ಕುಂಭಮೇಳದಲ್ಲಿ “ವೀರ ಕಂಬಳ” ನಿರ್ಮಾಪಕ ಹಾಗೂ ನಿರ್ದೇಶಕರಿಂದ ಪುಣ್ಯಸ್ನಾನ

ಕುಂಭಮೇಳದಲ್ಲಿ ನಿರ್ಮಾಪಕ ಹಾಗೂ ನಿರ್ದೇಶಕರಿಂದ ಪುಣ್ಯಸ್ನಾನ

Untitled design 2025 02 24t165922.125

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ರಾಷ್ಟ್ರಪ್ರಶಸ್ತಿ ವಿಜೇತ ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು ಅವರ ನಿರ್ದೇಶನದಲ್ಲಿ ಹಾಗೂ ರಾಷ್ಟ್ರಪ್ರಶಸ್ತಿ ವಿಜೇತ ನಿರ್ಮಾಪಕ ಅರುಣ್ ರೈ ತೊಡರ್ ಅವರ ನಿರ್ಮಾಣದಲ್ಲಿ ಕನ್ನಡ ಹಾಗೂ ತುಳು ಭಾಷೆಗಳಲ್ಲಿ “ವೀರ ಕಂಬಳ” ಚಿತ್ರ ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ಮೂಡಿಬರುತ್ತಿದೆ. ದಕ್ಷಿಣ ಕನ್ನಡದ ಪ್ರಸಿದ್ದ ದೇಸಿ ಕ್ರೀಡೆ ಕುರಿತಾದ ಕಥಾಹಂದರ ಹೊಂದಿರುವ ಈ ಚಿತ್ರದ ಪ್ರಮುಖಪಾತ್ರದಲ್ಲಿ ಆದಿತ್ಯ, ಪ್ರಕಾಶ್ ರೈ, ರವಿಶಂಕರ್, ಶೋಭ್ ರಾಜ್, ರಾಧಿಕಾ ಚೇತನ್ ಈ ಚಿತ್ರದ ಪ್ರಮುಖಪಾತ್ರದಲ್ಲಿ ಅಭಿನಯಿಸಿದ್ದಾರೆ.

ಪ್ರಯಾಗರಾಜದ ತ್ರಿವೇಣಿ ಸಂಗಮದಲ್ಲಿ144 ವರ್ಷಗಳಿಗೊಮ್ಮೆ ನಡೆಯುವ ಮಹಾ ಕುಂಭಮೇಳದಲ್ಲಿ ಈಗಾಗಲೇ 55 ಕೋಟಿ ಜನರು ಮಿಂದು ಪುನೀತರಾಗಿದ್ದಾರೆ. “ವೀರ ಕಂಬಳ” ಚಿತ್ರದ ನಿರ್ದೇಶಕ ಡಾ. ಎಸ್ ವಿ ರಾಜೇಂದ್ರಸಿಂಗ್ ಬಾಬು ಹಾಗೂ ನಿರ್ಮಾಪಕ ಅರುಣ್ ರೈ ತೊಡಾರ್ ಅವರು ಇತ್ತೀಚಿಗೆ ಪ್ರಯಾಗರಾಜದ ಮಹಾ ಕುಂಭಮೇಳಕ್ಕೆ ತೆರಳಿ ಪುಣ್ಯಸ್ನಾನ ಮಾಡಿದ್ದಾರೆ. ದೇಶ ಸುಭಿಕ್ಷವಾಗಿರಲಿ. ಎಲ್ಲರಿಗೂ ಒಳ್ಳೆಯದಾಗಲಿ ಹಾಗೂ ಕನ್ನಡ – ತುಳು ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ “ವೀರ ಕಂಬಳ” ಚಿತ್ರ ಯಶಸ್ವಿಯಾಗಲಿ ಎಂದು ನಿರ್ಮಾಪಕರು ಹಾಗೂ ನಿರ್ದೇಶಕರು ದೇವರಲ್ಲಿ ಪ್ರಾರ್ಥಿಸಿದ್ದಾರೆ.

ADVERTISEMENT
ADVERTISEMENT
Exit mobile version