ಬೆಂಗಳೂರಿನ ನಗರ್ತಪೇಟೆಯ ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯೊಂದರಲ್ಲಿ ಮುಂಜಾನೆ 3:30ರ ಸುಮಾರಿಗೆ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಉಂಟಾಗಿರುವ ಶಂಕೆಯಿದೆ. ಈ ದುರಂತದಲ್ಲಿ ಒಬ್ಬ ಕಾರ್ಮಿಕ ಸಜೀವದಹನವಾಗಿದ್ದು, ಇಬ್ಬರು ಸಿಲುಕಿರುವ ಸಾಧ್ಯತೆಯಿದೆ.
ಶಾರ್ಟ್ ಸರ್ಕ್ಯೂಟ್‌ನಿಂದ ಈ ಅವಘಡ ಆಗಿರಬಹುದು ಎಂದು ಶಂಕಿಸಲಾಗಿದೆ. ಓರ್ವ ಸಜೀವದಹನವಾಗಿದ್ದು, ಮೂವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಿದ್ದಾರೆ. ಅಪಾರ ವಸ್ತುಗಳು ಸುಟ್ಟು ಹೋಗಿದ್ದು, ಭಾರಿ ನಷ್ಟವಾಗಿದೆ. ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
