ತಮ್ಮ ಅಮೋಘ ಕಂಠಸಿರಿಯಿಂದ ವಿಶ್ವದಾದ್ಯಂತ ಹೆಸರು ಮಾಡಿರುವ ಜನಪ್ರಿಯ ಗಾಯಕ ಸೋನು ನಿಗಂ, “ನಾನು ಮತ್ತು ಗುಂಡ” ಚಿತ್ರದ ಖ್ಯಾತಿಯ ನಿರ್ದೇಶಕ ಶ್ರೀನಿವಾಸ್ ತಿಮ್ಮಯ್ಯ ನಿರ್ದೇಶನದ “ವರ್ಣವೇದಂ” ಚಿತ್ರಕ್ಕಾಗಿ ” ಓ ವೇದ ಓ ವೇದ” ಎಂಬ ಸುಂದರ ರೊಮ್ಯಾಂಟಿಕ್ ಹಾಡು ಹಾಡಿದ್ದಾರೆ. ಗಗನ್ ಭಡೇರಿಯಾ ಸಂಗೀತ ನೀಡಿರುವ ಈ ಹಾಡನ್ನು ನಿರ್ದೇಶಕ ಶ್ರೀನಿವಾಸ್ ತಿಮ್ಮಯ್ಯ ಅವರೆ ಬರೆದಿದ್ದಾರೆ. ಇತ್ತೀಚಿಗೆ ಈ ಹಾಡಿನ ಧ್ವನಿಮುದ್ರಣ ನಡೆದಿದ್ದು, ಸದ್ಯದಲ್ಲೇ ಚಿತ್ರೀಕರಣವಾಗಲಿದೆ. ಭೂಷಣ್ ನೃತ್ಯ ನಿರ್ದೇಶನ ಮಾಡಲಿದ್ದಾರೆ.
ಶ್ರೀನಿವಾಸ್ ತಿಮ್ಮಯ್ಯ ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ ಭೀಮೇಶ್, ಚಂದ್ರಶೇಖರ್, ವಿಶ್ವನಾಥ್, ಶೈಜು ಹಾಗೂ ರಾಜೇಶ್ ಗೋಸ್ವಾಮಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಕಲರ್ ಮಾಫಿಯಾ ಕುರಿತಾದ ಕಥಾಹಂದರ ಹೊಂದಿರುವ ಕಾರಣ ಈ ಚಿತ್ರಕ್ಕೆ “ವರ್ಣವೇದಂ” ಎಂದು ಶೀರ್ಷಿಕೆ ಇಡಲಾಗಿದೆ ಎಂದು ತಿಳಿಸಿರುವ ನಿರ್ದೇಶಕರು ಚಿತ್ರದಲ್ಲಿ ನಾಯಕಿಯ ಹೆಸರು ವರ್ಣ ಹಾಗೂ ನಾಯಕನ ಹೆಸರು ವೇದ ಎಂದು ಹೇಳಿದ್ದಾರೆ. ನೈಋತ್ಯ ಹಾಗೂ ಪ್ರತೀಕ್ಷ ಈ ಚಿತ್ರದ ನಾಯಕ ನಾಯಕಿಯಾಗಿ ನಟಿಸುತ್ತಿದ್ದಾರೆ. ಹೆಸರಾಂತ ಕಲಾವಿದರ ತಾರಾಬಳಗವಿರುವ “ವರ್ಣವೇದಂ” ಚಿತ್ರಕ್ಕೆ ಚಿದಾನಂದ್ ಅವರ ಛಾಯಾಗ್ರಹಣವಿದೆ.
ಗಗನ್ ಭಡೇರಿಯಾ ಸಂಗೀತ ಸಂಯೋನೆಯಲ್ಲಿ ಆರು ಸುಮಧುರ ಹಾಡುಗಳು ಚಿತ್ರದಲ್ಲಿದ್ದು, ಸೋನು ನಿಗಂ ಸೇರಿದಂತೆ ಜನಪ್ರಿಯ ಗಾಯಕರು ಈ ಹಾಡುಗಳಿಗೆ ಧ್ವನಿ ನೀಡಿದ್ದಾರೆ.
ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..
- Tata Play-1665
- U-Digital-ಮೈಸೂರು-160
- Metro Cast Network-ಬೆಂಗಳೂರು-ಬೆಳಗಾವಿ-30-828
- V4 digital network-623
- Abhishek network-817
- Malnad Digital network-45
- JBM network-ರಾಮದುರ್ಗ-54
- Channel net nine-ಧಾರವಾಡ-128
- Basava cable network-ಚಳ್ಳಕೆರೆ-54
- City channel network– ಚಳ್ಳಕೆರೆ-54
- RST digital-ಕಾರ್ಕಳ-101
- Vinayak cable-ಪಟ್ಟನಾಯಕನಹಳ್ಳಿ-54
- Mubarak digital-ಸಂಡೂರು-54
- SB cable-ಸವದತ್ತಿ-54
- Bhosale network-ವಿಜಯಪುರ-54
- Surya digital-ಜಗಳೂರು-54
- Gayatri network-ಸಿಂಧನೂರು-54
- Global vision-ದಾವಣಗೆರೆ-54
- Janani cable-ಮಂಡ್ಯ-54
- Hira cable-ಬೆಳಗಾವಿ-ಹುಬ್ಬಳ್ಳಿ-54
- UDC network-ಹಾರೋಗೇರಿ-54
- Moka cable-ಬಳ್ಳಾರಿ-100
- CAN network-ಚಿಕ್ಕೋಡಿ-54
- KK digital-ಗಂಗಾವತಿ-54
- Victory network-ದಾವಣಗೆರೆ-54