ಬೆಂಗಳೂರು: ಬೆಂಗಳೂರಿನ ಹೃದಯಭಾಗದಲ್ಲಿ ಇಂದು ಮುಂಜಾನೆ ಭಾರೀ ಅಪಘಾತ ಸಂಭವಿಸಿದ್ದು, ಬಿಎಂಟಿಸಿ ಬಸ್ ಒಂದು ಆಟೋ ಮತ್ತು ಬೈಕ್‌ಗೆ ಹಿಂಬದಿಯಿಂದ ಗುದ್ದಿದೆ. ನವರಂಗ್ ಸರ್ಕಲ್ ಬಳಿಯ ಸಿಗ್ನಲ್‌ನಲ್ಲಿ ದಟ್ಟಣೆಯ ನಡುವೆ ಈ ಘಟನೆ ನಡೆದಿದ್ದು, ಶಂಕರ್ ನಾಗ್ ನಿಲ್ದಾಣದಿಂದ ಮೆಜೆಸ್ಟಿಕ್ ಕಡೆಗೆ ಹೊರಟಿದ್ದ ಬಸ್ ನಿಯಂತ್ರಣ ತಪ್ಪಿದೆ. ಗುದ್ದಿದ ರಭಸಕ್ಕೆ ಆಟೋ ಮತ್ತು ಬೈಕ್ ಸಂಪೂರ್ಣ ಹಾನಿಗೊಳಗಾಗಿದ್ದು, ಬೈಕ್ ಸವಾರರು ಸಾವಿನಿಂದ ತಪ್ಪಿಸಿಕೊಂಡಿದ್ದಾರೆ. ಆದರೆ, ಆಟೋ ಚಾಲಕನ ಕಾಲಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬಸ್ ಚಾಲಕನ ನಿಯಂತ್ರಣ ತಪ್ಪಿ ಹಿಂಬದಿಯಿಂದ ಬಂದ ಬಸ್ ಮುಂಬದಿಯ ವಾಹನಗಳ ಮೇಲೆ ಗುದ್ದಿದೆ. ಸಿಗ್ನಲ್ ಬಳಿಯ ದಟ್ಟಣೆಯಿಂದಾಗಿ ಈ ಅಪಘಾತ ಸಂಭವಿಸಿದ್ದು, ಬಸ್ ಗುದ್ದಿದ ರಭಸಕ್ಕೆ ಆಟೋ ಮತ್ತು ಬೈಕ್ ಸಂಪೂರ್ಣ ಹಾನಿಗೊಳಗಾಗಿವೆ. ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ರಕ್ಷಿಸಿದ್ದಾರೆ. ಬೈಕ್ ಸವಾರರು ಕ್ಷಣಾರ್ಧದಲ್ಲಿ ಪಾರಾಗಿದ್ದು, ದೊಡ್ಡ ಅನಾಹುತ ತಪ್ಪಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಬಿಎಂಟಿಸಿ ಬಸ್ ಚಾಲಕ “ಬ್ರೇಕ್ ಹಿಡಿಯಲಿಲ್ಲ” ಎಂದು ಉಡಾಫೆ ಉತ್ತರ ನೀಡಿದ್ದಾನೆ.
ಸ್ಥಳಕ್ಕೆ ಸಂಚಾರಿ ಪೊಲೀಸರು ಬಂದು ಜಕಂಗೊಂಡ ಆಟೋ ತೆರವುಗೊಳಿಸಿದರು. ಈ ಘಟನೆಯ ಕುರಿತು ಇನ್ನಷ್ಟು ಮಾಹಿತಿ ಹೊರಬರಬೇಕಿದೆ.