“ವರ್ಣವೇದಂ” ಚಿತ್ರಕ್ಕಾಗಿ “ಓ ವೇದ ಓ ವೇದ” ಎಂದು ರೊಮ್ಯಾಂಟಿಕ್ ಹಾಡು ಹಾಡಿದ ಸೋನು ನಿಗಂ

Untitled design 2025 04 10t193042.647

ತಮ್ಮ ಅಮೋಘ ಕಂಠಸಿರಿಯಿಂದ ವಿಶ್ವದಾದ್ಯಂತ ಹೆಸರು ಮಾಡಿರುವ ಜನಪ್ರಿಯ ಗಾಯಕ ಸೋನು ನಿಗಂ, “ನಾನು ಮತ್ತು ಗುಂಡ” ಚಿತ್ರದ ಖ್ಯಾತಿಯ ನಿರ್ದೇಶಕ ಶ್ರೀನಿವಾಸ್ ತಿಮ್ಮಯ್ಯ ನಿರ್ದೇಶನದ “ವರ್ಣವೇದಂ”‌ ಚಿತ್ರಕ್ಕಾಗಿ ” ಓ ವೇದ ಓ ವೇದ” ಎಂಬ ಸುಂದರ ರೊಮ್ಯಾಂಟಿಕ್ ಹಾಡು ಹಾಡಿದ್ದಾರೆ. ಗಗನ್ ಭಡೇರಿಯಾ ಸಂಗೀತ ನೀಡಿರುವ ಈ ಹಾಡನ್ನು ನಿರ್ದೇಶಕ ಶ್ರೀನಿವಾಸ್ ತಿಮ್ಮಯ್ಯ ಅವರೆ ಬರೆದಿದ್ದಾರೆ. ಇತ್ತೀಚಿಗೆ ಈ ಹಾಡಿನ ಧ್ವನಿಮುದ್ರಣ ನಡೆದಿದ್ದು, ಸದ್ಯದಲ್ಲೇ ಚಿತ್ರೀಕರಣವಾಗಲಿದೆ. ಭೂಷಣ್ ನೃತ್ಯ ನಿರ್ದೇಶನ ಮಾಡಲಿದ್ದಾರೆ.

ಶ್ರೀನಿವಾಸ್ ತಿಮ್ಮಯ್ಯ ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ ಭೀಮೇಶ್, ಚಂದ್ರಶೇಖರ್, ವಿಶ್ವನಾಥ್, ಶೈಜು ಹಾಗೂ ರಾಜೇಶ್ ಗೋಸ್ವಾಮಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಕಲರ್ ಮಾಫಿಯಾ ಕುರಿತಾದ ಕಥಾಹಂದರ ಹೊಂದಿರುವ ಕಾರಣ ಈ ಚಿತ್ರಕ್ಕೆ “ವರ್ಣವೇದಂ” ಎಂದು ಶೀರ್ಷಿಕೆ ಇಡಲಾಗಿದೆ ಎಂದು ತಿಳಿಸಿರುವ ನಿರ್ದೇಶಕರು ಚಿತ್ರದಲ್ಲಿ ನಾಯಕಿಯ ಹೆಸರು ವರ್ಣ ಹಾಗೂ ನಾಯಕನ ಹೆಸರು ವೇದ ಎಂದು ಹೇಳಿದ್ದಾರೆ‌. ನೈಋತ್ಯ ಹಾಗೂ ಪ್ರತೀಕ್ಷ ಈ ಚಿತ್ರದ ನಾಯಕ ನಾಯಕಿಯಾಗಿ ನಟಿಸುತ್ತಿದ್ದಾರೆ. ಹೆಸರಾಂತ ಕಲಾವಿದರ ತಾರಾಬಳಗವಿರುವ “ವರ್ಣವೇದಂ” ಚಿತ್ರಕ್ಕೆ ಚಿದಾನಂದ್ ಅವರ ಛಾಯಾಗ್ರಹಣವಿದೆ.

ಗಗನ್ ಭಡೇರಿಯಾ ಸಂಗೀತ ಸಂಯೋನೆಯಲ್ಲಿ ಆರು ಸುಮಧುರ ಹಾಡುಗಳು ಚಿತ್ರದಲ್ಲಿದ್ದು, ಸೋನು ನಿಗಂ ಸೇರಿದಂತೆ ಜನಪ್ರಿಯ ಗಾಯಕರು ಈ ಹಾಡುಗಳಿಗೆ ಧ್ವನಿ ನೀಡಿದ್ದಾರೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..
Exit mobile version