ಕರ್ನಾಟಕದಲ್ಲಿ ‘ಥಗ್ ಲೈಫ್’ ಚಿತ್ರ ಬಿಡುಗಡೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್

ಕಮಲ್ ಹಾಸನ್ ಚಿತ್ರಕ್ಕೆ ಸುಪ್ರೀಂ ಕೋರ್ಟ್ ಕ್ಲೀನ್ ಚಿಟ್

Untitled design (62)

ಕರ್ನಾಟಕದಲ್ಲಿ ಕಮಲ್ ಹಾಸನ್‌ರ ‘ಥಗ್ ಲೈಫ್’ ಚಿತ್ರದ ಬಿಡುಗಡೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಜಸ್ಟೀಸ್ ಮನಮೋಹನ್ ಮತ್ತು ಜಸ್ಟೀಸ್ ಜೆ. ಭುಯನ್ ಅವರ ಪೀಠದಿಂದ ಈ ಆದೇಶ ಹೊರಬಿದ್ದಿದೆ.

ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ, ರಾಜ್ಯ ಸರ್ಕಾರವು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಬೇಕು ಎಂದು ಸ್ಪಷ್ಟಪಡಿಸಿದೆ. “ಕೆಲವರು ಚಿತ್ರಮಂದಿರವನ್ನು ಸುಡುತ್ತೇವೆ ಅಥವಾ ಘೇರಾವ್ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ ಕಾರಣಕ್ಕೆ ಚಿತ್ರದ ಬಿಡುಗಡೆಯನ್ನು ನಿಷೇಧಿಸುವಂತಿಲ್ಲ. ಈ ದೇಶದಲ್ಲಿ ಕಾನೂನಿನ ಆಡಳಿತವೇ ಮುಖ್ಯ,” ಎಂದು ಕೋರ್ಟ್ ತಿಳಿಸಿದೆ.

ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (ಸಿಬಿಎಫ್‌ಸಿ) ಪ್ರಮಾಣಪತ್ರ ಪಡೆದ ನಂತರ ಚಿತ್ರವನ್ನು ಬಿಡುಗಡೆ ಮಾಡಬಹುದು ಎಂದು ಕೋರ್ಟ್ ಸೂಚಿಸಿದೆ. “ಸಿಬಿಎಫ್‌ಸಿ ಸರ್ಟಿಫಿಕೇಟ್ ದೇಶದ ಕಾನೂನಿನ ಪ್ರಕಾರ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡುತ್ತದೆ. ರಾಜ್ಯ ಸರ್ಕಾರವು ಕಾನೂನು ಸುವ್ಯವಸ್ಥೆಯನ್ನು ಎತ್ತಿಹಿಡಿಯುವ ಜವಾಬ್ದಾರಿಯನ್ನು ನಿರ್ವಹಿಸಬೇಕು,” ಎಂದು ಸುಪ್ರೀಂ ಕೋರ್ಟ್ ಒತ್ತಿ ಹೇಳಿದೆ.

Exit mobile version