ಬೆಂಗಳೂರು: ಬೆಂಗಳೂರಿನ ವೈಟ್‌ಫೀಲ್ಡ್‌ನ ಬಳಗೆರೆ ಟಿ ಜಂಕ್ಷನ್‌ನಿಂದ ಪಣತ್ತೂರು ರೈಲ್ವೆ ಬ್ರಿಡ್ಜ್‌ವರೆಗೆ ಬಿಬಿಎಂಪಿ (BBMP) ವತಿಯಿಂದ ವೈಟ್ ಟಾಪಿಂಗ್ ಕಾಮಗಾರಿ ನಡೆಯಲಿದೆ. ಈ ಕಾರಣದಿಂದ ಇಂದಿನಿಂದ (ಆಗಸ್ಟ್ 6) ಆಗಸ್ಟ್ 11ರವರೆಗೆ (ರಾತ್ರಿ 11 ಗಂಟೆಯಿಂದ ಭಾನುವಾರ ರಾತ್ರಿ 11 ಗಂಟೆಯವರೆಗೆ) ಈ ಮಾರ್ಗದಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿದ್ದು, ಸಾರ್ವಜನಿಕರು ಸಹಕರಿಸುವಂತೆ ಕೋರಿದ್ದಾರೆ.
ವಾಹನ ಸಂಚಾರ ನಿರ್ಬಂಧಿಸಿದ ರಸ್ತೆಗಳಾವುವು?
-
ಮಾರ್ಗ: ಬಳಗೆರೆ ಟಿ ಜಂಕ್ಷನ್‌ನಿಂದ ಪಣತ್ತೂರು ರೈಲ್ವೆ ಬ್ರಿಡ್ಜ್ ಜಂಕ್ಷನ್‌ವರೆಗೆ
ADVERTISEMENTADVERTISEMENT
ಪರ್ಯಾಯ ಮಾರ್ಗಗಳು ಯಾವುವು?
-
- ಪಣತ್ತೂರು ಕಡೆಯಿಂದ ಬಳಗೆರೆ ಕಡೆಗೆ:
ವಾಹನ ಸವಾರರು ಪಣತ್ತೂರು ದಿಣ್ಣೆ ರಸ್ತೆಯ ಮೂಲಕ ಚಲಿಸಿ, ಪಣತ್ತೂರು ದಿಣ್ಣೆ ಬಳಿ ಎಡಗಡೆ ತಿರುವು ಪಡೆದು ಸಿಲ್ವರ್ ಓಕ್ ರಸ್ತೆಯಿಂದ ಬಳಗೆರೆ, ವಿಬ್‌ಗಯಾರ್ ರಸ್ತೆ, ಮತ್ತು ವರ್ತೂರು ಕಡೆಗೆ ಸಂಚರಿಸಬಹುದು. - ಬಳಗೆರೆ ಟಿ ಜಂಕ್ಷನ್‌ನಿಂದ ಪಣತ್ತೂರು ಕಡೆಗೆ:
ವಾಹನ ಸವಾರರು ಪಣತ್ತೂರು ದಿಣ್ಣೆ ರಸ್ತೆ, ವಿಬ್‌ಗಯಾರ್ ರಸ್ತೆ ಮೂಲಕ ಮಾರತ್ತಹಳ್ಳಿ ಬ್ರಿಡ್ಜ್‌ನಿಂದ ಪಣತ್ತೂರು ಕಡೆಗೆ ಚಲಿಸಬಹುದು.
- ಪಣತ್ತೂರು ಕಡೆಯಿಂದ ಬಳಗೆರೆ ಕಡೆಗೆ:
#ಸಂಚಾರಸಲಹೆ#TrafficAdvisory @DgpKarnataka @KarnatakaCops @CPBlr @Jointcptraffic @BlrCityPolice @blrcitytraffic @acpwfieldtrf @acpeasttraffic @mahadevapuratrf @halairporttrfps @KRPURATRAFFIC @wftrps @bwaditrafficps @ftowntrfps @jbnagartrfps @halasoortrfps @kghallitrfps… pic.twitter.com/mqxlviMpdo
— DCP Traffic East ಉಪ ಪೊಲೀಸ್ ಆಯುಕ್ತರು ಸಂಚಾರ ಪೂರ್ವ (@DCPTrEastBCP) August 5, 2025
ಇತರೆ ಸಂಚಾರ ತೊಂದರೆಗಳು
- ಸೋನಿ ವರ್ಲ್ಡ್ ಜಂಕ್ಷನ್: ವಾಹನ ಕೆಟ್ಟು ನಿಂತಿರುವ ಕಾರಣ ಶ್ರೀನಿವಾಗಿಲು ಕಡೆಗೆ ನಿಧಾನಗತಿಯ ಸಂಚಾರ ಇರಲಿದೆ.
- ಮಾರುಕಟ್ಟೆ ವೃತ್ತ: ವಾಹನ ಕೆಟ್ಟು ನಿಂತಿರುವುದರಿಂದ ಮೈಸೂರು ರಸ್ತೆ ಕಡೆಗೆ ನಿಧಾನಗತಿಯ ಸಂಚಾರ ಇರಲಿದೆ.
- ಸಿ.ಎಂ.ಟಿ.ಐ ಜಂಕ್ಷನ್: ನಗರದ ಕಡೆಗೆ ಸಂಚಾರ ನಿಧಾನಗತಿಯಲ್ಲಿ ಸಾಗಲಿದೆ.
ಬೆಂಗಳೂರು ಸಂಚಾರ ಪೊಲೀಸರು ವಾಹನ ಸವಾರರಿಗೆ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸೂಚಿಸಿದ್ದಾರೆ ಮತ್ತು ಸಂಚಾರ ನಿರ್ಬಂಧಕ್ಕೆ ಸಹಕರಿಸುವಂತೆ ಕೋರಿದ್ದಾರೆ.