ಬಳ್ಳಾರಿ: ಸಿರುಗುಪ್ಪ ತಾಲೂಕಿನ ಕರ್ಚಿಗನೂರು ಗ್ರಾಮದಲ್ಲಿ ಕೃಷಿಹೊಂಡದಲ್ಲಿ ಬಿದ್ದು 13 ವರ್ಷದ ಬಾಲಕನೊಬ್ಬ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಮೃತ ಬಾಲಕ ವೀರೇಶ್ (13) ಎಂದು ಗುರುತಿಸಲಾಗಿದೆ.
ಕುರಿ ಮೇಯಿಸಲು ಹೋಗಿದ್ದ ವೀರೇಶ್, ನೀರು ಕುಡಿಯಲು ಕೃಷಿಹೊಂಡದ ಬಳಿಗೆ ತೆರಳಿದ್ದ. ಈ ವೇಳೆ ಆಯತಪ್ಪಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದ್ದಾನೆ. ಘಟನೆಯ ನಂತರ ಸ್ಥಳೀಯರು ಮತ್ತು ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ನಡೆಸಿ ವೀರೇಶ್‌ನ ಮೃತದೇಹವನ್ನು ಹೊಂಡದಿಂದ ಹೊರತೆಗೆದಿದ್ದಾರೆ.
ADVERTISEMENT
ADVERTISEMENT
ಈ ಘಟನೆಯ ಕುರಿತು ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





