ನಟ ದರ್ಶನ್ಗೆ ಬಿಗ್ ಶಾಕ್ ಎದುರಾಗಿದೆ. ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ. ಸುಪ್ರೀಂಕೋರ್ಟ್ನ ನ್ಯಾ.ಜೆ.ಬಿ.ಪರ್ದಿವಾಲಾ,.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠದಿಂದ ಈ ಆದೇಶ ಬಂದಿದೆ. ಇದರಿಂದ ದರ್ಶನ್ ಜೈಲು ಸೇರಬೇಕಾದ ಪರಿಸ್ಥಿತಿ ಬಂದಿದೆ. ದರ್ಶನ್ ವೃತ್ತಿ ಜೀವನದ ಮೇಲೆ ಈ ತೀರ್ಪು ತುಂಬಾನೇ ಪ್ರಭಾವ ಬೀರಲಿದೆ.
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾದ ನಟ ದರ್ಶನ್ ತೂಗುದೀಪ, ಪವಿತ್ರಾ ಗೌಡ ಮತ್ತು ಗ್ಯಾಂಗ್‌ನ ಒಟ್ಟು ಏಳು ಆರೋಪಿಗಳ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಸುಪ್ರೀಂಕೋರ್ಟ್ನ ನ್ಯಾ.ಜೆ.ಬಿ.ಪರ್ದಿವಾಲಾ,.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠವು ಈ ಆದೇಶವನ್ನು ಗುರುವಾರ (ಆಗಸ್ಟ್ 14, 2025) ಪ್ರಕಟಿಸಿದ್ದು, ದರ್ಶನ್ ಮತ್ತು ಇತರ ಆರೋಪಿಗಳನ್ನು ತಕ್ಷಣ ವಶಕ್ಕೆ ಪಡೆದು ಕೋರ್ಟ್ ಮುಂದೆ ಹಾಜರುಪಡಿಸಲು ಸೂಚನೆ ನೀಡಿದೆ. ಈ ತೀರ್ಪಿನಿಂದ ದರ್ಶನ್ ಮತ್ತು ಪವಿತ್ರಾ ಗೌಡ ಮತ್ತೆ ಜೈಲಿಗೆ ಹೋಗುವುದು ಖಚಿತವಾಗಿದೆ.