ಹುಲಿಕಲ್ ಘಾಟಿಯಲ್ಲಿ ಮತ್ತೆ ಮಣ್ಣು ಕುಸಿತ, ಭಾರೀ ವಾಹನಗಳಿಗೆ ನಿಷೇಧ!

ಮಣ್ಣು ಕುಸಿತ ಭೀತಿ: ಪರ್ಯಾಯ ಮಾರ್ಗ ಸೂಚನೆ!

0 (31)

ಶಿವಮೊಗ್ಗ: ಮಲೆನಾಡಿನ ಶಿವಮೊಗ್ಗ ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಹುಲಿಕಲ್ ಘಾಟಿಯ ಹೆರ್‌ಪಿನ್ ತಿರುವಿನಲ್ಲಿ ಮತ್ತೆ ಮಣ್ಣು ಕುಸಿತವಾಗಿದೆ. ಮುಂದುವರಿದ ಮಳೆಯಿಂದಾಗಿ ಇನ್ನಷ್ಟು ಕುಸಿತದ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲಾಡಳಿತವು ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ 52ರ ಬಾಳೆಬರೆ (ಹುಲಿಕಲ್) ಘಾಟಿ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ತಾತ್ಕಾಲಿಕ ನಿಷೇಧ ಹೇರಿದೆ. ಈ ಆದೇಶವು ಮಳೆಗಾಲ ಮುಗಿಯುವವರೆಗೆ ಜಾರಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿ ಗುರುದತ್ ಹೆಗಡೆ ತಿಳಿಸಿದ್ದಾರೆ.

ಹುಲಿಕಲ್ ಘಾಟಿಯಲ್ಲಿ ಮಣ್ಣು ಕುಸಿದ ಜಾಗದಲ್ಲಿ ಲೋಕೋಪಯೋಗಿ ಇಲಾಖೆಯಿಂದ ದುರಸ್ತಿ ಕಾರ್ಯ ಆರಂಭವಾಗಿದ್ದು, ಈ ಕಾರಣದಿಂದಲೂ ಭಾರೀ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ವರದಿಯ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.

ಪರ್ಯಾಯ ಮಾರ್ಗಗಳು:

ಭಾರೀ ವಾಹನಗಳಿಗೆ ಪರ್ಯಾಯ ಮಾರ್ಗಗಳನ್ನು ಬಳಸಲು ಜಿಲ್ಲಾಡಳಿತವು ಸೂಚಿಸಿದೆ. ಈ ಮಾರ್ಗಗಳು ಈ ಕೆಳಗಿನಂತಿವೆ:

  1. ತೀರ್ಥಹಳ್ಳಿ – ರಾವೆ – ಕಾನುಗೋಡು – ನಗರ – ಕೊಲ್ಲೂರು – ಕುಂದಾಪುರ

  2. ತೀರ್ಥಹಳ್ಳಿ – ಯಡೂರು – ಮಾಸ್ತಿಕಟ್ಟೆ – ನಗರ – ಕೊಲ್ಲೂರು – ಕುಂದಾಪುರ

  3. ಶಿವಮೊಗ್ಗ – ಹೊನ್ನಾವರ – ಭಟ್ಕಳ – ಬೈಂದೂರು – ಕುಂದಾಪುರ

ಈ ಕ್ರಮವು ರಸ್ತೆಯ ಸುರಕ್ಷತೆಯನ್ನು ಖಾತ್ರಿಪಡಿಸಲು ಮತ್ತು ಮತ್ತಷ್ಟು ಕುಸಿತದ ಅಪಾಯವನ್ನು ತಡೆಗಟ್ಟಲು ಕೈಗೊಳ್ಳಲಾಗಿದೆ. ಜಿಲ್ಲಾಡಳಿತವು ವಾಹನ ಚಾಲಕರಿಗೆ ಸೂಕ್ತ ಮಾರ್ಗದರ್ಶನ ಮತ್ತು ಸಹಕಾರ ನೀಡುವಂತೆ ತಿಳಿಸಿದೆ.

Exit mobile version