ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗೆ ಮತ್ತೊಂದು ಜೀವ ಬಲಿಯಾಗಿದೆ. ರೇಷ್ಮೆ ಸಂಸ್ಥೆ ಮೆಟ್ರೋ ಸ್ಟೇಷನ್ ಬಳಿ ಇಂದು ನಡೆದ ಘಟನೆಯಲ್ಲಿ, ಬಿಎಂಟಿಸಿ ಬಸ್‌ನ ಡಿಕ್ಕಿಯಿಂದ ಬೈಕ್‌ನ ಹಿಂಬದಿ ಕುಳಿತಿದ್ದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಬೈಕ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೆ.ಆರ್. ಮಾರ್ಕೆಟ್‌ನಿಂದ ಹಂಚಿಪುರ ಕಾಲೋನಿಗೆ ತೆರಳುತ್ತಿದ್ದ ಬಿಎಂಟಿಸಿ ಬಸ್, ರೇಷ್ಮೆ ಸಂಸ್ಥೆ ಮೆಟ್ರೋ ಸ್ಟೇಷನ್ ಬಳಿ ಬೈಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಈ ಘಟನೆಯಿಂದ ಬೈಕ್‌ನ ಹಿಂಬದಿ ಕುಳಿತಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಘಟನೆ ಸ್ಥಳಕ್ಕೆ ತಕ್ಷಣವೇ ಆಗಮಿಸಿದ ಪೊಲೀಸರು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇತ್ತೀಚಿನ BMTC ದುರಂತಗಳು:
ಕೇವಲ ಎರಡು ದಿನಗಳ ಹಿಂದೆ, ಜುಲೈ 20ರಂದು ಪೀಣ್ಯ 2ನೇ ಹಂತದಲ್ಲಿ ಬಿಎಂಟಿಸಿ ಬಸ್ ರಸ್ತೆಬದಿಯ ಕ್ಯಾಂಟೀನ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಯುವತಿಯೊಬ್ಬಳು ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದರು. ಈ ಘಟನೆಯ ಬೆನ್ನಲ್ಲೇ ರೇಷ್ಮೆ ಸಂಸ್ಥೆಯ ಈ ದುರಂತ ಸಂಭವಿಸಿದ್ದು, ಬಿಎಂಟಿಸಿ ಬಸ್‌ಗಳ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ನಗರದಲ್ಲಿ ಆಗಾಗ ಘಟಿಸುತ್ತಿರುವ ಇಂತಹ ಅಪಘಾತಗಳು ಸಾರ್ವಜನಿಕರಲ್ಲಿ ಆತಂಕವನ್ನು ಮೂಡಿಸಿವೆ.





