• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ತ್ರಿಶಾ ಸೌಮ್ಯ ಸ್ವಭಾವದವಳು..ನಟಿಯ ಬೆಂಬಲಕ್ಕೆ ನಿಂತ ಖುಷ್ಬೂ ಸುಂದರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 17, 2026 - 11:48 am
in Flash News, ಸಿನಿಮಾ
0 0
0
Untitled design 2026 03 17T114230.120

ಚೆನ್ನೈ: ನಟ ವಿಜಯ್ ಮತ್ತು ನಟಿ ತ್ರಿಶಾ ಕೃಷ್ಣನ್ ಇತ್ತೀಚೆಗೆ ಚೆನ್ನೈನಲ್ಲಿ ನಡೆದ ವಿವಾಹ ಆರತಕ್ಷತೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ವದಂತಿಗಳು ಭುಗಿಲೆದ್ದಿವೆ. ತಮಿಳುನಾಡು ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಈ ಘಟನೆ ವಿಜಯ್‌ಗೆ ಮುಖಭಂಗ ತಂದಿದೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಈ ನಡುವೆ ತ್ರಿಶಾ ಅವರನ್ನು ನೆಟ್ಟಿಗರು ಸಿಕ್ಕಾಪಟ್ಟೆ ಟ್ರೋಲ್ ಮಾಡಲಾರಂಭಿಸಿದ್ದಾರೆ. ಈ ಟ್ರೋಲ್ ವಿರುದ್ಧ ನಟಿ-ರಾಜಕಾರಣಿ ಖುಷ್ಬೂ ಸುಂದರ್ ತ್ರಿಶಾ ಪರವಾಗಿ ಮಾತನಾಡಿ ಬೆಂಬಲ ವ್ಯಕ್ತಪಡಿಸಿದ್ದಾರೆ.

ನಟ ವಿಜಯ್ ಪತ್ನಿ ಸಂಗೀತಾ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಬೆನ್ನಲ್ಲೇ ಈ ಬೆಳವಣಿಗೆಗಳು ನಡೆದಿವೆ. ಸಂಗೀತಾ ಅವರು ಪತಿಯ ಅಕ್ರಮ ಸಂಬಂಧದ ಆರೋಪ ಮಾಡಿ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದ ಹಿನ್ನೆಲೆಯಲ್ಲಿ ವಿಜಯ್ ಜೊತೆ ತ್ರಿಶಾ ಹೆಸರು ತಳುಕು ಹಾಕಿಕೊಂಡಿತ್ತು. ಇದರ ಜೊತೆಗೆ ಎಜಿಎಸ್ ನಿರ್ಮಾಪಕರ ಮದುವೆಯಲ್ಲಿ ವಿಜಯ್ ಮತ್ತು ತ್ರಿಶಾ ಒಟ್ಟಿಗೆ ಕಾಣಿಸಿಕೊಂಡಿದ್ದು ವದಂತಿಗಳಿಗೆ ಮತ್ತಷ್ಟು ಬಲ ನೀಡಿತ್ತು.

RelatedPosts

ಜೂನ್ 26ಕ್ಕೆ ಸುನಿ ನಿರ್ದೇಶನದ ‘ಮೋಡ ಕವಿದ ವಾತಾವರಣ’ ಬಿಡುಗಡೆ: ಭರವಸೆ ಮೂಡಿಸಿದ ಟ್ರೇಲರ್!

ಕನ್ನಡಿಗ ರಾಘವೇಂದ್ರ ದಿವಗಿ ಕಾಲಿಗೆ ಬಿದ್ದು ನಮಸ್ಕರಿಸಿದ ವೈಭವ್‌ ಸೂರ್ಯವಂಶಿ

ರಜನಿಕಾಂತ್-ಕಮಲ್ ಹಾಸನ್ 173..ಧರ್ಮನ್ ಟೈಟಲ್ ಫೈನಲ್

ಕರ್ನಾಟಕದಲ್ಲಿ ಮತ್ತೆ ಬೈಕ್ ಆ್ಯಂಬುಲೆನ್ಸ್ ಸೇವೆ: ಆರೋಗ್ಯ ಇಲಾಖೆಯಿಂದ ಮಹತ್ವದ ನಿರ್ಧಾರ

ADVERTISEMENT
ADVERTISEMENT
ಖುಷ್ಬೂ ಸುಂದರ್ ಏನು ಹೇಳಿದ್ದಾರೆ?

ಈ ಎಲ್ಲಾ ವದಂತಿಗಳ ನಡುವೆ ತ್ರಿಶಾ ಬಗ್ಗೆ ಆಗುತ್ತಿರುವ ಚರ್ಚೆ ಮತ್ತು ಹರಡುತ್ತಿರುವ ವದಂತಿಗಳನ್ನು ಗಮನಿಸಿದ ನಟಿ ಖುಷ್ಬೂ ಸುಂದರ್ ಸಂದರ್ಶನವೊಂದರಲ್ಲಿ ತ್ರಿಶಾ ಪರವಾಗಿ ಮಾತನಾಡಿದ್ದಾರೆ. 

“ದುರದೃಷ್ಟವಶಾತ್, ನೀವು ಸೀನಿದರೂ ಸಹ ಅದನ್ನು ಬೇರೆಯವರ ಮೇಲೆ ದೂಷಿಸಲು ಬಯಸುವ ಕಾಲದಲ್ಲಿ ನಾವಿದ್ದೇವೆ. ಅವರಿಬ್ಬರ ಬಗ್ಗೆ ನನಗೆ ತಿಳಿದಿರುವಂತೆ, ತ್ರಿಶಾ ನನಗೆ ತುಂಬಾ ಹತ್ತಿರವಾಗಿದ್ದರು. ಅವರು ನಾನು ಭೇಟಿಯಾದ ಅತ್ಯಂತ ಘನತೆವೆತ್ತ ಮಹಿಳೆಯರಲ್ಲಿ ಒಬ್ಬರು ಮತ್ತು ಅತ್ಯಂತ ಸೌಮ್ಯ ಸ್ವಭಾವದವರು.” ಎಂದು ಹೇಳಿದ್ದಾರೆ..

ಇಂಟರ್ನೆಟ್‌ನಲ್ಲಿ ಕುಳಿತು ಟ್ರೋಲ್ ಮಾಡುವವರಿಗೆ ಖುಷ್ಬೂ ಕೌಂಟರ್

“ಇಂಟರ್ನೆಟ್‌ನಲ್ಲಿ ಕುಳಿತು ಬೇರೆಯವರ ಬಗ್ಗೆ ಮಾತನಾಡುವುದು ಕೆಲವರಿಗೆ ಹವ್ಯಾಸವಾಗಿದೆ. ತಮ್ಮ ಸಮಸ್ಯೆಗಳ ಕಡೆ ಗಮನ ಹರಿಸುವ ಬದಲು, ಇತರರ ವೈಯಕ್ತಿಕ ಬದುಕಿನಲ್ಲಿ ತಲೆಹಾಕಿ ಕಾಮೆಂಟ್ ಮಾಡುವುದರಲ್ಲಿ ಸಂತೋಷ ಕಾಣುತ್ತಾರೆ,” ಎಂದು ಕಟುವಾಗಿ ಟೀಕಿಸಿದ್ದಾರೆ.

ಪ್ಯಾಪರಾಜಿಗಳ ವರ್ತನೆಗೂ ಅವರು ಪ್ರತಿಕ್ರಿಯೆ ನೀಡಿದ್ದು, “ಮುಂಬೈನಲ್ಲಿ ನಾವು ನೋಡಿರುವ ಪ್ಯಾಪ್ ಸಂಸ್ಕೃತಿ ಈಗ ಚೆನ್ನೈಗೂ ಬರುತ್ತಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ಕಲಾವಿದರ ವೈಯಕ್ತಿಕ ಬದುಕನ್ನು ಗೌರವಿಸುವುದು ಮುಖ್ಯ,” ಎಂದು ಹೇಳಿದ್ದಾರೆ.

View this post on Instagram

 

A post shared by DeKoder (@dekoderai)

ಸಂಗೀತಾ ವಿಚ್ಛೇದನ ಅರ್ಜಿ ಹಿನ್ನೆಲೆ

ಸಂಗೀತಾ ಮತ್ತು ವಿಜಯ್ ಆಗಸ್ಟ್ 1999 ರಲ್ಲಿ ವಿವಾಹವಾಗಿದ್ದರು. ಅವರಿಗೆ ಜೇಸನ್ ಸಂಜಯ್ ಮತ್ತು ದಿವ್ಯಾ ಶಶಾ ಎಂಬ ಇಬ್ಬರು ಮಕ್ಕಳಿದ್ದಾರೆ. ಅವರು ಹಿಂದೂ ಮತ್ತು ಕ್ರಿಶ್ಚಿಯನ್ ಸಂಪ್ರದಾಯಗಳ ಪ್ರಕಾರ ವಿವಾಹವಾಗಿದ್ದರು.

ಸಂಗೀತಾ ಅವರು ತಮ್ಮ ವಿಚ್ಛೇದನ ಅರ್ಜಿಯಲ್ಲಿ ಪತಿಯ ಅಕ್ರಮ ಸಂಬಂಧದ ಆರೋಪ ಮಾಡಿದ್ದಾರೆ. ಇದರ ಜೊತೆಗೆ, ಪ್ರಕರಣವು ಅಂತಿಮ ಇತ್ಯರ್ಥವಾಗುವವರೆಗೆ ಚೆನ್ನೈನ ಕ್ಯಾಸುವಾರಿನಾ ಡ್ರೈವ್‌ನಲ್ಲಿರುವ ದಂಪತಿಗಳ ವೈವಾಹಿಕ ಮನೆಯಲ್ಲಿ ವಾಸಿಸಲು ಅವಕಾಶ ನೀಡುವಂತೆ ಮಧ್ಯಂತರ ಆದೇಶವನ್ನೂ ಕೋರಿದ್ದಾರೆ.

ವದಂತಿಗಳಿಗೆ ಕಾರಣವೇನು?

ವಿಜಯ್ ಮತ್ತು ತ್ರಿಶಾ ಒಟ್ಟಿಗೆ ಕಾಣಿಸಿಕೊಂಡ ಫೋಟೋಗಳು ಮತ್ತು ವಿಡಿಯೋಗಳು ವೈರಲ್ ಆದ ಬೆನ್ನಲ್ಲೇ ಈ ವದಂತಿಗಳು ಹರಡಲಾರಂಭಿಸಿವೆ. ಸಂಗೀತಾ ವಿಚ್ಛೇದನ ಅರ್ಜಿ ಸಲ್ಲಿಸಿದ ಬೆನ್ನಲ್ಲೇ ಈ ಘಟನೆ ನಡೆದಿರುವುದು ವದಂತಿಗಳಿಗೆ ಮತ್ತಷ್ಟು ಬಲ ನೀಡಿದೆ. ಆದರೆ ಈ ಎರಡೂ ಘಟನೆಗಳಿಗೂ ಯಾವುದೇ ಸಂಬಂಧವಿಲ್ಲ ಎಂಬುದು ಅಭಿಮಾನಿಗಳ ವಾದವಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 24T204111.912

ಜೂನ್ 26ಕ್ಕೆ ಸುನಿ ನಿರ್ದೇಶನದ ‘ಮೋಡ ಕವಿದ ವಾತಾವರಣ’ ಬಿಡುಗಡೆ: ಭರವಸೆ ಮೂಡಿಸಿದ ಟ್ರೇಲರ್!

by ಶಾಲಿನಿ ಕೆ. ಡಿ
June 24, 2026 - 8:45 pm
0

Untitled design 2026 06 24T203042.523

ಕನ್ನಡಿಗ ರಾಘವೇಂದ್ರ ದಿವಗಿ ಕಾಲಿಗೆ ಬಿದ್ದು ನಮಸ್ಕರಿಸಿದ ವೈಭವ್‌ ಸೂರ್ಯವಂಶಿ

by ಶಾಲಿನಿ ಕೆ. ಡಿ
June 24, 2026 - 8:31 pm
0

Untitled design 2026 06 24T193245.289

ರಜನಿಕಾಂತ್-ಕಮಲ್ ಹಾಸನ್ 173..ಧರ್ಮನ್ ಟೈಟಲ್ ಫೈನಲ್

by ಶಾಲಿನಿ ಕೆ. ಡಿ
June 24, 2026 - 7:33 pm
0

Untitled design 2026 06 24T182842.988

ಕರ್ನಾಟಕದಲ್ಲಿ ಮತ್ತೆ ಬೈಕ್ ಆ್ಯಂಬುಲೆನ್ಸ್ ಸೇವೆ: ಆರೋಗ್ಯ ಇಲಾಖೆಯಿಂದ ಮಹತ್ವದ ನಿರ್ಧಾರ

by ಶಾಲಿನಿ ಕೆ. ಡಿ
June 24, 2026 - 6:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 24T203042.523
    ಕನ್ನಡಿಗ ರಾಘವೇಂದ್ರ ದಿವಗಿ ಕಾಲಿಗೆ ಬಿದ್ದು ನಮಸ್ಕರಿಸಿದ ವೈಭವ್‌ ಸೂರ್ಯವಂಶಿ
    June 24, 2026 | 0
  • Untitled design 2026 06 24T182842.988
    ಕರ್ನಾಟಕದಲ್ಲಿ ಮತ್ತೆ ಬೈಕ್ ಆ್ಯಂಬುಲೆನ್ಸ್ ಸೇವೆ: ಆರೋಗ್ಯ ಇಲಾಖೆಯಿಂದ ಮಹತ್ವದ ನಿರ್ಧಾರ
    June 24, 2026 | 0
  • Untitled design 2026 06 24T173707.467
    ಯುರೋಪಿಯನ್ ರಾಷ್ಟ್ರಗಳಲ್ಲಿ ಉಷ್ಣಮಾರುತ: ಕಳೆದ 5 ದಿನಗಳಲ್ಲಿ 40 ಮಂದಿ ಬಲಿ
    June 24, 2026 | 0
  • Untitled design 2026 06 24T170845.470
    ನವಿಲುಗರಿ ಕೇಸ್..ಕಿಶನ್ ತಪ್ಪೊಪ್ಪಿಗೆ..ನಿವಿಗೂ ಫುಲ್ ಡ್ರಿಲ್
    June 24, 2026 | 0
  • Untitled design 2026 06 24T154602.688
    ವಿವಾಹಿತ ಮಹಿಳೆಗಾಗಿ ಇಬ್ಬರು ಪುರುಷರ ನಡುವೆ ಫೈಟ್: ಮಚ್ಚಿನೇಟಿಗೆ ಯುವಕನ ಹಸ್ತ ಕಟ್
    June 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version