ಲೋನ್ ರಿಕವರಿ: ಬ್ಯಾಂಕ್ ಸಿಬ್ಬಂದಿ ಮೇಲೆ ಕಲ್ಲಿನಿಂದ ಹಲ್ಲೆ

Untitled design 2025 04 06t140954.069

ಲೋನ್ ರಿಕವರಿಗೆ ಹೋದ ಬ್ಯಾಂಕ್ ಸಿಬ್ಬಂದಿಗೆ ಕಲ್ಲಿನಿಂದ ತಲೆಗೆ ಹೊಡೆದಿರುವ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ.

ಚಂದನ್ ಕಲ್ಲೇಟು ತಿಂದ ಬ್ಯಾಂಕ್ ಸಿಬ್ಬಂದಿ. ರಮೇಶ್ ಎಂಬಾತ ಕಳೆದ ಎರಡು ತಿಂಗಳಿನಿಂದ ಬೈಕ್‌ನ ಇಎಂಐ ಕಟ್ಟಿರಲಿಲ್ಲ. ಫೋನ್ ಮಾಡಿದರೆ ರಿಸೀವ್ ಮಾಡುತ್ತಿರಲಿಲ್ಲ. ಕೊನೆಗೆ ಫೋನ್ ರಿಸಿವ್ ಮಾಡಿದ ರಮೇಶ್ ನಾಗರಭಾವಿಯ ಬಿಡಿಎ ಕಾಂಪ್ಲೆಕ್ಸ್ ಬಳಿ ಬರುವಂತೆ ಸಿಬ್ಬಂದಿಗೆ ಹೇಳಿದ್ದ. ಬ್ಯಾಂಕ್ ಸಿಬ್ಬಂದಿ ಚಂದನ್ ಸ್ಥಳಕ್ಕೆ ಹೋದ ವೇಳೆ ಲೋನ್ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ರಮೇಶ್ ಅವಾಚ್ಯ ಶಬ್ಧಗಳಿಂದ ಬೈದಿದಿದ್ದು,  ಏಕಾಏಕಿ ಅಲ್ಲೇ ಇದ್ದ ಕಲ್ಲಿನಿಂದ ಬ್ಯಾಂಕ್ ಸಿಬ್ಬಂದಿ ಚಂದನ್‌ಗೆ ಹೊಡೆದಿದ್ದು, ಚಂದನ್ ಅವರ ಐಫೋನ್ ಹೊಡೆದು ಹಾಕಿ ಪರಾರಿಯಾಗಿದ್ದಾನೆ.

ಘಟನೆಯಿಂದ ಬ್ಯಾಂಕ್ ಸಿಬ್ಬಂದಿ ಚಂದನ್ ತಲೆಗೆ ಗಂಭೀರವಾದ ಗಾಯವಾಗಿದ್ದು,  ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ಸಂಬಂಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲಿಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

Exit mobile version