• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಗಿಲ್ಲಿ ನಾಯಕನಾಗಿ ನಟಿಸಿರುವ `ಸೂಪರ್ ಹಿಟ್’ ಚಿತ್ರ ಫೆಬ್ರವರಿ 27ಕ್ಕೆ ರಿಲೀಸ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 10, 2026 - 11:39 am
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 02 10T113819.753

ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ ನಾಯಕನಾಗಿ ನಟಿಸಿರುವ, ವಿಜಯಾನಂದ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಚಿತ್ರ `ಸೂಪರ್ ಹಿಟ್’. ತನ್ನ ಆಂತರ್ಯದ ಕಸುವಿನ ಸುಳಿವಿನಿಂದಲೇ ಪ್ರೇಕ್ಷಕರ ನಡುವೆ ಚರ್ಚೆ ಹುಟ್ಟು ಹಾಕಿದ್ದ ಈ ಸಿನಿಮಾಕ್ಕೀಗ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟನ ಜನಪ್ರಿಯತೆಯೂ ಕೂಡಾ ಮತ್ತಷ್ಟು ಶಕ್ತಿ ತುಂಬಿದೆ. ಇದೇ ಹಂತದಲ್ಲಿ ಅಚ್ಚುಕಟ್ಟಾದ ಪತ್ರಿಕಾಗೋಷ್ಠಿಯಲ್ಲಿ, ಟೀಸರ್ ಒಂದರ ಮೂಲಕ ಚಿತ್ರತಂಡ ಬಿಡುಗಡೆ ದಿನಾಂಕವನ್ನು ಘೋಷಿಸಿದೆ.

ಈ ವೇದಿಕೆಯಲ್ಲಿ ನಿರ್ದೇಶಕ ವಿಜಯಾನಂದ್, ನಿರ್ಮಾಪಕ ಜಿ ಉಮೇಶ್, ಸಾಧು ಕೋಕಿಲಾ, ಗೀತರಚನೆಕಾರ ಡಾ.ವಿ ನಾಗೇಂದ್ರ ಪ್ರಸಾದ್, ಗೌರವ್ ಶೆಟ್ಟಿ, ಶ್ವೇತಾ ಮುಂತಾದವರು ಸಿನಿಮಾ ಬಗ್ಗೆ ಭರವಸೆಯ ಮಾತಾಡುತ್ತಲೇ, ಒಂದಷ್ಟು ಮಹತ್ವದ ಅಂಶಗಳನ್ನು ಹಂಚಿಕೊಂಡಿದ್ದಾರೆ. ಈ ಚಿತ್ರ ಇದೇ ಫೆಬ್ರವರಿ 27ರಂದು ರಾಜ್ಯಾದ್ಯಂತ ತೆರೆಗಾಣಲಿದೆ.

RelatedPosts

ಡೈರೆಕ್ಟರ್ ಕಿಡ್ನಾಪ್ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್: ಭೀಮಾ ಸಿನಿಮಾ ನಟಿ ಐಶ್ವರ್ಯಾ ಅರೆಸ್ಟ್

ಅಪ್ಪು ನೆಚ್ಚಿನ ಡೈರೆಕ್ಟರ್..‘ಕವಳ’ಗಾಗಿ ಕನ್ನಡಕ್ಕೆ ಸಮುದ್ರಕಣಿ..!

ರಶ್ಮಿಕಾ ಮಂದಣ್ಣ & ವಿಜಯ್ ದೇವರಕೊಂಡ ಬಳಿ ಒಟ್ಟು ಆಸ್ತಿ ಎಷ್ಟು ಕೋಟಿ ಇದೆ?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೊಡಗಿನ ಚೆಲುವೆ: ಸತಿಪತಿಯಾದ ವಿಜಯ್ -ರಶ್ಮಿಕಾ

ADVERTISEMENT
ADVERTISEMENT

ವಿ. ನಾಗೇಂದ್ರ ಪ್ರಸಾದ್ ಅವರ ಸಹೋದರರಾದ ವಿಜಯಾನಂದ್ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಸೂಪರ್ ಹಿಟ್ ಬಿಡುಗಡೆ ದಿನಾಂಕ ಜಾಹೀರು ಮಾಡಿ ಮಾತಾಡಿದ ಅವರು, ಕಥೆ ಸಿದ್ಧವಾದ ಬಗೆಯಿಂದ ಮೊದಲ್ಗೊಂಡು ಈವರೆಗಿನ ಮಧುರ ಸ್ಮೃತಿಯನ್ನು ಮೆಲುಕು ಹಾಕಿದ್ದಾರೆ. ಕಥೆ ಬರೆಯಲು ಶುರು ಮಾಡಿದಾಗಿನಿಂದ ಈ ವರೆಗೂ ಎಲ್ಲವೂ ಹೂವೆತ್ತಿಟ್ಟಷ್ಟೇ ಸಲೀಸಾಗಿ ನಡೆಯುತ್ತಾ ಬಂದಿದೆ ಎಂಬ ಧನ್ಯತಾ ಭಾವ ವ್ಯಕ್ತಪಡಿಸಿರುವ ವಿಜಯಾನಂದ್, ಯಾವುದಕ್ಕೂ ಕೊರತೆಯಾಗದಂತೆ ಒಂದಿಡೀ ಚಿತ್ರವನ್ನು ನಿರ್ಮಾಣ ಮಾಡಿರುವ ನಿರ್ಮಾಪಕ ಜಿ ಉಮೇಶ್ ಅವರ ಸಿನಿಮಾ ಪ್ರೇಮವನ್ನು ಕೊಂಡಾಡಿದ್ದಾರೆ. ತನ್ನ ಸಿನಿಮಾ ಮೂಡಿ ಬಂದಿರುವ ರೀತಿ ಮತ್ತು ಅದರ ಕಂಟೆಂಟಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿರುವ ಅವರು, ಸದರಿ ಚಿತ್ರ ಸೂಪರ್ ಹಿಟ್ಟಾಗೋದು ಗ್ಯಾರೆಂಟಿ ಎಂಬ ಭರವಸೆ ವ್ಯಕ್ತಪಡಿಸಿದರು. ನೂ

ಇದೇ ವೇದಿಕೆಯಲ್ಲಿ ಮತ್ತೊಂದು ಖುಷಿಯ ಸಂಗತಿಯನ್ನೂ ವಿಜಯಾನಂದ್ ಹಂಚಿಕೊಂಡರು. ಸೂಪರ್ ಹಿಟ್ ಚಿತ್ರದ ಓಟಿಟಿ ಹಕ್ಕು ಗಳನ್ನು ಹೊಸಾ ಸಂಸ್ಥೆಯೊಂದು ದೊಡ್ದ ಮೊತ್ತಕ್ಕೆ ಖರೀದಿಸಿರುವುದಾಗಿ ಮಾಹಿತಿ ನೀಡಿದರು. ಈ ಸಿನಿಮಾವನ್ನು ಪ್ರೀತಿಯಿಂದ ನಿರ್ಮಾಣ ಮಾಡಿರುವ ಜಿ ಉಮೇಶ್ ಚುಟುಕಾದ ಮಾತುಗಳಲ್ಲಿಯೇ ತಮ್ಮ ಸಿನಿಮಾ ಪ್ರೇಮ, ಸೂಪರ್ ಹಿಟ್ ಬಗೆಗಿನ ಭರವಸೆ ವ್ಯಕ್ತಪಡಿಸುತ್ತಲೇ, ತಮ್ಮ ಮೊದಲ ಹೆಜ್ಜೆಯಂಥಾ ಈ ಚಿತ್ರವನ್ನು ಗೆಲ್ಲಿಸುವಂತೆ ಮನವಿ ಮಾಡಿಕೊಂಡರು. ಈ ವೇದಿಕೆಯಲ್ಲಿ ಉಪಸ್ಥಿತರಿದ್ದ ಸಾಧು ಕೋಕಿಲಾ, ಸೂಪರ್ ಹಿಟ್ ಸಿನಿಮಾ ತಂಡದ ಮೇಲೆ ದೇವರ ಆಶೀರ್ವಾದ ಇದೆ ಎಂಬ ವಿಚಾರವನ್ನು ಹೇಳುತ್ತಲೇ, ಚಿತ್ರೀಕರಣದ ಅನುಭವಗಳನ್ನು ಹಂಚಿಕೊಂಡರು. ಪ್ರಚಾರದ ಪಟ್ಟುಗಳು ಈ ದಿನಮಾನದಲ್ಲಿ ಎಷ್ಟು ಮುಖ್ಯ ಎಂಬುದರ ಬಗ್ಗೆ ಚಿತ್ರತಂಡಕ್ಕೆ ಮನವರಿಕೆ ಮಾಡಿ ಕೊಡುತ್ತಲೇ, ಜನಪ್ರಿಯತೆಯ ಭರಾಟೆಯಲ್ಲಿ ವಹಿಸಬೇಕಾದ ಎಚ್ಚರದ ಬಗ್ಗೆಯೂ ಗಿಲ್ಲಿಗೆ ಕಿವಿ ಮಾತು ಹೇಳಿದರು.

ಈ ಚಿತ್ರಕ್ಕೆ ಸಾಹಿತ್ಯ, ಸಂಗೀತದ ಜವಾಬ್ದಾರಿಯೊಂದಿಗೆ ಒಂದು ವಿಶೇಷವಾದ ಪಾತ್ರದಲ್ಲಿಯೂ ನಟಿಸಿರುವ ಕವಿರತ್ನ ಡಾ.ವಿ ನಾಗೇಂದ್ರ ಪ್ರಸಾದ್ ಸೂಪರ್ ಹಿಟ್ ಮೂಡಿ ಬಂದಿರೋ ರೀತಿಯ ಬಗ್ಗೆ ಮೆಚ್ಚುಗೆ ಸೂಚಿಸುತ್ತಲೇ, ಗಿಲ್ಲಿಯ ಯಶದ ಪ್ರಭೆ ಸದರಿ ಚಿತ್ರಕ್ಕೆ ವರವಾಗಿರುವ ಬಗ್ಗೆ ಪ್ರಸ್ತಾಪಿಸಿದ್ದಲ್ಲದೇ, ಈ ಹಿಂದೆ ಯಾವುದೇ ಸಿನಿಮಾದಲ್ಲಿ ನಟಿಸಿದ್ದರೂ ಕೂಡಾ, ಅಂಥಾ ಚಿತ್ರಗಳಿಗೆ ಪ್ರಚಾರ ನೀಡಬೇಕಿರುವ ಕರ್ತವ್ಯದ ಬಗ್ಗೆಯೂ ಗಿಲ್ಲಿ ನಟನಿಗೆ ಪ್ರೀತಿಯಿಂದ ಕಿವಿ ಮಾತು ಹೇಳಿದರು. ಆ ನಂತರ ಮಾತಾಡಿದ ಈ ಸಿನಿಮಾದ ಕೇಂದ್ರ ಬಿಂದುವಾದ ಗಿಲ್ಲಿ, ಈ ಸಿನಿಮಾದ ಮುಖ್ಯ ಪಾತ್ರದಲ್ಲಿ ನಟಿಸಲು ಅವಕಾಶ ಕೊಟ್ಟ ನಿರ್ದೇಶಕರಿಗೆ ಕೃತಜ್ನತೆ ಸಲ್ಲಿಸುತ್ತಲೇ ಒಟ್ಟಾರೆ ಚಿತ್ರೀಕರಣ ರಸಾನುಭವಗಳನ್ನು ಹಂಚಿಕೊಂಡರು. ಈ ಮಧ್ಯೆ ಇತ್ತೀಚೆಗೆ ಹೊತ್ತಿಕೊಂಡಿದ್ದ ವಿವಾದವೂ ಸೇರಿದಂತೆ ಒಂದಷ್ಟು ವಿಚಾರಗಳಿಗೆ ಸ್ಪಷ್ಟೀಕರಣ ಕೊಡುತ್ತಲೇ ಸೂಪರ್ ಹಿಟ್ ಚಿತ್ರವನ್ನು ನೋಡಿ ಹರಸುವಂತೆ ಕೇಳಿಕೊಂಡರು.

ವಿಜಯಲಕ್ಷ್ಮಿ ಎಂಟರ್ ಪ್ರೈಸಸ್ ಬ್ಯಾನರಿನಡಿಯಲ್ಲಿ ಜಿ ಉಮೇಶ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಗೌರವ್ ಶೆಟ್ಟಿ ಮತ್ತು, ಗಿಲ್ಲಿ ನಟ ನಾಯಕರಾಗಿ ನಟಿಸಿದ್ದಾರೆ. ಶ್ವೇತಾ ನಾಯಕಿಯಾಗಿ ಜೊತೆಯಾಗಿದ್ದಾರೆ. ನಾಗೇಂದ್ರ ಪ್ರಸಾದ್ ಪಾತ್ರವೊಂದಕ್ಕೆ ಜೀವ ತುಂಬಿದ್ದಾರೆ. ಇನ್ನುಳಿದಂತೆ, ಆರ್.ಡಿ ನಾಗಾರ್ಜುನ ಛಾಯಾಗ್ರಹಣ, ಶ್ರೀಕಾಂತ್ ಸಂಕಲನ, ವಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಮತ್ತು ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಡ್ರ್ಯಾಗನ್ ಮಂಜು, ಸಾಧು ಕೋಕಿಲ.ಆ, ಸೀನು ಭಾಯ್, ನಾಗವರ್ಧನ್, ಪ್ರಮೋದ್ ಶೆಟ್ಟಿ, ಜೀಜಿ, ಗಿರಿ, ಟಿನಿಸ್ ಕೃಷ್ಣ, ಕರಿಸುಬ್ಬು, ವಂಶಿ, ಮಂಜಣ್ಣ, ಬಿ.ಎನ್ ಮಂಗಳ, ಮಂಗಳೂರು ಮೀನನಾಥ ಮುಂತಾದವರ ತಾರಾಗಣವಿದೆ. ಕಾಮಿಡಿ ಸಸ್ಪೆನ್ಸ್ ಥ್ರಿಲ್ಲರ್ ಜಾನರಿನ ಈ ಸಿನಿಮಾ ಫೆಬ್ರವರಿ 27ರಂದು ರಾಜ್ಯಾದ್ಯಂತ ಇನ್ನೂರಕ್ಕು ಹೆಚ್ಚು ಚಿತ್ರಮಂದಿಗಳಲ್ಲಿ ಅದ್ದೂರಿಯಾಗಿ ತೆರೆಗಾಣಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಡೈರೆಕ್ಟರ್ ಕಿಡ್ನಾಪ್ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್ : ಭೀಮಾ ಸಿನಿಮಾ ನಟಿ ಐಶ್ವರ್ಯಾ ಅರೆಸ್ಟ್

ಡೈರೆಕ್ಟರ್ ಕಿಡ್ನಾಪ್ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್: ಭೀಮಾ ಸಿನಿಮಾ ನಟಿ ಐಶ್ವರ್ಯಾ ಅರೆಸ್ಟ್

by ಶ್ರೀದೇವಿ ಬಿ. ವೈ
February 26, 2026 - 2:39 pm
0

ಅಂತಾರಾಷ್ಟ್ರೀಯ ಸಭೆಯಲ್ಲಿ ಕಾಶ್ಮೀರ ಬಜೆಟ್ IMF ಸಾಲ ವಿಚಾರ ಕೆದಗಿದ ಪಾಕಿಸ್ತಾನಕ್ಕೆ ಭಾರತ ತರಾಟೆ

ಅಂತಾರಾಷ್ಟ್ರೀಯ ಸಭೆಯಲ್ಲಿ ಕಾಶ್ಮೀರದ ಬಜೆಟ್‌‌ನಲ್ಲಿ IMF ಸಾಲ ವಿಚಾರ ಕೆದಗಿದ ಪಾಕಿಸ್ತಾನಕ್ಕೆ ಭಾರತ ತರಾಟೆ

by ಶ್ರೀದೇವಿ ಬಿ. ವೈ
February 26, 2026 - 2:18 pm
0

Untitled design 2026 02 26T140541.958

ಅಪ್ಪು ನೆಚ್ಚಿನ ಡೈರೆಕ್ಟರ್..‘ಕವಳ’ಗಾಗಿ ಕನ್ನಡಕ್ಕೆ ಸಮುದ್ರಕಣಿ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 26, 2026 - 2:06 pm
0

Untitled design 2026 02 26T132513.347

ಇಸ್ರೇಲ್ ಸಂಸತ್ತಿನ ಅತ್ಯುನ್ನತ ಗೌರವ ಪಡೆದ ಅಪರೂಪದ ನಾಯಕ ಪ್ರಧಾನಿ ಮೋದಿ

by ಶಾಲಿನಿ ಕೆ. ಡಿ
February 26, 2026 - 1:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಡೈರೆಕ್ಟರ್ ಕಿಡ್ನಾಪ್ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್ : ಭೀಮಾ ಸಿನಿಮಾ ನಟಿ ಐಶ್ವರ್ಯಾ ಅರೆಸ್ಟ್
    ಡೈರೆಕ್ಟರ್ ಕಿಡ್ನಾಪ್ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್: ಭೀಮಾ ಸಿನಿಮಾ ನಟಿ ಐಶ್ವರ್ಯಾ ಅರೆಸ್ಟ್
    February 26, 2026 | 0
  • Untitled design 2026 02 26T140541.958
    ಅಪ್ಪು ನೆಚ್ಚಿನ ಡೈರೆಕ್ಟರ್..‘ಕವಳ’ಗಾಗಿ ಕನ್ನಡಕ್ಕೆ ಸಮುದ್ರಕಣಿ..!
    February 26, 2026 | 0
  • ರಶ್ಮಿಕಾ ಮಂದಣ್ಣ & ವಿಜಯ್ ದೇವರಕೊಂಡ ಬಳಿ ಒಟ್ಟು ಆಸ್ತಿ ಎಷ್ಟು ಕೋಟಿ ಇದೆ?
    ರಶ್ಮಿಕಾ ಮಂದಣ್ಣ & ವಿಜಯ್ ದೇವರಕೊಂಡ ಬಳಿ ಒಟ್ಟು ಆಸ್ತಿ ಎಷ್ಟು ಕೋಟಿ ಇದೆ?
    February 26, 2026 | 0
  • Untitled design 2026 02 26T130357.311
    ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೊಡಗಿನ ಚೆಲುವೆ: ಸತಿಪತಿಯಾದ ವಿಜಯ್ -ರಶ್ಮಿಕಾ
    February 26, 2026 | 0
  • ರಶ್ಮಿಕಾ-ವಿಜಯ್ ವಿರೋಶ್ ಹಳದಿ ಉತ್ಸವದಲ್ಲಿ ಆಶಿಕಾ ರಂಗಿನ ಅದ್ಭುತ ಚಿತ್ರಗಳು ಇಲ್ಲಿವೆ!
    ರಶ್ಮಿಕಾ-ವಿಜಯ್ ವಿರೋಶ್ ಹಳದಿ ಉತ್ಸವದಲ್ಲಿ ಆಶಿಕಾ ರಂಗಿನ ಅದ್ಭುತ ಚಿತ್ರಗಳು ಇಲ್ಲಿವೆ!
    February 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version