ತಂದೆಯಿಂದಲೇ ಬಾಲಕಿಗೆ ಅನ್ಯ ವ್ಯಕ್ತಿಯೊಂದಿಗೆ ಲೈಂಗಿಕ ಕ್ರಿಯೆಗೆ ಬಲವಂತ

1425 (22)
ADVERTISEMENT
ADVERTISEMENT

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೆಂಚಾಲರಹಳ್ಳಿ ಗ್ರಾಮದಲ್ಲಿ ತಂದೆಯೊಬ್ಬ ತನ್ನ ಸ್ವಂತ ಮಗಳಿಗೆ ದೌರ್ಜನ್ಯ ನಡೆಸಿ, ಅನ್ಯ ವ್ಯಕ್ತಿಯೊಂದಿಗೆ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ ಆಘಾತಕಾರಿ ಘಟನೆ ನಡೆದಿದೆ. ಈ ಘಟನೆಯಿಂದ ಇಡೀ ಗ್ರಾಮದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ತಂದೆಯ ಒತ್ತಾಯಕ್ಕೆ ಒಪ್ಪದ ಬಾಲಕಿಯನ್ನು ಆತ ದೈಹಿಕವಾಗಿ ಹಲ್ಲೆ ಮಾಡಿದ್ದಾನೆ. ಇದೇ ವೇಳೆ, ಬಾಲಕಿಯನ್ನು ಕೊಠಡಿಯೊಳಗೆ ಕೂಡಿಹಾಕಿ ಲೈಂಗಿಕವಾಗಿ ಪ್ರಚೋದಿಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ದೌರ್ಜನ್ಯ ಸಹಿಸಲಾರದ ಬಾಲಕಿ, ಧೈರ್ಯ ಮಾಡಿ 112 ತುರ್ತು ಸಂಖ್ಯೆಗೆ ಕರೆ ಮಾಡಿ ಸಹಾಯ ಕೋರಿದಳು.

ಕೆಂಚಾಲರಹಳ್ಳಿ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಸಂತ್ರಸ್ತ ಬಾಲಕಿಯನ್ನು ರಕ್ಷಿಸಿ, ಬಾಲಕಿಯನ್ನು ಚಿಕ್ಕಬಳ್ಳಾಪುರದ ಬಾಲಮಂದಿರದಲ್ಲಿ ಆರೈಕೆ ಮಾಡಲಾಗುತ್ತಿದೆ. ಆಕೆಯ ಸುರಕ್ಷತೆಗಾಗಿ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಕೆಂಚಾಲರಹಳ್ಳಿ ಪೊಲೀಸ್ ಠಾಣೆಯಲ್ಲಿ ತಂದೆಯ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಹಲ್ಲೆ ಆರೋಪದಡಿ ಪ್ರಕರಣ ದಾಖಲಾಗಿದೆ. ಈ ಘಟನೆಯ ಕುರಿತು ತನಿಖೆ ನಡೆಯುತ್ತಿದ್ದು, ಆರೋಪಿಯನ್ನು ಬಂಧಿಸಲು ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.

ಈ ಘಟನೆಯಿಂದ ಸ್ಥಳೀಯರು ಆಕ್ರೋಶಗೊಂಡಿದ್ದು, ಆರೋಪಿಗೆ ಕಠಿಣ ಶಿಕ್ಷೆಯಾಗಬೇಕೆಂದು ಒತ್ತಾಯಿಸಿದ್ದಾರೆ. ಬಾಲಕಿಯ ಧೈರ್ಯಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Exit mobile version