ಬೆಂಗಳೂರು: ಬೆಂಗಳೂರಿನ ಪೀಣ್ಯ 2ನೇ ಹಂತದಲ್ಲಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಒಂದು ಭೀಕರ ಅಪಘಾತಕ್ಕೆ ಕಾರಣವಾಗಿದ್ದು, ಒಂದು ಮಗು ಸೇರಿ, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಿಗ್ಗೆ 8:45ಕ್ಕೆ ಸಂಭವಿಸಿದೆ.
ಪೀಣ್ಯ 2ನೇ ಹಂತದಲ್ಲಿ ಸಂಭವಿಸಿದ ಈ ದುರಂತದಲ್ಲಿ, ಬಿಎಂಟಿಸಿ ಎಲೆಕ್ಟ್ರಿಕ್ ಬಸ್ (ನೋಂದಣಿ ಸಂಖ್ಯೆ: KA-51AK4170) ಫುಟ್‌ಪಾತ್‌ಗೆ ಡಿಕ್ಕಿ ಹೊಡೆದು, ಅಲ್ಲಿದ್ದ ಕ್ಯಾಂಟೀನ್‌ಗೆ ಗುದ್ದಿದೆ. ಈ ಘಟನೆಯಲ್ಲಿ ಒಂದು ಮಗು ಸೇರಿ, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಸ್ ಮೆಜೆಸ್ಟಿಕ್‌ನಿಂದ ಪೀಣ್ಯ 2ನೇ ಹಂತಕ್ಕೆ ಸಂಚರಿಸುವ ರೂಟ್ 252/4ರಲ್ಲಿ ಡಿಪೋ 22ಕ್ಕೆ ಸೇರಿದ ಎಲೆಕ್ಟ್ರಿಕ್ ಬಸ್ ಆಗಿತ್ತು. ಘಟನೆಯ ಸಂದರ್ಭದಲ್ಲಿ, ಬಸ್ ಚಾಲಕ ಮತ್ತು ಕಂಡಕ್ಟರ್ ನಡುವೆ ಜಗಳವಾಗಿತ್ತು ಎಂದು ತಿಳಿದುಬಂದಿದೆ. ಕಂಡಕ್ಟರ್ ರಮೇಶ್ ಬಸ್ ಚಲಾಯಿಸುವಾಗ ಈ ದುರ್ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ.
ಹೆಚ್ಚಿನ ಮಾಹಿತಿಗಾಗಿ ಪೊಲೀಸ್ ತನಿಖೆಯನ್ನು ನಿರೀಕ್ಷಿಸಲಾಗಿದೆ.