ಊಟಕ್ಕೆ ಹೋಗಲು ರಸ್ತೆ ದಾಟುವಾಗ ಬೈಕ್ ಡಿಕ್ಕಿಯಾಗಿ ಭೀಕರ ಅಪಘಾತ: ಯುವತಿ ಬಲಿ

BeFunky collage 2026 02 17T134642.746

ಬೆಂಗಳೂರಿನ ರಾಜ್ ಕುಮಾರ್ ರಸ್ತೆಯ ಹೆಚ್‌ಡಿಎಫ್‌ಸಿ ಬ್ಯಾಂಕ್ ಬಳಿ ನಡೆದ ಭಯಾನಕ ರಸ್ತೆ ಅಪಘಾತದಲ್ಲಿ 27 ವರ್ಷದ ಯುವತಿ ಯೋಗೇಶ್ವರಿ ಅವರು ಸಾವನ್ನಪ್ಪಿದ್ದಾರೆ. ನಿನ್ನೆ ಮಧ್ಯಾಹ್ನ 12 ಗಂಟೆ ಸುಮಾರಿಗೆ ಊಟಕ್ಕೆ ಹೋಗಲು ರಸ್ತೆ ದಾಟುತ್ತಿದ್ದ ಯುವತಿಗೆ ರಭಸದಲ್ಲಿ ಬಂದ ಬೈಕ್ ಡಿಕ್ಕಿ ಹೊಡೆದಿದ್ದು, ಗಂಭೀರ ಗಾಯಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಘಟನೆಯ ವಿವರ :

ಕೆಂಪೇಗೌಡ ಲೇಔಟ್ ಲಗ್ಗೆರೆ ಬಳಿ ನಿವಾಸಿ ಯೋಗೇಶ್ವರಿ ಅವರು ನಿನ್ನೆ ಮಧ್ಯಾಹ್ನ ಊಟಕ್ಕೆಂದು ರಸ್ತೆ ದಾಟುತ್ತಿದ್ದರು. ಈ ವೇಳೆ ಸ್ಪೀಡ್‌ನಲ್ಲಿ ಬಂದ ಬೈಕ್ ಸವಾರ ಯುವತಿಗೆ ತೀವ್ರವಾಗಿ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಯುವತಿಗೆ ತಲೆ, ದೇಹದ ಭಾಗಗಳಲ್ಲಿ ಗಂಭೀರ ಗಾಯಗಳಾಗಿ ತಕ್ಷಣ ಸುಗುಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಸಾವನ್ನಪ್ಪಿದ್ದಾರೆ.

ಮೃತದೇಹದ ಮರಣೋತ್ತರ ಪರೀಕ್ಷೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆದಿದೆ. ರಾಜಾಜಿನಗರ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಬೈಕ್ ಸವಾರನ ಪತ್ತೆಗೆ ತನಿಖೆ ಆರಂಭಿಸಿದ್ದಾರೆ. ಸವಾರನು ಪರಾರಿಯಾಗಿರುವ ಸಾಧ್ಯತೆ ಇದ್ದು, ಸಿಸಿಟಿವಿ ದೃಶ್ಯಗಳು ಮತ್ತು ಸಾಕ್ಷಿಗಳ ಮೂಲಕ ಪತ್ತೆ ಹಚ್ಚುವ ಕೆಲಸ ನಡೆಯುತ್ತಿದೆ.

ಈ ಅಪಘಾತವು ಬೆಂಗಳೂರಿನಲ್ಲಿ ಪಾದಚಾರಿಗಳ ಸುರಕ್ಷತೆಯ ಬಗ್ಗೆ ಮತ್ತೊಮ್ಮೆ ಪ್ರಶ್ನೆಗಳನ್ನು ಎತ್ತಿದೆ. ರಭಸದ ಚಾಲನೆ, ಸ್ಪೀಡ್ ಮತ್ತು ರಸ್ತೆ ದಾಟುವಾಗ ಜಾಗರೂಕತೆಯ ಕೊರತೆಯಿಂದ ಇಂತಹ ದುರಂತಗಳು ಸಂಭವಿಸುತ್ತಿವೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

Exit mobile version