• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಆನೆ ದಾಳಿಯಿಂದ ಇಬ್ಬರು ಸಾವು: ಶೋಕ ವ್ಯಕ್ತಪಡಿಸಿದ ಈಶ್ವರ ಖಂಡ್ರೆ

ಆನೆದಾಳಿಯಿಂದ ಇಬ್ಬರು ಸಾವು: ಶೋಕ ವ್ಯಕ್ತಪಡಿಸಿದ ಈಶ್ವರ ಖಂಡ್ರೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 25, 2025 - 3:09 pm
in Flash News, ಬೀದರ್
0 0
0
Eshwara Khandre

ಬೀದರ್ : ರಾಜ್ಯದಲ್ಲಿ ಕಾಡಾನೆ ದಾಳಿಗೆ ನಿನ್ನೆ ಮತ್ತು ಇಂದು ಇಬ್ಬರು ಸಾವಿಗೀಡಾಗಿರುವ ಬಗ್ಗೆ ತೀವ್ರ ಆಘಾತ ಮತ್ತು ಶೋಕ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ, ಸಾರ್ವಜನಿಕರು ಇಲಾಖೆಯ ಮುನ್ನೆಚ್ಚರಿಕೆಗೆ ಸ್ಪಂದಿಸಬೇಕು ಎಂದು ಮನವಿ ಮಾಡಿದ್ದಾರೆ.

ನಿನ್ನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ಒಬ್ಬ ಯುವಕ ಮತ್ತು ಇಂದು ಕೋಲಾರ ಜಿಲ್ಲೆ ಕಾನಸಮುದ್ರದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದು ತೀವ್ರ ನೋವು ತಂದಿದೆ. ಮೃತರ ಕುಟುಂಬದೊಂದಿಗೆ ಸರ್ಕಾರ ಇದೆ. ಅವರ ನೋವಿನಲ್ಲಿ ನಾವೂ ಭಾಗಿಯಾಗಿದ್ದೇವೆ ಎಂದು ತಿಳಿಸಿದ್ದಾರೆ.

RelatedPosts

ಅಮೆರಿಕ-ಇರಾನ್ ಸಂಧಾನ ಮಾತುಕತೆ ವಿಫಲವಾದ ಬೆನ್ನೆಲೆ ಚಿನ್ನ-ಬೆಳ್ಳಿ ಬೆಲೆ ಮತ್ತೆ ಇಳಿಕೆ

ಇರಾನ್ ಮತ್ತೆ ಮಾತುಕತೆಗೆ ಬರಲಿ ಬಿಡಲಿ ನನಗಿಷ್ಟವಿಲ್ಲ: ಡೊನಾಲ್ಡ್ ಟ್ರಂಪ್

ದೇಶದ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ದರ ಎಷ್ಟು? ಇಲ್ಲಿ ಚೆಕ್‌ ಮಾಡಿ

ಕರ್ನಾಟಕದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ: ಕರಾವಳಿಯಲ್ಲಿ ಹೆಚ್ಚಲಿದೆ ಬಿಸಿಲ ಧಗೆ

ADVERTISEMENT
ADVERTISEMENT

ಮೃತರ ಹತ್ತಿರದ ಸಂಬಂಧಿಕರಿಗೆ ಕೂಡಲೇ ಪರಿಹಾರದ ಮೊತ್ತ ನೀಡಲು ಸೂಚಿಸಲಾಗಿದೆ. ಈ ಎಲ್ಲ ದುರ್ಘಟನೆಗಳು ಬೆಳಗಿನ ಹೊತ್ತು ಮತ್ತು ಸಂಜೆಯ ವೇಳೆ ಸಂಭವಿಸುತ್ತಿವೆ. ಕಾಡಿನಂಚಿನ ಜನರು ಅರಣ್ಯ ಇಲಾಖೆಯು ಆನೆಗಳ ಚಲನವಲನದ ಬಗ್ಗೆ ನೀಡುವ ಸಂದೇಶಕ್ಕೆ ಸ್ಪಂದಿಸಿ, ಜಾಗರೂಕರಾಗಿರಬೇಕು ಎಂದು ಅರಣ್ಯ ಸಚಿವರು ತಿಳಿಸಿದ್ದಾರೆ.

ಸರ್ಕಾರದಿಂದ ಸರ್ವ ಪ್ರಯತ್ನ

ಆನೆ-ಮಾನವ ಸಂಘರ್ಷ, ವನ್ಯಜೀವಿ ಮಾನವ ಸಂಘರ್ಷ ಇಂದು ನಿನ್ನೆಯ ಸಮಸ್ಯೆಯಲ್ಲ, ಸಾವಿರಾರು ವರ್ಷಗಳಿಂದಲೂ ಇದೆ. ಅರಣ್ಯ ಪ್ರದೇಶ ಕ್ಷೀಣಿಸುತ್ತಿದ್ದು, ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳ ಸಮಸ್ಯೆ ಉಲ್ಬಣವಾಗುವಂತೆ ಮಾಡಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

2024-25ನೇ ಸಾಲಿನಲ್ಲಿ 203 ಕಿ.ಮೀ. ರೈಲ್ವೆ ಬ್ಯಾರಿಕೇಡ್

ರಾಜ್ಯ ಸರ್ಕಾರ ವನ್ಯಜೀವಿ- ಮಾನವ ಸಂಘರ್ಷ ನಿಯಂತ್ರಿಸಲು ಟೆಂಟಕಲ್ ಫೆನ್ಸಿಂಗ್, ಸೌರ ಬೇಲಿ, ಆನೆ ಕಂದಕ ನಿರ್ಮಿಸಿ, ನಿರ್ವಹಿಸುತ್ತಿರುವುದರ ಜೊತೆಗೆ ರೈಲ್ವೆ ಬ್ಯಾರಿಕೇಡ್ ಸಹ ಹಾಕುತ್ತಿದೆ. 2024-25ನೇ ಸಾಲಿನಲ್ಲಿ 78.917 ಕಿ.ಮೀ ರೈಲ್ವೆ ಬ್ಯಾರಿಕೇಡ್ ಕಾಮಗಾರಿ ಪೂರ್ಣಗೊಂಡಿದ್ದು, 41.87 ಕಿ.ಮೀ. ಕಾಮಗಾರಿ ಪ್ರಗತಿಯಲ್ಲಿದೆ. ಇನ್ನೂ 103 ಕಿ.ಮೀ. ಗುರಿ ನಿಗದಿ ಮಾಡಲಾಗಿದ್ದು, ಮಾರ್ಚ್ 31ರೊಳಗೆ ಈ ಕಾಮಗಾರಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ದೇಶದಲ್ಲಿಯೇ ಅತಿ ಹೆಚ್ಚು 6395 ಆನೆಗಳು ರಾಜ್ಯದಲ್ಲಿವೆ, ಸರ್ಕಾರ ಪುಂಡಾನೆ ಹಾವಳಿ ತಡೆಗೆ ಮಾರ್ಗೋಪಾಯ ಕಂಡುಹಿಡಿಯಲು ನೆರೆ ರಾಜ್ಯಗಳ ಸಚಿವರೊಂದಿಗೆ ಸಭೆ ನಡಸಿದೆ, ಅಂತಾರಾಷ್ಟ್ರೀಯ ಸಮಾವೇಶ ನಡೆಸಿದೆ. ತಜ್ಞರ ಸಮಿತಿ ರಚಿಸಿ ಅಧ್ಯಯನ ನಡೆಸುತ್ತಿದೆ. ಆನೆ ಕಾರ್ಯಪಡೆಯನ್ನೂ ರಚಿಸಿದೆ. ಸಾರ್ವಜನಿಕರಿಗೆ ಸಕಾಲದಲ್ಲಿ ಆನೆಗಳ ಓಡಾಟದ ಬಗ್ಗೆ ಮಾಹಿತಿ ನೀಡುವ ಕಾರ್ಯ ಮಾಡುತ್ತಿದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಆನೆ ಧಾಮ ನಿರ್ಮಾಣ

ಕೊಡಗು, ಹಾಸನ, ಚಿಕ್ಕಮಗಳೂರು ಸುತ್ತಮುತ್ತ ಕಾಡಿನಿಂದ ಹೊರಬಂದು ಗುಂಪಾಗಿ ಸಂಚರಿಸುವ ಕೆಲವು ಆನೆಗಳಿಂದ ಸಮಸ್ಯೆ ಹೆಚ್ಚಾಗಿದೆ. ಹೀಗಾಗಿ 2ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭದ್ರಾ ಅಭಯಾರಣ್ಯದಲ್ಲಿ ಆನೆ ಧಾಮ ನಿರ್ಮಿಸಲು ಯೋಜಿಸಲಾಗಿದೆ. ಇಲ್ಲಿ ಆನೆಗಳಿಗೆ ಅಗತ್ಯ ಆಹಾರ, ನೀರು ಲಭ್ಯವಾಗುವಂತೆ ಕ್ರಮ ವಹಿಸಲು ಸೂಚಿಸಲಾಗಿದೆ. ಕಾಡಿನ ಹೊರಗೇ ಓಡಾಡುವ 150ಕ್ಕೂ ಹೆಚ್ಚು ಆನೆಗಳನ್ನು ಗುರುತಿಸಲಾಗಿದ್ದು, ಮಿನಿ ಖೆಡ್ಡಾ ಕಾರ್ಯಾಚರಣೆ ರೂಪದಲ್ಲಿ ಆನೆಗಳನ್ನು ಧಾಮಕ್ಕೆ ಕಳಿಸಬೇಕಾಗುತ್ತದೆ. ಆದರೆ ಇದಕ್ಕೆ ಕಾಲಾವಕಾಶ ಬೇಕಾಗುತ್ತದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಸಹಬಾಳ್ವೆ ಅನಿವಾರ್ಯ

ಜನಸಂಖ್ಯೆ ಹೆಚ್ಚಿದಂತೆಲ್ಲಾ ಕಾಡಿನಂಚಿನವರೆಗೆ ವಸತಿ ಪ್ರದೇಶಗಳ ವಿಸ್ತರಣೆ ಆಗಿದೆ. ಕಾಡಿನ ಅಂಚಿನಲ್ಲೇ ಕೃಷಿ ಚಟುವಟಿಕೆ ನಡೆಯುತ್ತದೆ. ಕಾಡಿನಂಚಿನ ಕೆರೆಗಳನ್ನು ತುಂಬಿಸುವ ಕಾರ್ಯವನ್ನು ಸರ್ಕಾರ ಮಾಡಿದೆ. ಹೀಗಾಗಿ ಆನೆಗಳು ಬಾಳೆ, ಹಲಸು, ಭತ್ತ ಇತ್ಯಾದಿ ಫಸಲು ತಿನ್ನಲು ನೀರು ಕುಡಿಯಲು ಊರಿಗೆ ಬರುತ್ತಿವೆ ಎಂದು ತಜ್ಞರು ಹೇಳುತ್ತಾರೆ. ಆದಾಗ್ಯೂ, ಆನೆಗಳು ನಾಡಿಗೆ ಬರಲು ಕಾರಣವೇನು ಎಂಬ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸೂಚಿಸಲಾಗಿದೆ. ಮಾನವ- ಆನೆ ಸಂಘರ್ಷ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 13T105220.736

ಅಮೆರಿಕ-ಇರಾನ್ ಸಂಧಾನ ಮಾತುಕತೆ ವಿಫಲವಾದ ಬೆನ್ನೆಲೆ ಚಿನ್ನ-ಬೆಳ್ಳಿ ಬೆಲೆ ಮತ್ತೆ ಇಳಿಕೆ

by ಶಾಲಿನಿ ಕೆ. ಡಿ
April 13, 2026 - 10:54 am
0

Untitled design 2026 04 13T102101.651

ಇರಾನ್ ಮತ್ತೆ ಮಾತುಕತೆಗೆ ಬರಲಿ ಬಿಡಲಿ ನನಗಿಷ್ಟವಿಲ್ಲ: ಡೊನಾಲ್ಡ್ ಟ್ರಂಪ್

by ಶಾಲಿನಿ ಕೆ. ಡಿ
April 13, 2026 - 10:22 am
0

Untitled design 2026 04 13T095350.674

ದೇಶದ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ದರ ಎಷ್ಟು? ಇಲ್ಲಿ ಚೆಕ್‌ ಮಾಡಿ

by ಶಾಲಿನಿ ಕೆ. ಡಿ
April 13, 2026 - 9:56 am
0

Untitled design 2026 04 13T085841.374

ಕರ್ನಾಟಕದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ: ಕರಾವಳಿಯಲ್ಲಿ ಹೆಚ್ಚಲಿದೆ ಬಿಸಿಲ ಧಗೆ

by ಶಾಲಿನಿ ಕೆ. ಡಿ
April 13, 2026 - 9:00 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 13T105220.736
    ಅಮೆರಿಕ-ಇರಾನ್ ಸಂಧಾನ ಮಾತುಕತೆ ವಿಫಲವಾದ ಬೆನ್ನೆಲೆ ಚಿನ್ನ-ಬೆಳ್ಳಿ ಬೆಲೆ ಮತ್ತೆ ಇಳಿಕೆ
    April 13, 2026 | 0
  • Untitled design 2026 04 13T102101.651
    ಇರಾನ್ ಮತ್ತೆ ಮಾತುಕತೆಗೆ ಬರಲಿ ಬಿಡಲಿ ನನಗಿಷ್ಟವಿಲ್ಲ: ಡೊನಾಲ್ಡ್ ಟ್ರಂಪ್
    April 13, 2026 | 0
  • Untitled design 2026 04 13T095350.674
    ದೇಶದ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ದರ ಎಷ್ಟು? ಇಲ್ಲಿ ಚೆಕ್‌ ಮಾಡಿ
    April 13, 2026 | 0
  • Untitled design 2026 04 13T085841.374
    ಕರ್ನಾಟಕದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ: ಕರಾವಳಿಯಲ್ಲಿ ಹೆಚ್ಚಲಿದೆ ಬಿಸಿಲ ಧಗೆ
    April 13, 2026 | 0
  • Untitled design 2026 04 13T084403.998
    ನೈಜೀರಿಯಾ ನಾಗರಿಕರ ಮೇಲೆ ವಾಯುಪಡೆ ಮಿಸ್‌ಫೈರ್‌: 100ಕ್ಕೂ ಹೆಚ್ಚು ಜನ ಬಲಿ
    April 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version