ಸರ್ಕಾರಿ ಕೆಲಸದ ಆಮಿಷ: ಸಂಸದ ಡಾ. ಕೆ. ಸುಧಾಕರ್‌ ಹೆಸರು ಬರೆದಿಟ್ಟು ಚಾಲಕ ಆತ್ಮಹ*ತ್ಯೆ!

ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಆತ್ಮಹ*ತ್ಯೆ!

0 (45)

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಕಚೇರಿಯ ಆವರಣದಲ್ಲಿ ಗುತ್ತಿಗೆ ಚಾಲಕನೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಇಂದು ಬೆಳಗಿನ ಜಾವ ನಡೆದಿದೆ. 33 ವರ್ಷದ ಬಾಬು ಎಂ. ಎಂಬ ಚಾಲಕ, ಸಂಸದ ಹಾಗೂ ಮಾಜಿ ಸಚಿವ ಡಾ. ಕೆ. ಸುಧಾಕರ್ ಅವರ ಹೆಸರನ್ನು ಡೆತ್ ನೋಟ್‌ನಲ್ಲಿ ಉಲ್ಲೇಖಿಸಿ, ಕಚೇರಿಯ ಆವರಣದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

8 ವರ್ಷಗಳಿಂದ ಚಾಲಕನಾಗಿ ಕಾರ್ಯನಿರ್ವಹಣೆ:

ಮೃತ ಬಾಬು ಎಂ. ಕಳೆದ 8 ವರ್ಷಗಳಿಂದ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿ ಕಚೇರಿಯ ಲೆಕ್ಕ ಪರಿಶೋಧನೆ ಇಲಾಖೆಯಲ್ಲಿ ಗುತ್ತಿಗೆ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಬಿಜೆಪಿ ಸಂಸದ ಡಾ. ಕೆ ಸುಧಾಕರ್ ಹಾಗೂ ಯುವಕರಿಬ್ಬರ ಹೆಸರು ಉಲ್ಲೇಖಿಸಿ ಡೆತ್‌ನೋಟ್ ಬರೆದಿಟ್ಟು  ಚಾಲಕ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಸರ್ಕಾರಿ ಕೆಲಸ ಕೊಡಿಸೋದಾಗಿ ಹೇಳಿ ಹಣ ಪಡೆದು ವಂಚನೆ ಎಸಗಿರುವ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ಚಿಕ್ಕಬಳ್ಳಾಪುರ ಅವರ ಬೆಂಬಲಿಗರಾದ, ನಾಗೇಶ್, ಮಂಜುನಾಥ್ ಹೆಸರು ಬರೆದಿಟ್ಟು ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಚಾಲಕ ಎಂ. ಬಾಬು ನೇಣಿಗೆ ಶರಣಾಗಿದ್ದಾರೆ.

ಘಟನೆಯ ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Exit mobile version