ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ: ಆರೇಂಜ್ ಅಲರ್ಟ್!

Your paragraph text (7)

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

ನಿನ್ನೆ ರಾತ್ರಿ ಗುಡುಗು ಮತ್ತು ಬಿರುಗಾಳಿಯೊಂದಿಗೆ ಸುರಿದ ಮಳೆಯಿಂದಾಗಿ ಬೆಂಗಳೂರಿನಲ್ಲಿ ಈಗಾಗಲೇ ಹಲವು ಅವಾಂತರಗಳು ಸೃಷ್ಟಿಯಾಗಿವೆ. ರಸ್ತೆಗಳಲ್ಲಿ ಜಲಾವೃತ, ಟ್ರಾಫಿಕ್ ಜಾಮ್, ಮತ್ತು ಕೆಲವೆಡೆ ಮರಗಳು ಧರೆಗುರುಳಿದ ಘಟನೆಗಳು ವರದಿಯಾಗಿವೆ. ಈಗ, ಮತ್ತಷ್ಟು ಭಾರೀ ಮಳೆಯ ಸಾಧ್ಯತೆಯಿಂದಾಗಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಮಳೆಯ ವಿವರಗಳು:

ಬೆಂಗಳೂರಿನಲ್ಲಿ 11 ಸೆಂ.ಮೀಯಿಂದ 20 ಸೆಂ.ಮೀವರೆಗೆ ಮಳೆಯಾಗುವ ಸಾಧ್ಯತೆ ಇದೆ. ನಗರದ ಹಲವೆಡೆ ಗುಡುಗುಸಹಿತ ಮಳೆಯಾಗಲಿದೆ. ಕೆಲವೆಡೆ ಸಾಧಾರಣ ಮಳೆಯಾಗಲಿದೆ. ಕೆಲವೆಡೆ ಗಂಟೆಗೆ 30-40 ಕೀ.ಮೀ ವೇಗದಲ್ಲಿ ಗಾಳಿ ಬೀಸಲಿದೆ.

ನಗರದ ಕೆಲವು ಭಾಗಗಳಲ್ಲಿ ಜಲಾವೃತಗೊಳ್ಳುವ ಸಾಧ್ಯತೆಯಿದ್ದು, ಜನರು ಅಗತ್ಯ ಮುಂಜಾಗ್ರತೆ ವಹಿಸುವಂತೆ ಇಲಾಖೆ ಸೂಚಿಸಿದೆ.

Exit mobile version