ಮೆಟ್ರೋ ಪಿಲ್ಲರ್‌ಗೆ BMTC ಬಸ್ ಡಿಕ್ಕಿ, 15 ಪ್ರಯಾಣಿಕರಿಗೆ ಗಾಯ!

Web 2025 06 07t113921.794

ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ಬಿಎಂಟಿಸಿ (BMTC) ಬಸ್ ಒಂದು ಮೆಟ್ರೋ ಪಿಲ್ಲರ್‌ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರಣಕ್ಕೆ ಈ ದುರ್ಘಟನೆ ಸಂಭವಿಸಿದ್ದು, 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಈ ಘಟನೆಯಿಂದ ಮೈಸೂರು ರಸ্তೆಯಲ್ಲಿ ಕಿಲೋಮೀಟರ್‌ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿತ್ತು.

15ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಿಎಂಟಿಸಿ ಬಸ್, ಚಾಲಕನ ನಿಯಂತ್ರಣ ತಪ್ಪಿ ಮೈಸೂರು ರಸ್ತೆಯಲ್ಲಿರುವ ಮೆಟ್ರೋ ಪಿಲ್ಲರ್‌ಗೆ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಚಾಲಕ, ಕಂಡಕ್ಟರ್ ಸೇರಿದಂತೆ 15 ಪ್ರಯಾಣಿಕರು ಗಾಯಗೊಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಗಾಯಗೊಂಡವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಅಪಘಾತದಿಂದ ಮೈಸೂರು ರಸ್ತೆಯಲ್ಲಿ ಕಿಲೋಮೀಟರ್‌ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿತ್ತು, ಇದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಯಿತು. ಸ್ಥಳಕ್ಕೆ ಆಗಮಿಸಿದ ಸಂಚಾರ ಪೊಲೀಸರು ಕ್ರೇನ್ ಸಹಾಯದಿಂದ ಬಸ್‌ನ್ನು ತೆರವುಗೊಳಿಸಿದ್ದಾರೆ. ಪೊಲೀಸರು ಘಟನೆಯ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಚಾಲಕನ ದಿಢೀರ್ ನಿಯಂತ್ರಣ ತಪ್ಪಲು ಕಾರಣವೇನು ಎಂಬುದನ್ನು ತನಿಖೆಯಿಂದ ಕಂಡುಹಿಡಿಯಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Exit mobile version