• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಡತನವನ್ನು ಮೆಟ್ಟಿ ಜಡ್ಜ್ ಆದ ಆಟೋ ಚಾಲಕನ ಮಗಳು

ಯಶಸ್ವಿನಿ ಎಂ by ಯಶಸ್ವಿನಿ ಎಂ
February 24, 2026 - 5:00 pm
in Flash News, ಬೆಂ. ನಗರ, ವಿಶೇಷ
0 0
0

ಆನೇಕಲ್, ಫೆಬ್ರವರಿ 24: ಜೀವನದ ಹಾದಿಯಲ್ಲಿ ಎದುರಾಗುವ ಕಲ್ಲು-ಮುಳ್ಳುಗಳನ್ನು ಸೋಪಾನವಾಗಿಸಿಕೊಂಡು ಸಾಧನೆಯ ಶಿಖರಕ್ಕೇರಿದ ಅಪರೂಪದ ಕಥೆಯಿದು. ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ತಿರುಪಾಳ್ಯ ಎಂಬ ಪುಟ್ಟ ಹಳ್ಳಿಯ ಹೆಣ್ಣುಮಗಳು ನಾಗಿಣಿ ಎಲ್, ಇಂದು ಸಿವಿಲ್ ನ್ಯಾಯಾಧೀಶೆಯಾಗಿ ಆಯ್ಕೆಯಾಗುವ ಮೂಲಕ ಇಡೀ ರಾಜ್ಯದ ಗಮನ ಸೆಳೆದಿದ್ದಾರೆ. ಆಟೋ ಚಾಲಕನ ಮಗಳಾಗಿ ಬೆಳೆದು, ಹೂವು ಮಾರುತ್ತಲೇ ಓದಿ, ಇಂದು ನ್ಯಾಯದ ಸೀಟಿನಲ್ಲಿ ಕುಳಿತುಕೊಳ್ಳಲು ಸಜ್ಜಾಗಿರುವುದು ಕೇವಲ ಒಂದು ಕುಟುಂಬದ ಯಶಸ್ಸಲ್ಲ, ಬದಲಿಗೆ ಹೋರಾಟದ ಹಾದಿಯಲ್ಲಿರುವ ಕೋಟ್ಯಂತರ ಯುವಜನತೆಯ ಸ್ಪೂರ್ತಿಯ ಸಂಕೇತ.

ನಾಗಿಣಿ ಅವರ ತಂದೆ ಲಕ್ಷ್ಮಣ್ ದಿನವಿಡೀ ಆಟೋ ಚಾಲನೆ ಮಾಡಿ ಬರುವ ಆದಾಯದಲ್ಲಿ ಸಂಸಾರ ನಡೆಸುತ್ತಿದ್ದರೆ, ತಾಯಿ ಮಂಜುಳಾ ಮಾರುಕಟ್ಟೆಯಲ್ಲಿ ಹೂವಿನ ವ್ಯಾಪಾರ ಮಾಡುತ್ತಿದ್ದರು. ಮನೆಯಲ್ಲಿ ಬಡತನ ತಾಂಡವವಾಡುತ್ತಿದ್ದರೂ, ಮಗಳ ವಿದ್ಯಾಭ್ಯಾಸಕ್ಕೆ ಪೋಷಕರು ಎಂದೂ ಅಡ್ಡಿಯಾಗಲಿಲ್ಲ. ನಾಗಿಣಿ ಕೂಡ ಬಾಲ್ಯದಿಂದಲೇ ತಾಯಿಗೆ ಹೂವಿನ ವ್ಯಾಪಾರದಲ್ಲಿ ನೆರವಾಗುತ್ತಿದ್ದರು. ಒಂದು ಕೈಯಲ್ಲಿ ಹೂವಿನ ಮಾರು ಇರುತ್ತಿದ್ದರೆ, ಕಣ್ಣುಗಳು ಪುಸ್ತಕದ ಸಾಲುಗಳ ಮೇಲೆ ಇರುತ್ತಿದ್ದವು. 1ರಿಂದ 10ನೇ ತರಗತಿಯವರೆಗೆ ಸರ್ಕಾರಿ ಶಾಲೆಯಲ್ಲಿಯೇ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ್ದಾರೆ.

RelatedPosts

ಅಂಗನವಾಡಿ ಮಕ್ಕಳಿಗೆ ಸರ್ಕಾರದ ದೊಡ್ಡ ಶಾಕ್, ಮಾರ್ಚ್ 2ಕ್ಕೆ ಬೆಂಗಳೂರು ಚಲೋ!

ಗರ್ಭಕಂಠದ ಕ್ಯಾನ್ಸರ್‌ಗೆ ಬ್ರೇಕ್: ದೇಶಾದ್ಯಂತ 14 ವರ್ಷದ ಬಾಲಕಿಯರಿಗೆ ಉಚಿತ HPV ಲಸಿಕೆ

ಧಾರವಾಡ ಪ್ರತಿಭಟನೆಗೆ ಮಣಿದ ಸರ್ಕಾರ: 24,300 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ: ಖಾಲಿ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಭರವಸೆ

ADVERTISEMENT
ADVERTISEMENT

ನನ್ನ ಮಗಳು ಉನ್ನತ ಅಧಿಕಾರಿಯಾಗಬೇಕು, ಸಮಾಜಕ್ಕೆ ನ್ಯಾಯ ನೀಡುವ ಸ್ಥಾನದಲ್ಲಿ ಕುಳಿತುಕೊಳ್ಳಬೇಕು ಎಂಬುದು ತಂದೆ ಲಕ್ಷ್ಮಣ್ ಅವರ ದೊಡ್ಡ ಕನಸಾಗಿತ್ತು. ತಂದೆಯ ಈ ಆಸೆಯನ್ನು ನನಸು ಮಾಡುವುದನ್ನೇ ಗುರಿಯಾಗಿಸಿಕೊಂಡ ನಾಗಿಣಿ, ಡಾ. ರಾಮ್ ಮನೋಹರ್ ಲೋಹಿಯಾ ಕಾಲೇಜಿನಲ್ಲಿ ಕಾನೂನು ಪದವಿ ಪೂರ್ಣಗೊಳಿಸಿದರು. ಆದರೆ, ನ್ಯಾಯಾಧೀಶರ ಪರೀಕ್ಷೆ ಅಂದುಕೊಂಡಷ್ಟು ಸುಲಭವಾಗಿರಲಿಲ್ಲ.

ಮೊದಲ ಮತ್ತು ಎರಡನೇ ಪ್ರಯತ್ನದಲ್ಲಿ ನಾಗಿಣಿ ಅವರಿಗೆ ಕಡಿಮೆ ಅಂತರದಿಂದ ಯಶಸ್ಸು ಕೈತಪ್ಪಿತ್ತು. ಅನೇಕರು ಈ ಹಂತದಲ್ಲಿ ಧೃತಿಗೆಡುವುದು ಸಹಜ. ಆದರೆ, ನಾಗಿಣಿ ಸೋಲನ್ನು ಒಪ್ಪಿಕೊಳ್ಳಲಿಲ್ಲ. ಪೋಷಕರು ಪಡುತ್ತಿರುವ ಕಷ್ಟವೇ ಅವರಿಗೆ ಸ್ಪೂರ್ತಿ ನೀಡುತ್ತಿತ್ತು. ಛಲಬಿಡದೆ ಮೂರನೇ ಬಾರಿಗೆ ಪರೀಕ್ಷೆ ಎದುರಿಸಿದ ಇವರು, ಈ ಬಾರಿ ರಾಜ್ಯಮಟ್ಟದಲ್ಲಿ 48ನೇ ರ್ಯಾಂಕ್ ಪಡೆಯುವ ಮೂಲಕ ಸಿವಿಲ್ ನ್ಯಾಯಾಧೀಶರಾಗಿ ನೇಮಕಗೊಂಡಿದ್ದಾರೆ.

ರಾಜ್ಯಕ್ಕೆ ಮಾದರಿಯಾದ ಆನೇಕಲ್‌ನ ಪುತ್ರಿ

ಆಟೋ ಚಾಲಕನ ಮಗಳು ಜಡ್ಜ್ ಆಗಿದ್ದಾಳೆ ಎಂಬ ಸುದ್ದಿ ಕೇಳಿ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ. “ನನ್ನ ಈ ಸಾಧನೆಗೆ ಪೋಷಕರ ತ್ಯಾಗವೇ ಕಾರಣ. ಅವರ ಕಷ್ಟ ನೋಡುತ್ತಲೇ ನಾನು ಬೆಳೆದಿದ್ದರಿಂದ, ಅವರಿಗೆ ಗೌರವ ತರಬೇಕು ಎಂಬ ಹಠ ನನ್ನಲ್ಲಿತ್ತು ಎಂದು ನಾಗಿಣಿ ಹೇಳಿದ್ದಾರೆ.

ಬಡತನ ಎನ್ನುವುದು ಸಾಧನೆಗೆ ನೆಪವಾಗಬಾರದು ಎಂಬುದನ್ನು ನಾಗಿಣಿ ತೋರಿಸಿಕೊಟ್ಟಿದ್ದಾರೆ. ಸರ್ಕಾರಿ ಶಾಲೆಯಲ್ಲಿ ಓದಿದರೂ, ಸಾಮಾನ್ಯ ಕುಟುಂಬದಿಂದ ಬಂದರೂ ಕಠಿಣ ಪರಿಶ್ರಮವಿದ್ದರೆ ಆಕಾಶವನ್ನೂ ತಲುಪಬಹುದು ಎಂಬುದಕ್ಕೆ ಇವರೇ ಜ್ವಲಂತ ಉದಾಹರಣೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 24T205319.965

ಅಂಗನವಾಡಿ ಮಕ್ಕಳಿಗೆ ಸರ್ಕಾರದ ದೊಡ್ಡ ಶಾಕ್, ಮಾರ್ಚ್ 2ಕ್ಕೆ ಬೆಂಗಳೂರು ಚಲೋ!

by ಯಶಸ್ವಿನಿ ಎಂ
February 24, 2026 - 8:53 pm
0

Untitled design 2026 02 24T201348.036

ಗರ್ಭಕಂಠದ ಕ್ಯಾನ್ಸರ್‌ಗೆ ಬ್ರೇಕ್: ದೇಶಾದ್ಯಂತ 14 ವರ್ಷದ ಬಾಲಕಿಯರಿಗೆ ಉಚಿತ HPV ಲಸಿಕೆ

by ಯಶಸ್ವಿನಿ ಎಂ
February 24, 2026 - 8:21 pm
0

Untitled design 2026 02 24T195219.082

ಉದಯಪುರದಲ್ಲಿ ‘ವಿರೋಶ್’ ವಿವಾಹ ಮಹೋತ್ಸವ: ಅತಿಥಿಗಳಿಗೆ ಜಪಾನೀಸ್ ಖಾದ್ಯದ ಔತಣ

by ಯಶಸ್ವಿನಿ ಎಂ
February 24, 2026 - 7:56 pm
0

ಮದ್ಯಪಾನ ಆರೋಗ್ಯಕ್ಕೆ ಹಾನಿಕರ (3)

ಧಾರವಾಡ ಪ್ರತಿಭಟನೆಗೆ ಮಣಿದ ಸರ್ಕಾರ: 24,300 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

by ಯಶಸ್ವಿನಿ ಎಂ
February 24, 2026 - 7:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 24T205319.965
    ಅಂಗನವಾಡಿ ಮಕ್ಕಳಿಗೆ ಸರ್ಕಾರದ ದೊಡ್ಡ ಶಾಕ್, ಮಾರ್ಚ್ 2ಕ್ಕೆ ಬೆಂಗಳೂರು ಚಲೋ!
    February 24, 2026 | 0
  • Untitled design 2026 02 24T201348.036
    ಗರ್ಭಕಂಠದ ಕ್ಯಾನ್ಸರ್‌ಗೆ ಬ್ರೇಕ್: ದೇಶಾದ್ಯಂತ 14 ವರ್ಷದ ಬಾಲಕಿಯರಿಗೆ ಉಚಿತ HPV ಲಸಿಕೆ
    February 24, 2026 | 0
  • ಮದ್ಯಪಾನ ಆರೋಗ್ಯಕ್ಕೆ ಹಾನಿಕರ (3)
    ಧಾರವಾಡ ಪ್ರತಿಭಟನೆಗೆ ಮಣಿದ ಸರ್ಕಾರ: 24,300 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
    February 24, 2026 | 0
  • ಮದ್ಯಪಾನ ಆರೋಗ್ಯಕ್ಕೆ ಹಾನಿಕರ (1)
    ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ: ಖಾಲಿ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಭರವಸೆ
    February 24, 2026 | 0
  • ಮದ್ಯಪಾನ ಆರೋಗ್ಯಕ್ಕೆ ಹಾನಿಕರ
    ಮಹಾರಾಷ್ಟ್ರದಲ್ಲಿ ʼಡ್ರೈ ಡೇʼಗೆ ಗುಡ್‌ಬೈ! ಹೋಳಿ-ಗಾಂಧಿ ಜಯಂತಿಯಂದೂ ಸಿಗಲಿದೆ ಮದ್ಯ !
    February 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version