ಧರ್ಮ, ಧಾರ್ಮಿಕ ನಂಬಿಕೆ, ಆಚರಣೆಗಳಲ್ಲಿ ಬಿಜೆಪಿ ರಾಜಕೀಯ ಹುಡುಕುತ್ತಿದೆ: D K ಶಿವಕುಮಾರ್ ತರಾಟೆ!

ಎಲ್ಲ ನಂಬಿಕೆಗೆ ಗೌರವ ಕೋರಿ ಡಿ.ಕೆ.ಶಿವಕುಮಾರ್

Whatsapp image 2025 02 05 at 12.24.49 pm (1)

ಬೆಂಗಳೂರು : ಖಾಸಗಿ ಹೋಟೆಲ್ ನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ D K ಶಿವಕುಮಾರ್ ಅವರು, “ಯಾವುದೇ ಧರ್ಮದ ಬಗ್ಗೆ ಶ್ರದ್ದೆ, ಆಚರಣೆ, ನಂಬಿಕೆಗಳು ಆಯಾಯ ವ್ಯಕ್ತಿಗೆ ಸಂಬಂಧಿಸಿದ ವಿಚಾರಗಳು. ನಾವು ಪ್ರತಿಯೊಂದಕ್ಕೂ ಗೌರವ ನೀಡಬೇಕು. ಆದರೆ ಇವುಗಳನ್ನು ಬಿಜೆಪಿ ತನ್ನ ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.

“ವಿರೋಧ ಪಕ್ಷದ ನಾಯಕ ಅಶೋಕ್ ಅವರ ಹೇಳಿಕೆಗೆ ಉತ್ತರಿಸಲು ನಾನು ಇಷ್ಟ ಪಡುವುದಿಲ್ಲ. ಅನವಶ್ಯಕವಾಗಿ ಈ ವಿಚಾರಗಳನ್ನು ಎಳೆದಾಡಲು ನಾನು ಹೋಗುವುದಿಲ್ಲ. ನಮ್ಮ ಪಕ್ಷದ ನಾಯಕರು ಈ ವಿಚಾರವಾಗಿ ವಿಶಾಲಾರ್ಥದ ಹೇಳಿಕೆ ನೀಡಿದ್ದಾರೆ. ಆದರೆ ಬಿಜೆಪಿ ಇದರಲ್ಲಿ ರಾಜಕೀಯ ಮಾಡುತ್ತಿದೆ. ಧರ್ಮ, ಆಚರಣೆ, ನಂಬಿಕೆಗಳು ರಾಜಕೀಯವಾಗಿ ಉಪಯೋಗಿಸಿಕೊಳ್ಳುವ ವಿಚಾರವಲ್ಲ” ಎಂದು ಹೇಳಿದರು.

ADVERTISEMENT
ADVERTISEMENT

“ಪ್ರಪಂಚದಲ್ಲಿ ಹಲವಾರು ಧಾರ್ಮಿಕ ಆಚರಣೆ, ನಂಬಿಕೆಗಳಿವೆ.‌ ನಾನು ನನ್ನ ದೇವರನ್ನು ನಂಬುತ್ತೇನೆ. ಕೆಲವರು ಹಸ್ತ ನೋಡಿಕೊಳುತ್ತಾರೆ, ಇನ್ನೂ ಕೆಲವರು ನೀರು, ಆಕಾಶ, ಸೂರ್ಯನನ್ನು ನಂಬುತ್ತಾರೆ. ಇದರಲ್ಲಿ ಸರಿ ತಪ್ಪು ಎಂಬುದಿಲ್ಲ, ಅವರವರ ನಂಬಿಕೆ ಅಷ್ಟೇ” ಎಂದರು.

ಗ್ಯಾರಂಟಿ ನ್ಯೂಸ್ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ: https://whatsapp.com/channel/0029VafyCqRFnSzHn1JWKi1B

ಜೊತೆಯಲ್ಲೇ ಗ್ಯಾರಂಟಿ ನ್ಯೂಸ್ ಸಮುದಾಯವನ್ನು ಸೇರಲು ಈ ಲಿಂಕ್ ಕ್ಲಿಕ್ಕಿಸಿ: https://chat.whatsapp.com/HWayJDSBf9aI06q6jplPgc

Exit mobile version