9:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (54)
    ಯಶ್ ‘ಟಾಕ್ಸಿಕ್’ ಮೇಕಿಂಗ್ ವೀಡಿಯೋ ಲೀಕ್: ರಾಕಿಭಾಯ್ ಸಿಕ್ಸ್ ಪ್ಯಾಕ್‌‌ಗೆ ಫ್ಯಾನ್ಸ್ ಕ್ಲೀನ್ ಬೋಲ್ಡ್!
    October 13, 2025 | 0
  • Untitled design (85)
    ZEE5 ನಿಂದ “ಭಾರತ್ ಬಿಂಜ್ ಫೆಸ್ಟಿವಲ್”: ಹೊಸ ಕಥೆಗಳು, ವಿಶೇಷ ದೀಪಾವಳಿ ಆಫರ್‌ಗಳು
    October 13, 2025 | 0
  • Untitled design (53)
    ಹಾಸ್ಯ ಕಲಾವಿದ ರಾಜು ತಾಳಿಕೋಟೆ ನಿಧನಕ್ಕೆ ಕೇಂದ್ರ ಸಚಿವ ಹೆಚ್‌‌.ಡಿ ಕುಮಾರಸ್ವಾಮಿ ಸಂತಾಪ
    October 13, 2025 | 0
  • Untitled design (52)
    ‘ಜೈ ಗದಾ ಕೇಸರಿ’ ಚಿತ್ರದ ಟೀಸರ್, ಹಾಡುಗಳ ಬಿಡುಗಡೆ
    October 13, 2025 | 0
  • Untitled design (49)
    ಹಾಸ್ಯ ನಟ ರಾಜು ತಾಳಿಕೋಟಿ ರಂಗಭೂಮಿ ಸೇರಿದ್ದು ಹೇಗೆ?
    October 13, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version