ಬೆಂಗಳೂರಿನ ಈ ಮಾರ್ಗದಲ್ಲಿ ಇಂದಿನಿಂದ ಆ.11ರವರೆಗೆ ವಾಹನ ಸಂಚಾರ ನಿರ್ಬಂಧ!

Untitled design (40)

ಬೆಂಗಳೂರು: ಬೆಂಗಳೂರಿನ ವೈಟ್‌ಫೀಲ್ಡ್‌ನ ಬಳಗೆರೆ ಟಿ ಜಂಕ್ಷನ್‌ನಿಂದ ಪಣತ್ತೂರು ರೈಲ್ವೆ ಬ್ರಿಡ್ಜ್‌ವರೆಗೆ ಬಿಬಿಎಂಪಿ (BBMP) ವತಿಯಿಂದ ವೈಟ್ ಟಾಪಿಂಗ್ ಕಾಮಗಾರಿ ನಡೆಯಲಿದೆ. ಈ ಕಾರಣದಿಂದ ಇಂದಿನಿಂದ (ಆಗಸ್ಟ್ 6) ಆಗಸ್ಟ್ 11ರವರೆಗೆ (ರಾತ್ರಿ 11 ಗಂಟೆಯಿಂದ ಭಾನುವಾರ ರಾತ್ರಿ 11 ಗಂಟೆಯವರೆಗೆ) ಈ ಮಾರ್ಗದಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿದ್ದು, ಸಾರ್ವಜನಿಕರು ಸಹಕರಿಸುವಂತೆ ಕೋರಿದ್ದಾರೆ.

ವಾಹನ ಸಂಚಾರ ನಿರ್ಬಂಧಿಸಿದ ರಸ್ತೆಗಳಾವುವು?

ಪರ್ಯಾಯ ಮಾರ್ಗಗಳು ಯಾವುವು?

    1. ಪಣತ್ತೂರು ಕಡೆಯಿಂದ ಬಳಗೆರೆ ಕಡೆಗೆ:
      ವಾಹನ ಸವಾರರು ಪಣತ್ತೂರು ದಿಣ್ಣೆ ರಸ್ತೆಯ ಮೂಲಕ ಚಲಿಸಿ, ಪಣತ್ತೂರು ದಿಣ್ಣೆ ಬಳಿ ಎಡಗಡೆ ತಿರುವು ಪಡೆದು ಸಿಲ್ವರ್ ಓಕ್ ರಸ್ತೆಯಿಂದ ಬಳಗೆರೆ, ವಿಬ್‌ಗಯಾರ್ ರಸ್ತೆ, ಮತ್ತು ವರ್ತೂರು ಕಡೆಗೆ ಸಂಚರಿಸಬಹುದು.
    2. ಬಳಗೆರೆ ಟಿ ಜಂಕ್ಷನ್‌ನಿಂದ ಪಣತ್ತೂರು ಕಡೆಗೆ:
      ವಾಹನ ಸವಾರರು ಪಣತ್ತೂರು ದಿಣ್ಣೆ ರಸ್ತೆ, ವಿಬ್‌ಗಯಾರ್ ರಸ್ತೆ ಮೂಲಕ ಮಾರತ್ತಹಳ್ಳಿ ಬ್ರಿಡ್ಜ್‌ನಿಂದ ಪಣತ್ತೂರು ಕಡೆಗೆ ಚಲಿಸಬಹುದು.

ಇತರೆ ಸಂಚಾರ ತೊಂದರೆಗಳು

ಬೆಂಗಳೂರು ಸಂಚಾರ ಪೊಲೀಸರು ವಾಹನ ಸವಾರರಿಗೆ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸೂಚಿಸಿದ್ದಾರೆ ಮತ್ತು ಸಂಚಾರ ನಿರ್ಬಂಧಕ್ಕೆ ಸಹಕರಿಸುವಂತೆ ಕೋರಿದ್ದಾರೆ.

Exit mobile version