ಚಿನ್ನಸ್ವಾಮಿ ಕಾಲ್ತುಳಿತ ದುರಂತ: ಆರ್‌ಸಿಬಿ ಮ್ಯಾನೇಜ್‌ಮೆಂಟ್ ವಿರುದ್ಧ ಎಫ್‌ಐಆರ್ ದಾಖಲು

ಇನ್ಮುಂದೆ ಭಾರತದಲ್ಲೇ ತಯಾರಿ ಆಗಲಿವೆ ರಫೇಲ್ ಯುದ್ಧ ವಿಮಾನ (2)

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಐಪಿಎಲ್ 2025 ವಿಜಯೋತ್ಸವದ ಸಂಭ್ರಮಾಚರಣೆಯ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಅಭಿಮಾನಿಗಳು ಸಾವನ್ನಪ್ಪಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಆರ್‌ಸಿಬಿ ಮ್ಯಾನೇಜ್‌ಮೆಂಟ್ ವಿರುದ್ಧ ಕೊನೆಗೂ ಎಫ್‌ಐಆರ್ ದಾಖಲಾಗಿದೆ.

ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಘಟನೆ ಸಂಭವಿಸಿ 24 ಗಂಟೆಗಳ ನಂತರ ಈ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಎಫ್‌ಐಆರ್‌ನಲ್ಲಿ ಆರೋಪಿಗಳಾಗಿ ಎ1 ಆರ್‌ಸಿಬಿ ಮ್ಯಾನೇಜ್‌ಮೆಂಟ್, ಎ2 ಡಿಎನ್‌ಎ ಇವೆಂಟ್ ಮ್ಯಾನೇಜ್‌ಮೆಂಟ್, ಮತ್ತು ಎ3 ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ)ಯನ್ನು ಗುರುತಿಸಲಾಗಿದೆ. ಭಾರತೀಯ ದಂಡ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 105 (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ), 115 (ಸ್ವಯಂಪ್ರೇರಿತವಾಗಿ ಗಾಯಗೊಳಿಸುವಿಕೆ), ಮತ್ತು 118 (ಶಿಕ್ಷಾರ್ಹ ಕೃತ್ಯಕ್ಕೆ ಕಾರಣವಾಗುವಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ದುರಂತವು ಜನಸಂದಣಿಯ ನಿರ್ವಹಣೆಯಲ್ಲಿ ಗಂಭೀರ ಲೋಪವನ್ನು ಎತ್ತಿ ತೋರಿಸಿದ್ದು, ಆರ್‌ಸಿಬಿ ಮತ್ತು ಇವೆಂಟ್ ಆಯೋಜಕರ ಭದ್ರತಾ ವ್ಯವಸ್ಥೆಯ ಕೊರತೆಯ ಬಗ್ಗೆ ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿದೆ.

Exit mobile version