• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಂದ “ರಾವೆನ್” ಚಿತ್ರದ ಟ್ರೇಲರ್ ಅನಾವರಣ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 1, 2026 - 1:24 pm
in ಸಿನಿಮಾ
0 0
0
Your paragraph text 2026 10 01T132421.321

ಕನ್ನಡದಲ್ಲಿ ವಿವಿಧ ಪ್ರಾಣಿ ಹಾಗೂ ಪಕ್ಷಿಗಳನ್ನು ಕೇಂದ್ರವಾಗಿಟ್ಟಿಕೊಂಡು ನಿರ್ಮಾಣವಾಗಿರುವ ಸಾಕಷ್ಟು ಚಿತ್ರಗಳು ಬಂದಿದೆ. ಆದರೆ, ಇಲ್ಲಿಯವರೆಗೂ ಕಾಗೆಯನ್ನು ಪ್ರಧಾನವಾಗಿಟ್ಟಿಕೊಂಡು ಮಾಡಿರುವ ಚಿತ್ರ ಹೆಚ್ಚು ಬಂದಿಲ್ಲ. ವಿಶ್ವ ಪ್ರೊಡಕ್ಷನ್ಸ್ ಲಾಂಛನದಲ್ಲಿ ವಿಶ್ವನಾಥ್ ಜಿ.ಪಿ ಅವರು “ರಾವೆನ್” ಚಿತ್ರವನ್ನು ನಿರ್ಮಿಸಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಭರವಸೆಯ ನಿರ್ಮಾಣ ಸಂಸ್ಥೆಯಾಗಿ ವಿಶ್ವ ಪ್ರೊಡಕ್ಷನ್ಸ್ ಅಡಿಯಿಟ್ಟಿದೆ. ವೇದ್ ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ಕಾಗೆಯೇ ನಾಯಕ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಹಾಗೂ ಶೀರ್ಷಿಕೆ ಗೀತೆ ಅನಾವರಣ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಈ ಚಿತ್ರದ ಟ್ರೇಲರ್ ಅನಾವರಣ ಮಾಡಿದರು.

ಡಿ.ಎಸ್ ಮ್ಯಾಕ್ಸ್ ನ ದಯಾನಂದ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ – ನಿರ್ಮಾಪಕ ಭಾ.ಮ ಹರೀಶ್ ಹಾಗೂ ರಶ್ಮಿ ಅವರು ಶೀರ್ಷಿಕೆ ಗೀತೆ ಬಿಡುಗಡೆ ಮಾಡಿದರು. ಕಾಗೆ ಈ ಚಿತ್ರದ ಪ್ರಮುಖ ಪಾತ್ರಧಾರಿ. ಕಾಗೆಗೂ,‌ ಪಿತೃಪಕ್ಷಕ್ಕೂ ನಂಟಿದೆ. ಹಾಗಾಗಿ ಪಿತೃಪಕ್ಷದ ಸಂದರ್ಭದಲ್ಲೇ ಈ ಚಿತ್ರದ ಟ್ರೇಲರ್ ಹಾಗೂ ಶೀರ್ಷಿಕೆ ಗೀತೆ ಬಿಡುಗಡೆಯಾಗಿರುವುದು ವಿಶೇಷ. ಟ್ರೇಲರ್ ಬಿಡುಗಡೆ ಹಾಗೂ ಹಾಡು ಬಿಡುಗಡೆ ನಂತರ ಅತಿಥಿಗಳು ಹಾಗೂ ಚಿತ್ರತಂಡದ ಸದಸ್ಯರು ಮಾತನಾಡಿದರು.

RelatedPosts

ಗೋಲ್ಡ್ ಸ್ಮಗ್ಲಿಂಗ್ ಕೇಸ್‌: ನಟಿ ರನ್ಯಾ ರಾವ್‌ಗೆ ₹89.91 ಕೋಟಿ ದಂಡ

ಜಾರ್ಖಂಡ್ ಚಿತ್ರೋತ್ಸವಕ್ಕೆ `ಮಹಾಕವಿ’ ಚಿತ್ರ ಆಯ್ಕೆ

ಕಾಂತಾರ ಸಿನಿಮಾಗೆ 4 ವರ್ಷ: ಮನದಾಳದ ಮಾತು ಹಂಚಿಕೊಂಡ ರಿಷಬ್ ಶೆಟ್ಟಿ

ಸಿಟಿಲೈಟ್ಸ್ ಸಕ್ಸಸ್..ವಿಜಯ್ ಹ್ಯಾಟ್ರಿಕ್ ಗೆಲುವಿನ ಸಂಭ್ರಮ

ADVERTISEMENT
ADVERTISEMENT

ಈ ಚಿತ್ರದ ಟ್ರೇಲರ್ ಚೆನ್ನಾಗಿದೆ. ಈಗಾಗಲೇ ಪಿತೃಪಕ್ಷ ಪ್ರಾರಂಭವಾಗಿದ್ದು, ಕಾಗೆಯ ಕುರಿತಾದ ಈ ಚಿತ್ರದ ಟ್ರೇಲರ್ ಅನಾವರಣವಾಗಿರುವುದು ಸಂದರ್ಭೋಚಿತವಾಗಿದೆ. ಚಿತ್ರ ಕೂಡ ಯಶಸ್ವಿಯಾಗಲಿ ಎಂದು ಧ್ರುವ ಸರ್ಜಾ ಹಾರೈಸಿದರು.

“ರಾವೆನ್” ಎಂದರೆ ಕಾಗೆಯ ಹೆಸರು. ಸಾಮಾನ್ಯವಾಗಿ ಕಾಗೆ ತಾಕಿದ್ದರೆ ಸ್ನಾನ ಮಾಡಬೇಕು. ಅದು ವಾಹನದ ಮೇಲೆ ಕೂತರೆ ವಾಹನವನ್ನೇ ಬದಲಿಸಬೇಕು. ಕಾಗೆ ಮನೆಯೊಳಗೆ ಬರಬಾರದು. ಇದು ಶ್ರಾದ್ಧಕ್ಕೆ ಮಾತ್ರ ಮೀಸಲಾದ ಪಕ್ಷಿ. ಹೀಗೆ ಅನೇಕ ನಂಬಿಕೆಗಳು ರೂಡಿಯಲ್ಲಿದೆ.‌ ಆದರೆ ಕಾಗೆಗಿರುವ ಒಳ್ಳೆಯ ಗುಣ ಬೇರೆ ಪಕ್ಷಿಗಳಲ್ಲಿ ನೋಡುವುದು ಕಡಿಮೆ. ಒಂದು ಹಿಡಿ ಅನ್ನ ಸಿಕ್ಕರೆ ತನ್ನ ಎಲ್ಲಾ ಬಳಗವನ್ನು ಕರೆದು ತಿನ್ನುವ ಪ್ರಾಣಿ ಕಾಗೆ ಮಾತ್ರ. ಇಂತಹ ಕಾಗೆಯನ್ನೇ ಪ್ರಧಾನವಾಗಿಟ್ಟಿಕೊಂಡು ಈ ಚಿತ್ರ ನಿರ್ಮಾಣವಾಗಿದೆ. ತಾಂತ್ರಿಕವಾಗಿ ನಮ್ಮ ಚಿತ್ರ ಹೆಚ್ಚು ಶ್ರೀಮಂತವಾಗಿದೆ. ಸಿಜಿ ವರ್ಕ್ ಎಲ್ಲರ ಗಮನ ಸೆಳೆಯುತ್ತದೆ.

ಸದ್ಯ ಚಿತ್ರದ ಎಲ್ಲಾ ಚಟುವಟಿಕೆಗಳು ಪೂರ್ಣಗೊಂಡಿದ್ದು, ನವೆಂಬರ್ ನಲ್ಲಿ ತೆರೆಗೆ ಬರಲಿದೆ. ಇದೊಂದು ಕಾಲ್ಪನಿಕ ಕಥೆ. ದಿಲೀಪ್ ಪೈ ಹಾಗೂ ದೇವ್ ದೇವಯ್ಯ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ‌. ಸ್ವಪ್ನ ಶೆಟ್ಟಿಗಾರ್, ರಾಣಿ, ಸುಚೇಂದ್ರ ಪ್ರಸಾದ್, ಲೀಲಾ ಮೋಹನ್, ದಿನೇಶ್ ಮಂಗಳೂರು, ವಿಶ್ವನಾಥ್ ಜಿ ಪಿ, ಚೈತ್ರಾ ರಾಮ್, ರಾಘವೇಂದ್ರ ಮುಂತಾದ ಕಲಾವಿದರು ಅಭಿನಯಿಸಿದ್ದಾರೆ. ಕಲಾವಿದರ ಹಾಗೂ ತಂತ್ರಜ್ಞರ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಇದು ನನ್ನ ನಿರ್ದೇಶನದ ಎರಡನೇ ಚಿತ್ರ. ಅವಕಾಶ ನೀಡಿದ ನಿರ್ಮಾಪಕರಿಗೆ ಧನ್ಯವಾದ ಎಂದರು ನಿರ್ದೇಶಕ ವೇದ್.

ನಾನು, ಉದ್ಯಮಿ ಹಾಗು ಕನ್ನಡಪರ ಹೋರಾಟಗಾರ ಎಂದು ಮಾತು ಆರಂಭಿಸಿದ ನಿರ್ಮಾಪಕ ವಿಶ್ವನಾಥ್, ನಮ್ಮ ಚಿತ್ರದ ಟ್ರೇಲರ್ ಹಾಗೂ ಶೀರ್ಷಿಕೆ ಗೀತೆ ಅನಾವರಣ ಮಾಡಿಕೊಟ್ಟ ಧ್ರುವ ಸರ್ಜಾ, ದಯಾನಂದ್, ಭಾ.ಮ.ಹರೀಶ್ ಹಾಗೂ ರಶ್ಮಿ ಅವರಿಗೆ ಧನ್ಯವಾದ. ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ಹಾಗಾಗಿ ಚಿತ್ರ ನಿರ್ಮಾಣಕ್ಕೆ ಮುಂದಾದೆ. ನವೆಂಬರ್ ನಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ. ಕನ್ನಡ, ಚೈನೀಸ್ ಹಾಗೂ ಕೊರಿಯನ್ ಭಾಷೆಗಳಲ್ಲಿ ಈ ಚಿತ್ರ ತೆರೆಗೆ ಬರಲಿದೆ. ತೆಲುಗು, ತಮಿಳು ಮುಂತಾದ ಭಾಷೆಗಳಿಗೂ ಡಬ್ ಆಗಲಿದೆ. ನಮ್ಮ ದೇಶದಲ್ಲಷ್ಟೇ ಅಲ್ಲದೆ ವಿದೇಶದಲ್ಲೂ ಈ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ. ಇಂದು ಬಿಡುಗಡೆಯಾದ ಶೀರ್ಷಿಕೆ ಗೀತೆಯನ್ನು ನಾನೇ ಬರೆದಿದ್ದೇನೆ. ಚಿತ್ರದಲ್ಲಿ ನಟಿಸಿದ್ದೇನೆ ಎಂದರು.

ಬಹಳ ದಿನಗಳ ನಂತರ ಈ ಚಿತ್ರದಲ್ಲಿ ನಟಿಸಿದ್ದೇನೆ.‌ ಕಾಗೆ ಶನಿಮಹಾತ್ಮನ ವಾಹನ. ಅಂಥಹ ಕಾಗೆ ಕುರಿತಾದ ಚಿತ್ರವಿದು. ಈ ಚಿತ್ರದ ನಿಜವಾದ ನಾಯಕ ಕಾಗೆ‌. ನಾನು ಅದರ ಸಹ ಪಾತ್ರಧಾರಿ ಎಂದರು ನಾಯಕ ದಿಲೀಪ್ ಪೈ. ದಿಲೀಪ್ ಅವರು ಹೇಳಿದ ಹಾಗೆ ಕಾಗೆಯೇ ಈ ಚಿತ್ರದ ನಿಜವಾದ ಹೀರೋ. ನನ್ನ ಪಾತ್ರ ಕೂಡ ಚೆನ್ನಾಗಿದೆ ಎಂದರು ನಟ ದೇವ್ ದೇವಯ್ಯ.

ನಾಯಕಿ ಸ್ವಪ್ನ ಶೆಟ್ಟಿಗಾರ್, ಸಂಗೀತ ನಿರ್ದೇಶಕ MAD D, ನಟಿ ಚೈತ್ರಾ ರಾಮ್ ಹಾಗೂ ಛಾಯಾಗ್ರಾಹಕ ರಾಕೇಶ್ ಸಿ ತಿಲಕ್ ಮುಂತಾದವರು ಚಿತ್ರದ ಕುರಿತು ಮಾಹಿತಿ ನೀಡಿದರು. ಗಾಯಕ ಚೇತನ್ ನಾಯಕ್ ಸೇರಿದಂತೆ ಚಿತ್ರತಂಡದ ಅನೇಕ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 10 01T132421.321

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಂದ “ರಾವೆನ್” ಚಿತ್ರದ ಟ್ರೇಲರ್ ಅನಾವರಣ

by ಶಾಲಿನಿ ಕೆ. ಡಿ
October 1, 2026 - 1:24 pm
0

Your paragraph text 2026 10 01T130242.366

ಮೈಸೂರು ದಸರಾಗೆ ಸಿಎಂ ಡಿ.ಕೆ ಶಿವಕುಮಾರ್‌ಗೆ ಅಧಿಕೃತ ಆಹ್ವಾನ

by ಶಾಲಿನಿ ಕೆ. ಡಿ
October 1, 2026 - 1:04 pm
0

Your paragraph text 2026 10 01T123719.281

ಅಕ್ಟೋಬರ್ 1ರಂದು ಚಿನ್ನದ ಬೆಲೆ ಇಳಿಕೆ: ಇಲ್ಲಿದೆ ಇಂದಿನ ದರ ವಿವರ

by ಶಾಲಿನಿ ಕೆ. ಡಿ
October 1, 2026 - 12:38 pm
0

Your paragraph text 2026 10 01T120339.098

180 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್: ಸ್ಮಿತ್ ಮಚ್ಚರ್‌ ಶ್ಲಾಘಿಸಿದ ಪ್ರಧಾನಿ ಮೋದಿ

by ಶಾಲಿನಿ ಕೆ. ಡಿ
October 1, 2026 - 12:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 01T110342.104
    ಗೋಲ್ಡ್ ಸ್ಮಗ್ಲಿಂಗ್ ಕೇಸ್‌: ನಟಿ ರನ್ಯಾ ರಾವ್‌ಗೆ ₹89.91 ಕೋಟಿ ದಂಡ
    October 1, 2026 | 0
  • ಬೆಂಗಳೂರಲ್ಲಿ (7)
    ಜಾರ್ಖಂಡ್ ಚಿತ್ರೋತ್ಸವಕ್ಕೆ `ಮಹಾಕವಿ’ ಚಿತ್ರ ಆಯ್ಕೆ
    September 30, 2026 | 0
  • ಬೆಂಗಳೂರಲ್ಲಿ (3)
    ಕಾಂತಾರ ಸಿನಿಮಾಗೆ 4 ವರ್ಷ: ಮನದಾಳದ ಮಾತು ಹಂಚಿಕೊಂಡ ರಿಷಬ್ ಶೆಟ್ಟಿ
    September 30, 2026 | 0
  • Untitled design 2026 09 30T170900.039
    ಸಿಟಿಲೈಟ್ಸ್ ಸಕ್ಸಸ್..ವಿಜಯ್ ಹ್ಯಾಟ್ರಿಕ್ ಗೆಲುವಿನ ಸಂಭ್ರಮ
    September 30, 2026 | 0
  • Your paragraph text (75)
    ಅಭಿಮಾನಿಗಳೇ ನನ್ನ ಶಕ್ತಿ; ಬಾಲ್ಯದ ಒಂಟಿತನದ ಬಗ್ಗೆ ಮನಬಿಚ್ಚಿ ಮಾತನಾಡಿದ ಜೂನಿಯರ್ ಎನ್‌ಟಿಆರ್
    September 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version