ಚಿಕ್ಕಪೇಟೆಯಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಪೈಪೋಟಿ

ಗ್ಯಾರಂಟಿ ನ್ಯೂಸ್ ಮೂಡ್ ಆಫ್ ಕರ್ನಾಟಕ ಮೆಗಾ ಸರ್ವೆ

Film 2025 04 04t190141.506

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ ಹೇಗಿದೆ ಅನ್ನೋದ್ರ ಕುರಿತಾಗಿ ಜನರ ನಾಡಿಮಿಡಿತ ಗ್ರಹಿಸುವ ಕೆಲಸ ಮಾಡ್ತಿದೆ.

ಈ ಪೈಕಿ ಬೆಂಗಳೂರು ನಗರ ಮಧ್ಯ ಭಾಗದ ಕ್ಷೇತ್ರವಾದ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರಕ್ಕೆ 2023ರಲ್ಲಿ ನಡೆದ ವಿಧಾನಸಭಾ ಚುನವಣೆಯಲ್ಲಿ ಕಾಂಗ್ರೆಸ್ನ ನೇರ ಪೈಪೋಟಿಯ ನಡುವೆ ಬಿಜೆಪಿಯ ಉದಯ್ ಗರುಡಾಚಾರ್ ರವರು 57,299 (44 %) ಮತಗಳಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್ ನಿಂದ ಸ್ಫರ್ಧಿಸಿದ್ದ ಆರ್ ವಿ ದೇವರಾಜು 45186 (35%), ಪಕ್ಷೇತರ ಅಭ್ಯರ್ಥಿ ಕೆಜಿಎಫ್ ಬಾಬು-20,931 (16%) ಮತಗಳಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಹೊಡೆತ ನೀಡಿದ್ದರು.

ಚಿಕ್ಕಪೇಟೆ ಕ್ಷೇತ್ರದ ಚಿತ್ರಣ..

ಈ ಕ್ಷೇತ್ರದ ವಿಶೇಷವೆಂದರೆ ನಗರದ ವ್ಯಾಪಾರ ಸ್ಥಳವಾಗಿದ್ದು, ಇಲ್ಲಿ ರಾಜಸ್ತಾನಿ, ಗುಜರಾತ್ ವ್ಯಾಪಾರಿಗಳು, ತೆಲುಗು, ತಮಿಳ ಮತ ಹೆಚ್ಚು. ಈ ಕ್ಷೇತ್ರದಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ನೇರ ಪೈಪೋಟಿ ಇದ್ದು, 1994 ರಿಂದಲೂ ಬಿಜೆಪಿಯೇ ಪ್ರಾಬಲ್ಯ ಹೊಂದಿದೆ. 2018ರಲ್ಲಿ ಸ್ಪರ್ಧಿಸಿದ್ದ ಗೆದ್ದಿದ್ದ ಉದಯ್ ಗರುಡಾಚಾರ್ ಗೆ, 2023ರಲ್ಲೂ ಗೆಲುವು ಸಾಧಿಸಿದ್ದರು. ಕಾಂಗ್ರೆಸ್ ನಿಂದ ಹೊರ ನಡೆದ ಬ್ರಿಜೇಷ್ ಕಾಳಪ್ಪ AAP ಸೇರಿದ ಕಾರಣ ಮತ ವಿಭಜನೆಯಾಗಿ ಕಾಂಗ್ರೆಸ್ ಗೆ ಹಿನ್ನಡೆಯಾಗಿದೆ.

 

ಜನರ ಒಲವು ಈಗಲೂ ಯಾರ ಕಡೆ?

ಉದಯ್ ಗರುಡಾಚಾರ್ ಗೆ ಬಿಜೆಪಿಯ ಹಿಂದುತ್ವದ ಮತಗಳ ಬಲದ ಜೊತೆಗೆ ಕೈ ಅಭ್ಯರ್ಥಿಗಳ ನಡುವಿನ ಬಣ ಬಡಿದಾಟವೇ ಲಾಭ. ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮುಂದುವರೆದ ಮತ್ತೆ ಇಲ್ಲಿ ಬಿಜೆಪಿ ಗೆಲ್ಲುವ ಸಾಧ್ಯತೆ ಹೆಚ್ಚು. ಕಾಂಗ್ರೆಸ್ ಗೆ ಗ್ಯಾರಂಟಿ ಯೋಜನೆ ಕೈ ಹಿಡಿದರು ಅಚ್ಚರಿವಿಲ್ಲ. ಜೊತೆಗೆ ಈ ಕ್ಷೇತ್ರದ ಮೇಲೆ ಹಿರಿಯ ಪೊಲೀಸ್ ಅಧಿಕಾರಿ ಸ್ಪರ್ಧೆಗೆ ತಯಾರಿ ಮಾಡುತ್ತಿದ್ದಾರೆ.

ಕ್ಷೇತ್ರದ ಆಕಾಂಕ್ಷಿಗಳು ಯಾರು..?

ವಿಧಾನಸಭೆ ಚುನಾವಣೆಗೆ ಆಕಾಂಕ್ಷಿಗಳು ಯಾರು ಎಂದು ನೋಡುವುದಾದರೆ ಬಿಜೆಪಿಯಿಂದ ಹಾಲಿ ಶಾಸಕ ಉದಯ್ ಗರುಡಾಚಾರ್ ಜೊತೆಗೆ ಮಾಜಿ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಸಹ ರೇಸ್ ನಲ್ಲಿ ಇದ್ದಾರೆ. ಕಾಂಗ್ರೆಸ್ ನಿಂದ ಆರ್ ವಿ ದೇವರಾಜ್, ಬ್ರಿಜೇಶ್ ಕಾಳಪ್ಪ ಮತ್ತು ಕೆಜಿಎಫ್ ಬಾಬು ಟಿಕೆಟ್ಗಾಗಿ ಲಾಬಿ ನಡೆಸುತ್ತಿದ್ದಾರೆ. ಜೆಡಿಎಸ್ ನಿಂದ ಇಮ್ರಾನ್ ಪಾಷಾ ಸರ್ಧೆ ಮಾಡಲು ಸಿದ್ಧತೆ ನೆಡೆಸುತ್ತಿದ್ದಾರೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

Exit mobile version