• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಿಷಬ್ ಶೆಟ್ಟಿ​ಗೆ ಇಂದು ಹುಟ್ಟುಹಬ್ಬದ ಸಂಭ್ರಮ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 7, 2026 - 8:54 am
in ಸಿನಿಮಾ
0 0
0
Web Photo Editor 2026 07 07T071954.624

ಕನ್ನಡ ಚಿತ್ರರಂಗದ ಖ್ಯಾತ ನಟ-ನಿರ್ದೇಶಕ ರಿಷಬ್ ಶೆಟ್ಟಿ ಇಂದು (ಜುಲೈ 7) ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ‘ಕಾಂತಾರ’ ಚಿತ್ರದ ಮೂಲಕ ಕನ್ನಡ ಸಿನಿಮಾವನ್ನು ಜಾಗತಿಕ ಮಟ್ಟದಲ್ಲಿ ಮೆರಗುಗೊಳಿಸಿದ ರಿಷಬ್ ಶೆಟ್ಟಿ, ಇಂದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಂಡಿರುವ ಪ್ರತಿಭಾವಂತ ಕಲಾವಿದ. ನಟನಾಗಿ, ನಿರ್ದೇಶಕರಾಗಿ, ಕಥೆಗಾರರಾಗಿ ತಮ್ಮದೇ ಆದ ಛಾಪು ಮೂಡಿಸಿರುವ ಅವರು, ವರ್ಷಗಳ ಪರಿಶ್ರಮದ ಬಳಿಕ ಈ ಸ್ಥಾನಕ್ಕೇರಿದ್ದಾರೆ.

‘ಕಾಂತಾರ’ ಚಿತ್ರದ ಭಾರೀ ಯಶಸ್ಸಿನ ನಂತರ ರಿಷಬ್ ಶೆಟ್ಟಿ ಅವರ ಹಳೆಯ ಸಿನಿಮಾಗಳ ಬಗ್ಗೆ ಜನರಲ್ಲಿ ಮತ್ತೆ ಆಸಕ್ತಿ ಹೆಚ್ಚಾಗಿದೆ. ಅವರ ಅನೇಕ ಜನಪ್ರಿಯ ಸಿನಿಮಾಗಳು ಈಗ ವಿವಿಧ OTT ವೇದಿಕೆಗಳಲ್ಲಿ ಲಭ್ಯವಿದೆ.

RelatedPosts

ಯಶ್ ಟ್ರಾನ್ಸ್‌‌ಫಾರ್ಮೇಷನ್‌..ಟಾಕ್ಸಿಕ್‌‌ಗಾಗಿ 12KG ಇಳಿಕೆ

CM ವಿಜಯ್ ಹಾದಿಯಲ್ಲಿ ಜೂನಿಯರ್‌ ಎನ್‌ಟಿಆರ್ ಪೊಲಿಟಿಕಲ್ ಎಂಟ್ರಿ..?!

ಪಾಲಿಟಿಕ್ಸ್‌ಗೆ ತಾರಕ್..? ತಿರುಪತಿಯಲ್ಲಿ RAW-NTR ಅಲೆ

ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ

ADVERTISEMENT
ADVERTISEMENT

OTTಯಲ್ಲಿ ನೋಡಬಹುದಾದ ರಿಷಬ್ ಶೆಟ್ಟಿ ಸಿನಿಮಾಗಳು

ಕಾಂತಾರ 

ಕನ್ನಡ ಸಿನಿಮಾವನ್ನು ಹೊಸ ಎತ್ತರಕ್ಕೆ ಕೊಂಡೊಯ್ದ ಚಿತ್ರವೆಂದರೆ ಅದು ‘ಕಾಂತಾರ’. ಸ್ಥಳೀಯ ದೈವಾರಾಧನೆ, ಬುಡಕಟ್ಟು ಸಂಪ್ರದಾಯ, ನಂಬಿಕೆ ಮತ್ತು ಪ್ರಕೃತಿಯೊಂದಿಗಿನ ಮಾನವನ ಸಂಬಂಧವನ್ನು ಅದ್ಭುತವಾಗಿ ಮೂಡಿಸಿದ ಈ ಸಿನಿಮಾ ಭಾರೀ ಮೆಚ್ಚುಗೆ ಪಡೆದಿತ್ತು. ರಿಷಬ್ ಶೆಟ್ಟಿ ನಟನೆಯ ಜೊತೆಗೆ ನಿರ್ದೇಶನದಲ್ಲಿಯೂ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ ಚಿತ್ರ ಇದು.

ಕಾಂತಾರ: ಚಾಪ್ಟರ್ 1

‘ಕಾಂತಾರ’ ಚಿತ್ರದ ಪ್ರೀಕ್ವೆಲ್ ಆಗಿ ಮೂಡಿಬಂದ ‘ಕಾಂತಾರ: ಚಾಪ್ಟರ್ 1’ ಕೂಡ ಪ್ರೇಕ್ಷಕರ ನಿರೀಕ್ಷೆ ತಲುಪಿದ ಸಿನಿಮಾ. ಪ್ರಾಚೀನ ಸಂಪ್ರದಾಯಗಳ ಮೂಲ, ಆಚರಣೆಗಳು ಮತ್ತು ಅದರ ಹಿಂದಿರುವ ಸಾಂಸ್ಕೃತಿಕ ಭಾವನೆಯನ್ನು ಮತ್ತಷ್ಟು ಆಳವಾಗಿ ತೆರೆದಿಟ್ಟ ಈ ಚಿತ್ರ, ಭರ್ಜರಿ ಮೇಕಿಂಗ್ ಹಾಗೂ ರೋಚಕ ಕಥಾಹಂದರದಿಂದ ಗಮನ ಸೆಳೆದಿತು.

ಬೆಲ್ ಬಾಟಮ್ 

ಈ ರೆಟ್ರೋ ಕಾಮಿಡಿ-ಥ್ರಿಲ್ಲರ್ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಬುದ್ಧಿವಂತ ಡಿಟೆಕ್ಟಿವ್ ಪಾತ್ರದಲ್ಲಿ ಮಿಂಚಿದ್ದಾರೆ. ಹಾಸ್ಯ, ಸಸ್ಪೆನ್ಸ್ ಮತ್ತು ಥ್ರಿಲ್ ಮಿಶ್ರಿತ ಈ ಸಿನಿಮಾ ಪ್ರೇಕ್ಷಕರಿಗೆ ವಿಭಿನ್ನ ಅನುಭವ ನೀಡಿತ್ತು.

‘ಲೂಸಿಯಾ’ಯಲ್ಲಿ ಸಣ್ಣ ಪೊಲೀಸ್ ಪಾತ್ರ ಮಾಡಿದ್ದ ರಿಷಬ್

ಇಂದು ‘ಡಿವೈನ್ ಸ್ಟಾರ್’ ಎಂದೇ ಗುರುತಿಸಿಕೊಂಡಿರುವ ರಿಷಬ್ ಶೆಟ್ಟಿ ಅವರ ಆರಂಭದ ದಿನಗಳು ಸುಲಭವಾಗಿರಲಿಲ್ಲ. ಚಿತ್ರರಂಗದಲ್ಲಿ ಅವಕಾಶಕ್ಕಾಗಿ ಅವರು ಸಾಕಷ್ಟು ಹೋರಾಟ ನಡೆಸಿದ್ದರು. ನಟನೆಯ ಆಸೆಯಿಂದ ಗಾಂಧಿನಗರಕ್ಕೆ ಬಂದ ರಿಷಬ್, ಆರಂಭದಲ್ಲಿ ಹಲವು ಸಣ್ಣಪುಟ್ಟ ಕೆಲಸಗಳನ್ನು ಮಾಡುತ್ತಾ ಚಿತ್ರರಂಗದಲ್ಲಿ ನೆಲೆ ಕಂಡುಕೊಳ್ಳಲು ಪ್ರಯತ್ನಿಸಿದ್ದರು.

ಅವರು ಮೊದಲು ‘ತುಘಲಕ್’ ಸಿನಿಮಾದಲ್ಲಿ ಕೆಲಸ ಮಾಡಿದ್ದರು. ಬಳಿಕ, 2013ರಲ್ಲಿ ಬಿಡುಗಡೆಯಾದ ಪವನ್ ಕುಮಾರ್ ನಿರ್ದೇಶನದ ಸೂಪರ್ ಹಿಟ್ ‘ಲೂಸಿಯಾ’ ಸಿನಿಮಾದಲ್ಲಿ ಸಣ್ಣ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ನೀನಾಸಂ ಸತೀಶ್ ನಾಯಕನಾಗಿದ್ದ ‘ಲೂಸಿಯಾ’ ಆಗಿನ ಕಾಲಕ್ಕೆ ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆ ಸೃಷ್ಟಿಸಿತ್ತು. ಇದೀಗ ಆ ಸಿನಿಮಾದಲ್ಲಿನ ರಿಷಬ್ ಅವರ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಅವರ ಹಳೆಯ ದಿನಗಳನ್ನು ನೆನೆದು ಹೆಮ್ಮೆ ವ್ಯಕ್ತಪಡಿಸುತ್ತಿದ್ದಾರೆ.

ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದ ‘ಕಾಂತಾರ: ಚಾಪ್ಟರ್ 1’

ಹೊಂಬಾಳೆ ಫಿಲ್ಮ್ಸ್ ಸಂಸ್ಥೆಯ ಅದ್ದೂರಿ ನಿರ್ಮಾಣದಲ್ಲಿ ಮೂಡಿಬಂದ ‘ಕಾಂತಾರ: ಚಾಪ್ಟರ್ 1’ ಚಿತ್ರ, ಬಿಡುಗಡೆಯಾದ ಬಳಿಕ ಬಾಕ್ಸ್ ಆಫೀಸ್‌ನಲ್ಲಿ ಭಾರೀ ಸದ್ದು ಮಾಡಿತು. ಮೊದಲ ಭಾಗಕ್ಕಿಂತಲೂ ದೊಡ್ಡ ಮಟ್ಟದ ಮೇಕಿಂಗ್, ಅದ್ಭುತ ದೃಶ್ಯ ವೈಭವ ಮತ್ತು ಕುತೂಹಲ ಕೆರಳಿಸುವ ಕಥಾಹಂದರದಿಂದ ಈ ಸಿನಿಮಾ ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾಯಿತು.

ಈ ಪ್ರಿಕ್ವೆಲ್ ಸಿನಿಮಾದಲ್ಲಿ ರಿಷಬ್ ಶೆಟ್ಟಿ ವಿಭಿನ್ನ ಗೆಟಪ್ ಮತ್ತು ತೀವ್ರ ಅಭಿನಯದ ಮೂಲಕ ಮತ್ತೊಮ್ಮೆ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದರು. ನಟಿ ರುಕ್ಮಿಣಿ ವಸಂತ್ ನಾಯಕಿಯಾಗಿ ಕಾಣಿಸಿಕೊಂಡ ಈ ಚಿತ್ರ, ರಿಷಬ್ ಅವರ ವೃತ್ತಿಜೀವನದ ಮತ್ತೊಂದು ಮೈಲಿಗಲ್ಲಾಗಿ ಗುರುತಿಸಿಕೊಂಡಿದೆ.

ಕರಾವಳಿಯ ಪ್ರತಿಭೆ ರಿಷಬ್ ಶೆಟ್ಟಿ, ಸಣ್ಣಪುಟ್ಟ ಪಾತ್ರಗಳಿಂದ ಆರಂಭಿಸಿ ಇಂದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಯಶಸ್ಸಿನ ಶಿಖರ ತಲುಪಿದ್ದಾರೆ. ನಟ, ನಿರ್ದೇಶಕ, ಕಥೆಗಾರ—ಈ ಮೂರೂ ಕ್ಷೇತ್ರಗಳಲ್ಲಿ ತಮ್ಮದೇ ಆದ ಗುರುತು ಮೂಡಿಸಿರುವ ಅವರು, ಕನ್ನಡ ಸಿನಿಮಾಗೆ ಹೊಸ ಹೆಮ್ಮೆ ತಂದಿದ್ದಾರೆ. ಅವರ ಬರ್ತ್‌ಡೇ ಸಂದರ್ಭದಲ್ಲಿ, ‘ಕಾಂತಾರ’ದಿಂದ ‘ಲೂಸಿಯಾ’ವರೆಗೆ ಅವರ ಸಿನಿ ಪಯಣವನ್ನು ನೆನೆಸಿಕೊಳ್ಳುತ್ತಿರುವ ಅಭಿಮಾನಿಗಳು, ರಿಷಬ್ ಅವರ ಮುಂದಿನ ಸಿನಿಮಾಗಳಿಗಾಗಿ ಕಾತರದಿಂದ ಕಾಯುತ್ತಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ವಾಂಗ್ಚುಕ್

ಸೋನಂ ವಾಂಗ್ಚುಕ್ ಆಸ್ಪತ್ರೆಗೆ ದಾಖಲು ಮಾಡಿ; ದೆಹಲಿ ಹೈಕೋರ್ಟ್‌ಗೆ PIL

by ಕವಿತಾ
July 15, 2026 - 4:06 pm
0

Untitled design 2026 07 15T154021.838

ಜುಲೈ 17ಕ್ಕೆ ಜಿಬಿಎ ಚುನಾವಣೆ ಭವಿಷ್ಯ ಫೈನಲ್!

by ಶಾಲಿನಿ ಕೆ. ಡಿ
July 15, 2026 - 3:42 pm
0

Untitled design (65)

ಬಿಡದಿ ಟೌನ್‌ಶಿಪ್‌ಗೆ 2 ತಿಂಗಳ ಬ್ರೇಕ್: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

by ಕವಿತಾ
July 15, 2026 - 3:27 pm
0

ಷ್ಯ (21)

ಯಶ್ ಟ್ರಾನ್ಸ್‌‌ಫಾರ್ಮೇಷನ್‌..ಟಾಕ್ಸಿಕ್‌‌ಗಾಗಿ 12KG ಇಳಿಕೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 15, 2026 - 3:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಷ್ಯ (21)
    ಯಶ್ ಟ್ರಾನ್ಸ್‌‌ಫಾರ್ಮೇಷನ್‌..ಟಾಕ್ಸಿಕ್‌‌ಗಾಗಿ 12KG ಇಳಿಕೆ
    July 15, 2026 | 0
  • ಷ್ಯ (19)
    CM ವಿಜಯ್ ಹಾದಿಯಲ್ಲಿ ಜೂನಿಯರ್‌ ಎನ್‌ಟಿಆರ್ ಪೊಲಿಟಿಕಲ್ ಎಂಟ್ರಿ..?!
    July 15, 2026 | 0
  • ಷ್ಯ (16)
    ಪಾಲಿಟಿಕ್ಸ್‌ಗೆ ತಾರಕ್..? ತಿರುಪತಿಯಲ್ಲಿ RAW-NTR ಅಲೆ
    July 15, 2026 | 0
  • ಷ್ಯ (15)
    ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ
    July 15, 2026 | 0
  • Untitled design (64)
    ರೇಣುಕಾಸ್ವಾಮಿ ಪ್ರಕರಣದಲ್ಲಿ ಸಾಕ್ಷಿಗೆ ಬೆದರಿಕೆ ಆರೋಪ; ಮತ್ತಿಬ್ಬರಿಗಾಗಿ ಹುಡುಕಾಟ
    July 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version