ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಕಿಚ್ಚ ಸುದೀಪ್

ಕಿಚ್ಚ ಸುದೀಪ್‌ಗೆ ಸಿಎಂ ಶುಭಾಶಯ!

Untitled design (13)

ಮೈಸೂರು: ಇಂದು ಮೈಸೂರಿನಲ್ಲಿ ನಿರ್ಮಾಪಕ ಸಂದೇಶ್ ನಾಗರಾಜ್ ಅವರ ಜನ್ಮದಿನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡ ವೇಳೆ ಖ್ಯಾತ ನಟ ಕಿಚ್ಚ ಸುದೀಪ್ ಸಿಕ್ಕು, ಆತ್ಮೀಯವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ, ಸುದೀಪ್ ಅವರ ಕಲಾಜೀವನ ಯಶಸ್ಸಿನಿಂದ ಕೂಡಿರಲಿ ಎಂದು ಶುಭ ಹಾರೈಸಿದ್ದಾರೆ.

ಮೈಸೂರಿನ ದಸರಾ ವಸ್ತು ಪ್ರದರ್ಶನ ಆವರಣದಲ್ಲಿ ನಡೆದ ಸಂದೇಶ್ ನಾಗರಾಜ್ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸುದೀಪ್, ಇದೇ ಸೆಪ್ಟೆಂಬರ್ 28 ರಿಂದ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಕನ್ನಡದ ಹೊಸ ಸೀಜನ್  ಆರಂಭವಾಗಲಿದೆ ಎಂದು ಹೇಳಿದರು. ತಾವು ಸಾರಥಿಯಾಗಿರುವ ಈ ಕಾರ್ಯಕ್ರಮ ಕಿರುತೆರೆಯಲ್ಲಿ ಮತ್ತೆ ಕಾಣಿಸಿಕೊಳ್ಳಲಿದೆ ಎಂದು ತಿಳಿಸಿದ ಅವರು, ಸಂದೇಶ್ ನಾಗರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

ಸಿಎಂ ಸಿದ್ದರಾಮಯ್ಯ ಈ ಭೇಟಿಯ ಕುರಿತು ಮಾಹಿತಿ ಹಂಚಿಕೊಂಡಿದ್ದು, “ಕಿಚ್ಚ ಸುದೀಪ್ ಅವರೊಂದಿಗೆ ಆತ್ಮೀಯವಾಗಿ ಮಾತನಾಡಿ, ಅವರ ಕಲಾಬದುಕು ಯಶಸ್ಸಿನಿಂದ ತುಂಬಿರಲಿ ಎಂದು ಹಾರೈಸಿದ್ದೇನೆ,” ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

Exit mobile version