ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ದಿನೇ ದಿನೇ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಲೇ ಇವೆ. ಬೆಂಗಳೂರಿನ ಸೋಲದೇವನಹಳ್ಳಿಯಲ್ಲಿ ಪಿಜಿ ಮಾಲೀಕನಿಂದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆದಿದೆ.
ಸೋಲದೇವನಹಳ್ಳಿಯ ಒಂದು ಪಿಜಿಯಲ್ಲಿ ವಾಸವಾಗಿದ್ದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳ ಮೇಲೆ ಪಿಜಿ ಮಾಲೀಕ ಅಶ್ರಫ್ ಎಂಬಾತ ಅತ್ಯಾಚಾರ ಎಸಗಿದ್ದಾನೆ. ವಿದ್ಯಾರ್ಥಿನಿ ಪಿಜಿಗೆ ಸೇರಿದ ಕೇವಲ 10 ದಿನಗಳಲ್ಲಿ ಈ ಘಟನೆ ನಡೆದಿದೆ. ಶನಿವಾರ ತಡರಾತ್ರಿ, ಆರೋಪಿ ಅಶ್ರಫ್ ವಿದ್ಯಾರ್ಥಿನಿಯನ್ನು ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಈ ಕೃತ್ಯವೆಸಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಸಂತ್ರಸ್ತೆ ಸೋಲದೇವನಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಆರೋಪಿ ಅಶ್ರಫ್‌ನನ್ನು ಬಂಧಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದ್ದು, ವಿದ್ಯಾರ್ಥಿನಿಯ ಸುರಕ್ಷತೆಗೆ ಸಂಬಂಧಿಸಿದಂತೆ ಸ್ಥಳೀಯ ಸಮುದಾಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಈ ಘಟನೆಯು ಪಿಜಿಗಳಲ್ಲಿ ವಿದ್ಯಾರ್ಥಿಗಳ, ವಿಶೇಷವಾಗಿ ಮಹಿಳೆಯರ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ.





