ಮಲಯಾಳಂನಲ್ಲೂ ‘S/O ಮುತ್ತಣ್ಣ’ನಿಗೆ ಬೇಡಿಕೆ

ಸೆ.12 ರಂದು ಕನ್ನಡ, ತೆಲುಗು, ಮಲಯಾಳಂನಲ್ಲಿ ಏಕಕಾಲಕ್ಕೆ ಪ್ರಣಾಮ್ ದೇವರಾಜ್ ಅಭಿನಯದ 'S/O ಮುತ್ತಣ್ಣ' ಚಿತ್ರ ಬಿಡುಗಡೆ

Untitled design (27)

“ಸು ಫ್ರಮ್ ಸೋ” ಭರ್ಜರಿ ಯಶಸ್ಸಿನ ನಂತರ ಕನ್ನಡ ಚಿತ್ರಗಳ ಬೇಡಿಕೆ ಹೆಚ್ಚಾಗಿದೆ. ಪುರಾತನ ಫಿಲಂಸ್ ನಿರ್ಮಾಣದ ಶ್ರೀಕಾಂತ್ ಹುಣಸೂರು ನಿರ್ದೇಶನದ ಡೈನಾಮಿಕ್ ಹೀರೊ ದೇವರಾಜ್ ಅವರ ದ್ವಿತೀಯ ಪುತ್ರ ಪ್ರಣಮ್ ದೇವರಾಜ್ ನಾಯಕನಾಗಿ ನಟಿಸಿರುವ ‘S/O ಮುತ್ತಣ್ಣ’ ಚಿತ್ರ ಕೂಡ ಅಪ್ಪ – ಮಗನ ಬಾಂಧವ್ಯವನ್ನು ಬಣಿಸುವ ಕೌಟುಂಬಿಕ ಕಥಾಹಂದರ ಹೊಂದಿರುವ ಚಿತ್ರವಾಗಿದ್ದು, ಈ ಚಿತ್ರದ ಕಥೆಗೆ ಮಲಯಾಳಂನಲ್ಲೂ ಬೇಡಿಕೆ ಹೆಚ್ಚಾಗಿದೆ. ಹಾಗಾಗಿ ಆಗಸ್ಟ್ 22 ರಂದು ಬಿಡುಗಡೆಯಾಗಬೇಕಿದ್ದ “s/o ಮುತ್ತಣ್ಣ” ಚಿತ್ರವನ್ನು ಸೆಪ್ಟೆಂಬರ್ 12 ರಂದು ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. ಕನ್ನಡ, ತೆಲುಗು ಹಾಗೂ ಮಲಯಾಳಂನಲ್ಲಿ ಏಕಕಾಲಕ್ಕೆ ಚಿತ್ರ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.

ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿರುವ ಈ ಚಿತ್ರದ ಟ್ರೇಲರ್ ಆಗಸ್ಟ್ 22 ರಂದು ಬಿಡುಗಡೆಯಾಗಲಿದೆ. ಬಹು ನಿರೀಕ್ಷಿತ ಈ ಚಿತ್ರದ ಬಿಡುಗಡೆಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಪ್ರಣಾಮ್ ದೇವರಾಜ್ ಅವರಿಗೆ ನಾಯಕಿಯಾಗಿ ದಿಯಾ ಖ್ಯಾತಿಯ ಖುಷಿ ರವಿ ಅಭಿನಯಿಸಿದ್ದಾರೆ. ಇದೊಂದು ತಂದೆ – ಮಗನ ಬಾಂಧವ್ಯದ ಚಿತ್ರವಾಗಿದ್ದು, ರಂಗಾಯಣ ರಘು ನಾಯಕನ ತಂದೆಯ ಪಾತ್ರದಲ್ಲಿ ಕಾಣಿಸಿಕೆಂಡಿದ್ದಾರೆ. ಸುಚೇಂದ್ರ ಪ್ರಸಾದ್‌, ಗಿರೀಶ್‌ ಶಿವಣ್ಣ, ತಬಲ ನಾಣಿ, ಶ್ರೀನಿವಾಸ್‌ ಪ್ರಭು, ಸುಧಾ ಬೆಳವಾಡಿ, ಅರುಣ್‌ ಚಕ್ರವರ್ತಿ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಸಚಿನ್ ಬಸ್ರೂರು ಸಂಗೀತವಿರುವ ‘s/o ಮುತ್ತಣ್ಣ’ ಸಿನಿಮಾದ ಹಾಡುಗಳನ್ನು ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ ಬರೆದಿದ್ದಾರೆ. ಸ್ಕೇಟಿಂಗ್ ಕೃಷ್ಣ ಛಾಯಾಗ್ರಹಣ ಹಾಗೂ ಹರೀಶ್ ಕೊಮ್ಮೆ ಅವರ ಸಂಕಲನ ಬಹು ನಿರೀಕ್ಷಿತ ಈ ಚಿತ್ರಕ್ಕಿದೆ.

Exit mobile version