ಲಕ್ನೋ/ವೃಂದಾವನ: ಐಪಿಎಲ್ 2026ರ ಋತುವಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಸತತ ಎರಡನೇ ಗೆಲುವು ದಾಖಲಿಸಿ ಅಭಿಮಾನಿಗಳನ್ನು ರೋಮಾಂಚನಗೊಳಿಸಿದೆ. ಗುಜರಾತ್ ಟೈಟಾನ್ಸ್ ವಿರುದ್ಧದ ಭರ್ಜರಿ ಜಯದ ನಂತರ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರು ಆಧ್ಯಾತ್ಮಿಕ ಕ್ಷೇತ್ರ ವೃಂದಾವನಕ್ಕೆ ಭೇಟಿ ನೀಡಿದ್ದಾರೆ.
ಕೊಹ್ಲಿ ಮತ್ತು ಅನುಷ್ಕಾ ಸೋಮವಾರ (ಜೂನ್ 1) ಉತ್ತರ ಪ್ರದೇಶದ ವೃಂದಾವನದಲ್ಲಿರುವ ಪ್ರಸಿದ್ಧ ಆಧ್ಯಾತ್ಮಿಕ ಗುರು ಪ್ರೇಮಾನಂದ್ ಮಹಾರಾಜರ “ರಾಧಾ ಕೇಳಿ ಕುಂಜ್ ಆಶ್ರಮ”ಕ್ಕೆ ಭೇಟಿ ನೀಡಿದರು. ಈ ವೇಳೆ ದಂಪತಿ ಮಹಾರಾಜರ ದರ್ಶನ ಪಡೆದು ಆಶೀರ್ವಾದ ಸ್ವೀಕರಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ವೃಂದಾವನಕ್ಕೆ ಭೇಟಿ ನೀಡುತ್ತಿರುತ್ತಾರೆ. ಹಿಂದೆಯೂ ಹಲವಾರು ಬಾರಿ ಈ ಪವಿತ್ರ ಸ್ಥಳಕ್ಕೆ ಭೇಟಿ ನೀಡಿರುವ ಅವರು, ಆಧ್ಯಾತ್ಮಿಕ ಮಾರ್ಗದರ್ಶನವನ್ನು ಪಡೆದುಕೊಂಡಿದ್ದಾರೆ. ಈ ಬಾರಿ ಕೂಡಾ ಸರಳ ಉಡುಪಿನಲ್ಲಿ ಆಶ್ರಮಕ್ಕೆ ಆಗಮಿಸಿದ ದಂಪತಿ, ಶಾಂತವಾಗಿ ಗುರುಗಳ ದರ್ಶನ ಪಡೆದು ಭಕ್ತಿಭಾವದಲ್ಲಿ ಕೈಮುಗಿದು ನಿಂತಿರುವುದು ಅಭಿಮಾನಿಗಳ ಮನಸೆಳೆದಿದೆ.
ಮೈದಾನದಲ್ಲಿ ಆಕ್ರಮಣಕಾರಿ ಆಟದಿಂದ ಹೆಸರು ಮಾಡಿದ ಕೊಹ್ಲಿ, ವೃಂದಾವನದಲ್ಲಿ ಸಂಪೂರ್ಣ ಸರಳತೆಯಿಂದ ಕಾಣಿಸಿಕೊಂಡಿದ್ದಾರೆ.. ಅನೇಕ ಅಭಿಮಾನಿಗಳು “ಕ್ರಿಕೆಟ್ ಮೈದಾನದ ಕಿಂಗ್, ಆದರೆ ಆತ್ಮಶಾಂತಿಯ ಮುಂದೆ ಭಕ್ತ” ಎಂದು ಪ್ರತಿಕ್ರಿಯಿಸುತ್ತಿದ್ದಾರೆ.
VIRAT KOHLI & ANUSHKA SHARMA AT VRINDAVAN TO TAKD BLESSINGS OF PREMANAND JI MAHARAJ. 🙏
– Virat Kohli chanting “Radhe, Radhe” at Vrindavan. ♥️pic.twitter.com/KirpYKZZvt
— Tanuj (@ImTanujSingh) June 2, 2026
ಐಪಿಎಲ್ 2026ರಲ್ಲಿ RCB ತಂಡ ಉತ್ತಮ ಪ್ರದರ್ಶನ ನೀಡುತ್ತಿದ್ದು, ಕೊಹ್ಲಿಯ ಫಾರ್ಮ್ ತಂಡಕ್ಕೆ ದೊಡ್ಡ ಬಲವಾಗಿದೆ. ಇತ್ತೀಚಿನ ಗೆಲುವಿನ ನಂತರ ದಂಪತಿ ವೃಂದಾವನಕ್ಕೆ ಭೇಟಿ ನೀಡಿರುವುದು, ಅವರ ಜೀವನದಲ್ಲಿ ಆಧ್ಯಾತ್ಮಿಕ ಸಮತೋಲನಕ್ಕೆ ನೀಡಿರುವ ಮಹತ್ವವನ್ನು ತೋರಿಸುತ್ತದೆ ಎಂದು ಅಭಿಮಾನಿಗಳು ಅಭಿಪ್ರಾಯಪಟ್ಟಿದ್ದಾರೆ.
ಅದೇ ಸಮಯದಲ್ಲಿ, ಅನುಷ್ಕಾ ಶರ್ಮಾ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದ ಫೋಟೋ ಕೂಡ ವೈರಲ್ ಆಗಿತ್ತು. ಆ ಫೋಟೋದಲ್ಲಿ ಕೊಹ್ಲಿ ಮತ್ತು ಅನುಷ್ಕಾ ಟ್ರೋಫಿಯೊಂದಿಗೆ ಕಾಣಿಸಿಕೊಂಡಿದ್ದು, RCB ತಂಡದ ಗೆಲುವಿನ ಸಂಭ್ರಮವನ್ನು ವ್ಯಕ್ತಪಡಿಸಿತ್ತು.
